ಕನ್ನಡದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಅವರ ‘ಹಾರ್ಟ್ ಲ್ಯಾಂಪ್’ ಕೃತಿಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ
Banu Mushtaq’s “Heart Lamp” wins International Booker Prize
ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ಅನುವಾದಕಿ ದೀಪಾ ಭಸ್ತಿ ‘ಹಾರ್ಟ್ ಲ್ಯಾಂಪ್’ ಇಂಗ್ಲಿಷ್ ಭಾಷೆಗೆ ಅನುವಾದಿಸಿದ್ದರು.
ಬೂಕರ್ ಪ್ರಶಸ್ತಿಗೆ ಬಾನು ಮುಷ್ತಾಕ್ ಅವರ ಇಂಗ್ಲಿಷ್ ಅನುವಾದಿತ ಕೃತಿ “ಹಾರ್ಟ್ ಲ್ಯಾಂಪ್” ಶಾರ್ಟ್ ಲಿಸ್ಟ್ಗೆ ಆಯ್ಕೆಯಾಗಿತ್ತು. ಬೂಕರ್ ಪ್ರಶಸ್ತಿಗಾಗಿ ಲಿಸ್ಟ್ ಆಗಿದ್ದ ಒಟ್ಟು 6 ಕೃತಿಗಳಲ್ಲಿ ಅಂತಿಮವಾಗಿ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರ ಕೃತಿ ಪ್ರಶಸ್ತಿಗೆ ಭಾಜನವಾಯಿತು. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು. ಬೂಕರ್ ಪ್ರಶಸ್ತಿಗೆ ಪಾತ್ರವಾಗಿರುವ ಬಾನು ಮುಷ್ತಾಕ್ ಅವರ ಹಸೀನಾ ಮತ್ತು ಇತರ ಕತೆಗಳು ಕಥಾಸಂಕಲನವು ಮುಸ್ಲಿಂ ಸಮುದಾಯದ ಬಾಲಕಿಯರ ಮತ್ತು ಇತರ ಹೆಣ್ಣುಮಕ್ಕಳ ದೈನಂದಿನ ಜೀವನ ಕುರಿತದ್ದಾಗಿದೆ.
Highlights :
*ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ಗೆ ಪ್ರಶಸ್ತಿ
*‘ಹಸೀನಾ ಮತ್ತು ಇತರ ಕತೆಗಳು’ ಕೃತಿಯನ್ನು ಅನುವಾದಕಿ ದೀಪಾ ಭಸ್ತಿ ‘ಹಾರ್ಟ್ ಲ್ಯಾಂಪ್’ ಇಂಗ್ಲಿಷ್ ಭಾಷೆಗೆ ಅನುವಾದಿಸಿದ್ದರು.
*ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಈ ಹಣವನ್ನು ಬಾನು ಮುಷ್ತಾಕ್ ಮತ್ತು ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ದೀಪಾ ಭಸ್ತಿ ಅವರಿಗೆ ಹಂಚಲಾಗಿದೆ.
*ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.
*ದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.
ಪ್ರಶಸ್ತಿ ಮೊತ್ತ 50 ಸಾವಿರ ಪೌಂಡ್ :
ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಈ ಹಣವನ್ನು ಬಾನು ಮುಷ್ತಾಕ್ ಮತ್ತು ಕೃತಿಯನ್ನು ಇಂಗ್ಲಿಷ್‌ಗೆ ಅನುವಾದಿಸಿದ ದೀಪಾ ಭಸ್ತಿ ಅವರಿಗೆ ಹಂಚಲಾಗಿದೆ. ಪ್ರತಿ ಶಾರ್ಟ್‌ಲಿಸ್ಟ್ ಮಾಡಿದ ಇತರ ಶೀರ್ಷಿಕೆಗಳಿಗೆ 5,000 ಪೌಂಡ್ ಬಹುಮಾನ ನೀಡಲಾಗುತ್ತದೆ. ಈ ಮೊತ್ತವನ್ನು ಲೇಖಕ ಮತ್ತು ಅನುವಾದಕರು ಹಂಚಿಕೊಳ್ಳುತ್ತಾರೆ ಮತ್ತು ವಿಜೇತ ಕೃತಿಗೆ ಸಿಕ್ಕ ಬಹುಮಾನದ ಹಣವನ್ನು ಮುಷ್ತಾಕ್ ಮತ್ತು ಭಸ್ತಿ ನಡುವೆ ಹಂಚಲಾಗುತ್ತದೆ. ಅವರು ತಲಾ 25,000 ಪೌಂಡ್ ಪಡೆಯುತ್ತಾರೆ.
