Current AffairsLatest Updates

ಇಂದಿನ ಪ್ರಚಲಿತ ವಿದ್ಯಮಾನಗಳು / 02-07-2025 (Today’s Current Affairs)

Share With Friends

ಇಂದಿನ ಪ್ರಚಲಿತ ವಿದ್ಯಮಾನಗಳು / Today’s Current Affairs

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ‘ಬೆಂಗಳೂರು ಉತ್ತರ’ ಎಂದು ಮರುನಾಮಕರಣ
ರಾಮನಗರ ಹೆಸರು ಬದಲಾವಣೆ ಬೆನ್ನಲ್ಲೇ ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಕೂಡ ಬದಲಾವಣೆಯಾಗಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಬದಲಾವಣೆಗೆ ಅನುಮೋದನೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಎಂದು ಮರು ನಾಮಕರಣ ಮಾಡಲು ಕ್ಯಾಬಿನೆಟ್ ನಲ್ಲಿ ಸಮ್ಮತಿ ನೀಡಲಾಗಿದೆ.ಇನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರು ಕೂಡ ಬದಲಾವಣೆಯಾಗಲಿದೆ. ಬಾಗೇಪಲ್ಲಿಯನ್ನು ‘ಭಾಗ್ಯನಗರ’ ಎಂದು ಹೆಸರು ಬದಲಾಯಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.


Meet Anil Menon : 2026ರಲ್ಲಿ ಬಾಹ್ಯಾಕಾಶಕ್ಕೆ ಮತ್ತೊಬ್ಬ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್


ವಿಧವೆಯರಿಗೆ ಮಾಸಿಕ ₹4 ಸಾವಿರ ಆರ್ಥಿಕ ನೆರವು, ಗೋವಾ ಸರ್ಕಾರ ಘೋಷಣೆ
21 ವರ್ಷದೊಳಗಿನ ಮಕ್ಕಳಿರುವ ವಿಧವೆಯರಿಗೆ ಮಾಸಿಕ ₹4 ಸಾವಿರ ಆರ್ಥಿಕ ನೆರವು ನೀಡುವುದಾಗಿ ಗೋವಾ ಸರ್ಕಾರ ತಿಳಿಸಿದೆ.21 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಹೊಂದಿರುವ ವಿಧವೆಯರಿಗೆ ಸಹಾಯ ಮಾಡುವ ಉದ್ದೇಶದಿಂದ ಯೋಜನೆಗೆ ತಿದ್ದುಪಡಿ ತರಲಾಗಿದೆ’. ‘ಇಲ್ಲಿಯವರೆಗೆ, ವಿಧವೆಯರು ಗೃಹ ಆಧಾರ್ ಪಿಂಚಣಿ ಯೋಜನೆಯಡಿ ಮಾಸಿಕ ₹1,500 ಪಡೆಯಲು ಸಮಾಜ ಕಲ್ಯಾಣ ಇಲಾಖೆಯಲ್ಲಿ ಅರ್ಜಿ ಸಲ್ಲಿಸಬೇಕಾಗಿತ್ತು. ವಿಧವಾ ವೇತನವಾಗಿ ಮಾಸಿಕ ₹2,500 ಪಡೆಯಲು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಮತ್ತೊಂದು ಅರ್ಜಿಯನ್ನು ಸಲ್ಲಿಸಬೇಕಾಗಿತ್ತು. ಆದರೆ, ಇದೀಗ ಎರಡು ಯೋಜನೆಗಳನ್ನು ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ತರಲಾಗಿದೆ.


ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಆರು ತಿಂಗಳ ಜೈಲು ಶಿಕ್ಷೆ
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಲಯ ನಿಂದನೆ ಆರೋಪ ಹೊರಿಸಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ಕಳೆದ ವರ್ಷ ತಮ್ಮ ದೇಶದಲ್ಲಿ (Country) ಭುಗಿಲೆದ್ದಿದ್ದ ಆಂತರಿಕ ದಂಗೆಯಿಂದಾಗಿ ದೇಶ ಬಿಟ್ಟು ಪರಾರಿಯಾಗಿ ಭಾರತದಲ್ಲಿ (India) ನೆಲೆ ಕಂಡುಕೊಂಡಿರುವ ಬಾಂಗ್ಲಾದೇಶದ (Bangladesh) ಮಾಜಿ ಪ್ರಧಾನಿ ಶೇಖ್ ಹಸೀನಾಗೆ (Sheikh Hasina) ಅಂತಾರಾಷ್ಟ್ರೀಯ ಅಪರಾಧ ನ್ಯಾಯಾಧೀಕರಣದಲ್ಲಿ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ನ್ಯಾಯಾಂಗ ನಿಂದನೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 6 ತಿಂಗಳು ಜೈಲು ಶಿಕ್ಷೆ (Jail) ಜಾರಿಯಾಗಿದೆ.

