Anganwadi Recruitment 2025 : ಹಾಸನದಲ್ಲಿ 857 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ನೇಮಕಾತಿ
Anganwadi Recruitment 2025 : ಹಾಸನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿನ ವಿವಿಧ ತಾಲೂಕುಗಳಲ್ಲಿ ಅಂಗನವಾಡಿ 857 ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಮೆರಿಟ್, ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಏಪ್ರಿಲ್ 9 ಕೊನೆಯ ದಿನವಾಗಿರುತ್ತದೆ.
ವಿದ್ಯಾರ್ಹತೆ: ಅಂಗನವಾಡಿ ಕಾರ್ಯಕರ್ತರ ಹುದ್ದೆಗೆ ಅಭ್ಯರ್ಥಿಗಳು ಪಿಯುಸಿ ಪೂರ್ಣಗೊಳಿಸಿರಬೇಕು. ಅಂಗನವಾಡಿ ಸಹಾಯಕರ ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್ಎಸ್ಎಲ್ಸಿ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಗ್ರಾಮ/ತಾಲೂಕು, ನಗರದ ಖಾಯಂ/3 ವರ್ಷಕ್ಕಿಂತಲೂ ಹೆಚ್ಚು ಕಾಲದಿಂದ ಅಲ್ಲಿಯ ನಿವಾಸಿಯಾಗಿರಬೇಕು.
ವಯೋಮಿತಿ: ಕನಿಷ್ಠ 19ರಿಂದ 35 ವರ್ಷ. ವಿಶೇಷಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗೆ ಅಭ್ಯರ್ಥಿಗಳು https://karnemakaone.kar.nic.in/abcd/ ಇಲ್ಲಿಗೆ ಭೇಟಿ ನೀಡಿ.
* Current Recruitments : ಪ್ರಸ್ತುತ ನೇಮಕಾತಿಗಳು : ಪ್ರಸ್ತುತ ನೇಮಕಾತಿಗಳು