1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು. ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು.
ಲಂಡನ್ ನಲ್ಲಿ ಪ್ರಶಸ್ತಿ ಸ್ವೀಕರಿಸಿದ ಬಾನು ಮುಷ್ತಾಕ್:
ಸಣ್ಣ ಕಥಾ ಸಂಕಲನ ‘ಹಾರ್ಟ್ ಲ್ಯಾಂಪ್’ ಬರಹಕ್ಕಾಗಿ ಲಂಡನ್‌ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಂಗಳವಾರ ರಾತ್ರಿ ಲೇಖಕಿ ಮತ್ತು ವಕೀಲೆ ಬಾನು ಮುಷ್ತಾಕ್, ಅನುವಾದಕಿ ದೀಪಾ ಭಸ್ತಿ ಅವರೊಂದಿಗೆ ಪ್ರಶಸ್ತಿಯನ್ನು ಸ್ವೀಕರಿಸಿದರು. ಬಳಿಕ ಮಾತನಾಡಿದ ಮುಷ್ತಾಕ್, ತಮ್ಮ ಗೆಲುವನ್ನು ವೈವಿಧ್ಯತೆಯ ಗೆಲುವು ಎಂದು ಬಣ್ಣಿಸಿದರು.
ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್, ಇಟಾಲಿಯನ್ ಹಾಗೂ ಡ್ಯಾನಿಷ್ ಭಾಷೆಯ ತಲಾ ಒಂದು ಕೃತಿ ‘ಶಾರ್ಟ್ ಲಿಸ್ಟ್’ನಲ್ಲಿದ್ದವು. ಶಾರ್ಟ್ ಲಿಸ್ಟ್‌ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
ಆಯ್ಕೆ ಪ್ರಕ್ರಿಯೆ ಹೇಗೆ?:
ಲಾಂಗ್‌ಲಿಸ್ಟ್‌ನಲ್ಲಿರುವ 13 ಕೃತಿಗಳ ಪೈಕಿ 6 ಕೃತಿಗಳನ್ನು ಎರಡನೇ ಸುತ್ತಿಗೆ ಆಯ್ಕೆ ಮಾಡಿ ಏ.8ರಂದು ಘೋಷಿಸಲಾಗುತ್ತದೆ. ಈ ಸುತ್ತಿಗೆ ಆಯ್ಕೆಯಾದ ಪ್ರತಿ ಕೃತಿಗೆ 5,51,387 ರು. ಬಹುಮಾನ ಮೊತ್ತ ಸಿಗಲಿದೆ. ಇದು ಲೇಖಕ ಮತ್ತು ಅನುವಾದಕ ಇಬ್ಬರಿಗೂ ಹಂಚಿಕೆಯಾಗುತ್ತದೆ. ಎರಡನೇ ಸುತ್ತಿಗೆ ಆಯ್ಕೆಯಾದ 6 ಕೃತಿಗಳಲ್ಲಿ ಅಂತಿಮವಾಗಿ ಒಂದು ಕೃತಿಗೆ 2025ನೇ ಸಾಲಿನ ಬೂಕರ್‌ಪ್ರಶಸ್ತಿ ಘೋಷಿಸಲಾಗುತ್ತದೆ. ಮೇ 20ರಂದು ಲಂಡನ್‌ನ ಟೇಟ್ ಮಾಡರ್ನ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿಯ ಘೋಷಣೆ ನಡೆಯಲಿದೆ. ವಿಜೇತ ಲೇಖಕರಿಗೆ ಮತ್ತು ಅನುವಾದಕರಿಗೆ ತಲಾ 27,58,110 ರು. ಬಹುಮಾನ ಸಿಗಲಿದೆ.