2024 ರ ಅಕ್ಟೋಬರ್‌ನಲ್ಲಿ ಶಕೀಲ್ ಅಕಂದ್ ಬುಲ್ಬುಲ್ ಜೊತೆ ಸಂಭಾಷಣೆ ನಡೆಸಿದ್ದರು ಎನ್ನಲಾದ ಫೋನ್ ಕರೆ ಸೋರಿಕೆಯಾಗಿತ್ತು. ಸೋರಿಕೆಯಾದ ಆಡಿಯೋದಲ್ಲಿ ಹಸೀನಾ ಎಂದು ಹೆಸರಿಸಲಾದ ಮಹಿಳೆಯೊಬ್ಬರು ಮಾತನಾಡಿರುವ ಧ್ವನಿ ಇದ್ದು, ಅದರಲ್ಲಿ ನನ್ನ ವಿರುದ್ಧ 227 ಪ್ರಕರಣಗಳು ದಾಖಲಾಗಿವೆ, ಆದ್ದರಿಂದ ನಾನು ಆ 227 ಜನರನ್ನು ಕೊಲ್ಲಲು ಪರವಾನಗಿ ಪಡೆದಿದ್ದೇನೆ ಎಂದು ಹೇಳುತ್ತಿರುವುದು ದಾಖಲಾಗಿದೆ.

ಹಸೀನಾ ಅವಾಮಿ ಲೀಗ್ ಪಕ್ಷದ ಮೂಲಕ ಸುಮಾರು 16 ವರ್ಷಗಳ ಕಾಲ ಬಾಂಗ್ಲಾದೇಶವನ್ನು ಮುನ್ನಡೆಸಿದ್ದರು. ಆಗಸ್ಟ್ 5, 2024ರಂದು ಸರ್ಕಾರಿ ಉದ್ಯೋಗಗಳಲ್ಲಿ ಕೋಟಾ ಸುಧಾರಣೆ ವಿಚಾರವಾಗಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ವಿಕೋಪಕ್ಕೆ ತಿರುಗಿ ದಂಗೆಗೆ ಹೆಚ್ಚಾಗಿತ್ತು. ಆ ಸಂದರ್ಭದಲ್ಲಿ ಪ್ರತಿಭಟನಾಕಾರರು ಮಿಲಿಟರಿ ಕರ್ಫ್ಯೂ ಧಿಕ್ಕರಿಸಿ ಹಸೀನಾ ಅಧಿಕೃತ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿದ್ದರು. ಇದೇ ವೇಳೆ ಹಸೀನಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ್ದರು.


‘RBI’ ಕಾರ್ಯನಿರ್ವಾಹಕ ನಿರ್ದೇಶಕರಾಗಿ ‘ಕೇಶವನ್ ರಾಮಚಂದ್ರನ್’ ನೇಮಕ
ಭಾರತೀಯ ರಿಸರ್ವ್ ಬ್ಯಾಂಕ್ (RBI) ಕೇಶವನ್ ರಾಮಚಂದ್ರನ್ ಅವರನ್ನು ಜುಲೈ 01, 2025 ರಿಂದ ಜಾರಿಗೆ ಬರುವಂತೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ನೇಮಿಸಿದೆ. ED ಆಗಿ, ಅವರು ನಿಯಂತ್ರಣ ಇಲಾಖೆಯನ್ನು (ಪ್ರುಡೆನ್ಶಿಯಲ್ ನಿಯಂತ್ರಣ ವಿಭಾಗ) ನೋಡಿಕೊಳ್ಳುತ್ತಾರೆ.

