Friday, December 27, 2024
Latest:
Job AlertSpardha Times

ಶೀಘ್ರದಲ್ಲೇ 924 ವಿವಿಧ ಹುದ್ದೆಗಳ ನೇಮಕಾತಿ

Share With Friends

ನೇರ ನೇಮಕಾತಿ ಕೋಟಾದಡಿ ಖಾಲಿಯಿರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ 256 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ವೃಂದದ 220 ಹುದ್ದೆಗಳು, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-2 ವೃಂದದ 343 ಹುದ್ದೆಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದದ 105 ಹುದ್ದೆ ಸೇರಿ ಒಟ್ಟು 924ಹುದ್ದೆಗಳನ್ನು ನೇಮಕಾತಿ ಮಾಡಲು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗೇಡ್-1 ವೃಂದದ ಅರ್ಹ ನೌಕರರು ಲಭ್ಯವಾದಂತೆ ಜೇಷ್ಠತೆ ಮತ್ತು ಅರ್ಹತೆ ಆಧಾರದ ಮೇಲೆ ಮುಂಬಡ್ತಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಚಲಿತ ಘಟನೆಗಳ ಕ್ವಿಜ್ – 09 ಮತ್ತು 10-12-2023

ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1. ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್ -2 ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ರವರು ನೇಮಕಾತಿ ಪ್ರಾಧಿಕಾರ ಆಗಿದ್ದು ಖಾಳಿ ಹುದ್ದೆಗೆ ಎದುರಾಗಿ ಮುಂಬಡ್ತಿ / ಸೇವೆಯೊಳಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರದಿಂದ ಎಲ್ಲಾ ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

Leave a Reply

Your email address will not be published. Required fields are marked *

error: Content Copyright protected !!