ಬಾನು ಮುಷ್ತಾಕ್ ಪರಿಚಯ :
ಕರ್ನಾಟಕದ ಬಾನು ಮುಷ್ತಾಕ್ ಲೇಖಕಿ, ಹೋರಾಟಗಾರ್ತಿ, ವಕೀಲರಾಗಿಯೂ ಗುರುತಿಸಿಕೊಂಡಿದ್ದಾರೆ. 1970-80ರಲ್ಲಿ ಮುಷ್ತಾಕ್ ಪ್ರಗತಿಪರ ಪ್ರತಿಭಟನೆಯ ಸಾಹಿತ್ಯದ ಬರವಣಿಗೆಯನ್ನು ಅಳವಡಿಸಿಕೊಂಡವರು. ಜಾತಿ ಮತ್ತು ವರ್ಗ ವ್ಯವಸ್ಥೆಯ ಟೀಕೆ, ಬಂಡಾಯ ಸಾಹಿತ್ಯದ ಚಳವಳಿಯು ದಲಿತ ಮತ್ತು ಮುಸ್ಲಿಂ ಬರಹಗಾರರನ್ನು ಹುಟ್ಟುಹಾಕಿತು. ಮುಷ್ತಾಕ್ ಇಲ್ಲಿಯವರೆಗೆ ಆರು ಸಣ್ಣ ಕಥಾ ಸಂಕಲನಗಳು, ಒಂದು ಕಾದಂಬರಿ, ಒಂದು ಪ್ರಬಂಧ ಸಂಗ್ರಹ ಮತ್ತು ಒಂದು ಕವನ ಸಂಕಲನ ಬರೆದಿದ್ದಾರೆ.
ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿಗಳು ಸೇರಿದಂತೆ ಅವರ ಸಾಹಿತ್ಯ ಕೃತಿಗಳಿಗಾಗಿ ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರ ಅನೇಕ ಕಥೆಗಳು ಉರ್ದು, ಹಿಂದಿ, ತಮಿಳು ಮತ್ತು ಮಲಯಾಳಂ ಭಾಷೆಗಳಿಗೆ ಅನುವಾದಿಸಲ್ಪಟ್ಟಿದ್ದು, ಇಂಗ್ಲಿಷ್‌ಗೆ ಮೊದಲ ಪುಸ್ತಕ ಅನುವಾದ ‘ಹಾರ್ಟ್ ಲ್ಯಾಂಪ್’ 2025 ರಲ್ಲಿ ಪ್ರಕಟವಾಗಿದ್ದು, ಇದು ಪ್ಯಾರಿಸ್ ವಿಮರ್ಶೆಯಲ್ಲಿ ಪ್ರಕಟವಾಗಿದೆ.
ಮುಷ್ತಾಕ್ ಸಾಹಿತ್ಯವನ್ನು ಮೀರಿ, ಅವರು ಪತ್ರಕರ್ತೆಯಾಗಿ ಒಂಬತ್ತು ವರ್ಷಗಳನ್ನು ಕಳೆದಿದ್ದಾರೆ ಮತ್ತು ಹಾಸನ ನಗರ ಪುರಸಭೆಯಲ್ಲಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದಾರೆ. ಅವರ “ಕರಿ ನಾಗರಗಳು” ಕೃತಿಯು ಚಲನಚಿತ್ರ ನಿರ್ಮಾಪಕ ಗಿರೀಶ್ ಕಾಸರವಳ್ಳಿ ಅವರ ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಲನಚಿತ್ರ “ಹಸೀನಾ” (2004)ಗೆ ಸ್ಫೂರ್ತಿಯಾಗಿದೆ.
ಹೆಮ್ಮೆಯ ಕನ್ನಡತಿ ಬಾನು :
ಅಪ್ಪಟ ಕನ್ನಡತಿ ಆಗಿರುವ ಬಾನು ಅವರು ತಮ್ಮ ಬದುಕನ್ನು ಹೋರಾಟ, ಚಿಂತನೆ, ಬರವಣಿಗೆ ಮೂಲಕವೇ ರೂಪಿಸಿಕೊಂಡವರು. ಜನರೊಂದಿಗೆ ನಿರಂತರ ಒಡನಾಟ, ಅವರ ಬದುಕಿನ ಹಲವು ಆಯಾಮಗಳಲ್ಲಿ ಜತೆಗಿದ್ದು ಶಕ್ತಿಯಾಗುತ್ತಲೇ ಆ ಅನುಭವಕ್ಕೆ ಸಾಹಿತ್ಯ ರೂಪ ನೀಡಿ ಯಶಸ್ವಿಯು ಆದವರು. ಹಾಸನದಲ್ಲಿ ಜನಿಸಿ ಅಲ್ಲಿಯೇ ನೆಲೆಸಿರುವ ಬಾನು ಮುಸ್ತಾಕ್ ಅವರು ಲೇಖಕಿಯಾಗಿ, ಪತ್ರಕರ್ತೆಯಾಗಿ, ನ್ಯಾಯವಾದಿಯಾಗಿ ಕ್ರಿಯಾಶೀಲರು. ಲಂಕೇಶ್ ಪತ್ರಿಕೆಗೆ ಜಿಲ್ಲಾ ವರದಿಗಾರರಗಾಗಿ 9 ವರ್ಷ ಸೇವೆ ಸಲ್ಲಿಸಿದ್ದಾರೆ.