RBI ಹೇಳಿಕೆಯ ಪ್ರಕಾರ ED ಆಗಿ ಬಡ್ತಿ ಪಡೆಯುವ ಮೊದಲು ಕೇಶವನ್ ಅಪಾಯ ಮೇಲ್ವಿಚಾರಣಾ ವಿಭಾಗದಲ್ಲಿ ಪ್ರಧಾನ ಮುಖ್ಯ ಜನರಲ್ ಮ್ಯಾನೇಜರ್ ಆಗಿದ್ದರು. ಕರೆನ್ಸಿ ನಿರ್ವಹಣೆ, ಬ್ಯಾಂಕಿಂಗ್ ಮತ್ತು ಬ್ಯಾಂಕೇತರ ಮೇಲ್ವಿಚಾರಣೆ, ತರಬೇತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಅವರಿಗೆ ಮೂರು ದಶಕಗಳಿಗೂ ಹೆಚ್ಚಿನ ಅನುಭವವಿದೆ. ಕೇಶವನ್ ಅವರು ಕೆನರಾ ಬ್ಯಾಂಕಿನ ಮಂಡಳಿಯಲ್ಲಿ ಐದು ವರ್ಷಗಳಿಗೂ ಹೆಚ್ಚು ಕಾಲ ಆರ್ಬಿಐನ ನಾಮನಿರ್ದೇಶಿತರಾಗಿ ಮತ್ತು ಐಸಿಎಐನ ಆಡಿಟಿಂಗ್ ಮತ್ತು ಅಶ್ಯೂರೆನ್ಸ್ ಸ್ಟ್ಯಾಂಡರ್ಡ್ಸ್ ಬೋರ್ಡ್ನಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದರು.


ಐಸಿಸಿ ರ‍್ಯಾಂಕಿಂಗ್​ನಲ್ಲಿ ಸ್ಮೃತಿ ಮಂಧಾನ ಟಾಪ್-3
ಐಸಿಸಿ ಮಹಿಳಾ ಬ್ಯಾಟರ್​​ಗಳ ನೂತನ ರ‍್ಯಾಂಕಿಂಗ್​ ಪಟ್ಟಿ ಪ್ರಕಟಿಸಿದೆ. ಈ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ್ತಿ ಸ್ಮೃತಿ ಮಂಧಾನ (Smriti Mandhana) ಟಾಪ್-3 ನಲ್ಲಿ ಕಾಣಿಸಿಕೊಂಡಿದ್ದಾರೆ. ಅಂದರೆ ಟಿ20 ಹಾಗೂ ಏಕದಿನ ಬ್ಯಾಟರ್​ಗಳ ಪಟ್ಟಿಯಲ್ಲೂ ಅಗ್ರ ಮೂರಲ್ಲಿ ಕಾಣಿಸಿಕೊಂಡ ಏಕೈಕ ಆಟಗಾರ್ತಿ ಸ್ಮೃತಿ ಮಂಧಾನ.

ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ ಸ್ಮೃತಿ ಮಂಧಾನ ಇದೀಗ ಮಹಿಳಾ ಟಿ20 ಬ್ಯಾಟರ್​ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಮೃತಿ ಮೂರನೇ ಸ್ಥಾನಕ್ಕೇರಿದ್ದಾರೆ. ಒಟ್ಟು 771 ಅಂಕಗಳನ್ನು ಪಡೆದಿರುವ ಸ್ಮೃತಿ ಮುಂದಿನ ಮ್ಯಾಚ್​ಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ದ್ವಿತೀಯ ಸ್ಥಾನಕ್ಕೇರಬಹುದು. ಮತ್ತೊಂದೆಡೆ ಏಕದಿನ ರ‍್ಯಾಂಕಿಂಗ್​ ಪಟ್ಟಿಯಲ್ಲಿ ಸ್ಮೃತಿ ಮಂಧಾನ ಅಗ್ರಸ್ಥಾನದಲ್ಲಿದ್ದಾರೆ. ಒಟ್ಟು 727 ಅಂಕಗಳನ್ನು ಪಡೆದಿರುವ ಟೀಮ್ ಇಂಡಿಯಾ ಆರಂಭಿಕ ಆಟಗಾರ್ತಿ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾದ ಲಾರಾ ವೋಲ್ವಾರ್ಡ್ 725 ಅಂಕಗಳೊಂದಿಗೆ ದ್ವಿತೀಯ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.