2022 ರಲ್ಲಿ ‘ಟೂಂಬ್ ಆಫ್ ಸ್ಯಾಂಡ್’ ಗಾಗಿ ಅಸ್ಕರ್ ಪ್ರಶಸ್ತಿ :
2022 ರಲ್ಲಿ, ಗೀತಾಂಜಲಿ ಶ್ರೀ ಮತ್ತು ಅನುವಾದಕ ಡೈಸಿ ರಾಕ್‌ವೆಲ್ ಮೊದಲ ಹಿಂದಿ ಕಾದಂಬರಿ ‘ಟೂಂಬ್ ಆಫ್ ಸ್ಯಾಂಡ್’ ಗಾಗಿ ಅಸ್ಕರ್ ಪ್ರಶಸ್ತಿಯನ್ನು ಗೆದ್ದರು, ಜೊತೆಗೆ ಪೆರುಮಾಳ್ ಮುರುಗನ್ ಅವರ ತಮಿಳು ಕಾದಂಬರಿ ‘ಪೈರ್’ ಅನ್ನು ಅನಿರುದ್ಧನ್ ವಾಸುದೇವನ್ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ, 2023 ರಲ್ಲಿ ದೀರ್ಘ ಪಟ್ಟಿಗೆ ಸೇರಿಸಲಾಯಿತು.
2022ರಲ್ಲಿ ಗೀತಾಂಜಲಿಗೆ ಒಲಿದಿದ್ದ ಬೂಕರ್ ಗರಿ:
2022ನೇ ಸಾಲಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ‘ಬೂಕರ್ ಪ್ರಶಸ್ತಿ’ಯು ಲೇಖಕಿ ಗೀತಾಂಜಲಿ ಶ್ರೀ ಅವರ ‘ಟಾಂಬ್ ಆಫ್ ಸ್ಯಾಂಡ್’ ಕಾದಂಬರಿಗೆ ಲಭಿಸಿತ್ತು. ಈ ಕೃತಿಯನ್ನು ಅಮೆರಿಕದ ಡೇಸಿ ರಾಕ್‌ವೆಲ್ ಇಂಗ್ಲಿಷ್‌ಗೆ ಅನುವಾದಿಸಿದ್ದರು. 50 ಸಾವಿರ ಪೌಂಡ್ ಮೌಲ್ಯದ ಸಾಹಿತ್ಯ ಪ್ರಶಸ್ತಿಗೆ ಜಗತ್ತಿನ ನಾನಾ ಭಾಗಗಳಿಂದ ಅನೇಕ ಮಹತ್ವದ ಪುಸ್ತಕಗಳು ಸ್ಪರ್ಧೆಯಲ್ಲಿದ್ದವು. ಆದರೆ ಅಂತಿಮವಾಗಿ, ಗೀತಾಂಜಲಿ ಶ್ರೀ ಅವರ ಈ ಕೃತಿಗೆ ಪ್ರಶಸ್ತಿ ಲಭಿಸಿದೆ. ಇದು ಬೂಕರ್ ಪ್ರಶಸ್ತಿ ಪಡೆದ ಮೊದಲ ಹಿಂದಿ ಭಾಷೆಯ ಕಾದಂಬರಿಯಾಗಿತ್ತು.
- Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ (02-07-2025)
- Current Affairs Quiz : ಪ್ರಚಲಿತ ಘಟನೆಗಳ ಕ್ವಿಜ್ (01-07-2025)
- ಇಂದಿನ ಪ್ರಚಲಿತ ವಿದ್ಯಮಾನಗಳು / 01-07-2025 (Today’s Current Affairs)
- Indian Railways : ರೈಲ್ವೆ ಪ್ರಯಾಣದಲ್ಲಿ ಮಹತ್ವದ ಬದಲಾವಣೆ : ಇಲ್ಲಿದೆ ಕಂಪ್ಲೀಟ್ ಅಪ್ಡೇಟ್ಸ್
- ಜೂನ್ 30 : ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನ (International Asteroid Day)