ಘಾನಾ ಸೇರಿದಂತೆ 5 ರಾಷ್ಟ್ರಗಳ ಪ್ರವಾಸ ಆರಂಭಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಬುಧವಾರ ತಮ್ಮ ಐತಿಹಾಸಿಕ ಐದು ರಾಷ್ಟ್ರಗಳ ಪ್ರವಾಸವನ್ನು ಆರಂಭಿಸಿದ್ದು, ಜುಲೈ 2 ರಿಂದ 9 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗಳಿಗೆ ಭೇಟಿ ನೀಡಲಿದ್ದಾರೆ. ಜಾಗತಿಕ ದಕ್ಷಿಣದೊಂದಿಗೆ ಭಾರತದ ಆಳವಾದ ಸಂಬಂಧ ಮತ್ತು ಅಟ್ಲಾಂಟಿಕ್‌ನಾದ್ಯಂತ ಬಲವಾದ ಪಾಲುದಾರಿಕೆಗಳನ್ನು ರೂಪಿಸುವ ಬದ್ಧತೆಯನ್ನು ಹೆಚ್ಚಿಸುವ ಗುರಿಯನ್ನು ಈ ಪ್ರವಾಸ ಹೊಂದಿದೆ.


ಕೋವಿಡ್-19 ಲಸಿಕೆಗಳು ಮತ್ತು‌ ಹೃದಯಾಘಾತಕ್ಕೆ ಸಂಬಂಧವಿಲ್ಲ: ICMR
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ನಡೆಸಿದ ವ್ಯಾಪಕ ಅಧ್ಯಯನಗಳು ಕೋವಿಡ್-19 ಲಸಿಕೆಗಳು ಮತ್ತು ಕೋವಿಡ್-19 ನಂತರ ಹೆಚ್ಚಾಗುತ್ತಿರುವ ಹಠಾತ್ ಸಾವುಗಳ ನಡುವೆ ಯಾವುದೇ ಸಂಬಂಧವನ್ನು ನಿರ್ಣಾಯಕವಾಗಿ ಸ್ಥಾಪಿಸಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹೇಳಿದ್ದಾರೆ. ‌

ICMR ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (NCDC) ನಡೆಸಿದ ಅಧ್ಯಯನಗಳು ಭಾರತದಲ್ಲಿ COVID-19 ಲಸಿಕೆಗಳು ಸುರಕ್ಷಿತ ಮತ್ತು ಪರಿಣಾಮಕಾರಿ ಎಂದು ದೃಢಪಡಿಸುತ್ತವೆ ಮತ್ತು ಗಂಭೀರ ಅಡ್ಡಪರಿಣಾಮಗಳ ಅಪರೂಪದ ಪ್ರಕರಣಗಳಿವೆ ಎಂದು ಸಚಿವಾಲಯ ಗಮನಿಸಿದೆ.

ಹಠಾತ್ ಹೃದಯ ಸಾವುಗಳ ಸಂಭವವು ತಳಿಶಾಸ್ತ್ರ, ಜೀವನಶೈಲಿ, ಪೂರ್ವ ಅಸ್ತಿತ್ವದಲ್ಲಿರುವ ಪರಿಸ್ಥಿತಿಗಳು ಮತ್ತು COVID ನಂತರದ ತೊಡಕುಗಳು ಸೇರಿದಂತೆ ವ್ಯಾಪಕ ಶ್ರೇಣಿಯ ಅಂಶಗಳಿಂದ ಉಂಟಾಗಬಹುದು. ವಿಶೇಷವಾಗಿ 18 ರಿಂದ 45 ವರ್ಷ ವಯಸ್ಸಿನ ಯುವ ವಯಸ್ಕರಲ್ಲಿ ಹಠಾತ್, ವಿವರಿಸಲಾಗದ ಸಾವುಗಳ ಹಿಂದಿನ ಕಾರಣಗಳನ್ನು ಅರ್ಥಮಾಡಿಕೊಳ್ಳಲು ICMR ಮತ್ತು NCDC ಒಟ್ಟಾಗಿ ಕೆಲಸ ಮಾಡುತ್ತಿವೆ.


ಗಾಝಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿಗೆ
ಗಾಝಾದಲ್ಲಿ 60 ದಿನಗಳ ಕದನ ವಿರಾಮವನ್ನು ಅಂತಿಮಗೊಳಿಸಲು ಅಗತ್ಯವಾದ ಷರತ್ತುಗಳಿಗೆ ಇಸ್ರೇಲ್ ಒಪ್ಪಿಕೊಂಡಿದೆ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.ಕದನ ವಿರಾಮ ಒಪ್ಪಂದವನ್ನು ತಿರಸ್ಕರಿಸುವುದರ ವಿರುದ್ಧ ಟ್ರಂಪ್, ಹಮಾಸ್‌ಗೆ ಎಚ್ಚರಿಕೆ ನೀಡಿದ್ದಾರೆ. ಹಾಗೇನಾದರೂ ಆದಲ್ಲಿ, ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆಯೇ ಹೊರತು ಯಥಾಸ್ಥಿತಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.ಶಾಂತಿ ಸ್ಥಾಪಿಸಲು ಬ ಹಳ ಶ್ರಮಿಸಿರುವ ಕತಾರ್ ಮತ್ತು ಈಜಿಫ್ಟ್ ಅಂತಿಮ ರೂಪುರೇಷೆ ನೀಡಲಿವೆ. ಪ್ರಸ್ತಾವಿತ ಕದನ ವಿರಾಮ ಅವಧಿಯಲ್ಲಿ ಯುದ್ಧವನ್ನು ಕೊನೆಗೊಳಿಸುವ ಮಾತುಕತೆಗಳು ಮುಂದುವರಿಯುತ್ತವೆ ಎಂದು ಹೇಳಿದ್ದಾರೆ.

ಒಂದೇ ಓವರ್​ನಲ್ಲಿ 35 ರನ್ ಕಲೆಹಾಕಿ ಬುಮ್ರಾ ವಿಶ್ವ ದಾಖಲೆ
ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲಿ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿಶ್ವ ದಾಖಲೆ ಟೀಮ್ ಇಂಡಿಯಾದ ಜಸ್​ಪ್ರೀತ್ ಬುಮ್ರಾ ಹೆಸರಿನಲ್ಲಿದೆ. ಈ ವಿಶ್ವ ದಾಖಲೆಗೆ ಇಂದು 3 ವರ್ಷ. ಜುಲೈ 02, 2022 ರಲ್ಲಿ ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದಲ್ಲಿ ಸ್ಟುವರ್ಟ್ ಬ್ರಾಡ್ ಒಂದೇ ಓವರ್​ನಲ್ಲಿ 35 ರನ್ ನೀಡಿದ್ದರು.

ಬ್ರಾಡ್ ಎಸೆದ ಈ ಓವರ್​ನ ಮೊದಲ ಎಸೆತದಲ್ಲಿ ಬುಮ್ರಾ ಫೋರ್ ಬಾರಿಸಿದ್ದರು. ದ್ವಿತೀಯ ಎಸೆತವು ವೈಡ್ ಆಗಿ ಬೌಂಡರಿ ಲೈನ್ ದಾಟಿತು. ಮೂರನೇ ಎಸೆತ ನೋಬಾಲ್, ಈ ಎಸೆತದಲ್ಲಿ ಬುಮ್ರಾ ಸಿಕ್ಸ್ ಸಿಡಿಸಿದ್ದರು. ಇನ್ನು ಮರು ಎಸೆತದಲ್ಲಿ ಮತ್ತೊಂದು ಫೋರ್ ಬಾರಿಸಿದರು. ಮೂರನೇ ಎಸೆತದಲ್ಲಿ ಬುಮ್ರಾ ಬ್ಯಾಟ್​ನಿಂದ ಇನ್ನೊಂದು ಫೋರ್ ಮೂಡಿಬಂತು. ನಾಲ್ಕನೇ ಎಸೆತದಲ್ಲಿ ಫೋರ್ ಹಾಗೂ ಐದನೇ ಎಸೆತದಲ್ಲಿ ಸಿಕ್ಸ್ ಸಿಡಿಸಿದರು. ಕೊನೆಯ ಎಸೆತದಲ್ಲಿ ಒಂದು ರನ್ ಕಲೆಹಾಕಿದರು. ಈ ಮೂಲಕ ಜಸ್​ಪ್ರೀತ್ ಬುಮ್ರಾ ಒಂದೇ ಓವರ್​ನಲ್ಲಿ 29 ರನ್​ ಚಚ್ಚಿದ್ದರು. ಇದರೊಂದಿಗೆ ಟೆಸ್ಟ್ ಇತಿಹಾಸದಲ್ಲೇ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ದಾಖಲೆ ಜಸ್​ಪ್ರೀತ್ ಬುಮ್ರಾ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ ಲೆಜೆಂಡ್ ಬ್ರಿಯಾನ್ ಲಾರಾ ಹೆಸರಿನಲ್ಲಿತ್ತು. 2003 ರಲ್ಲಿ ಸೌತ್ ಆಫ್ರಿಕಾ ರಾಬಿನ್ ಪೀಟರ್ಸನ್ ಓವರ್​ನಲ್ಲಿ ಲಾರಾ 28 ರನ್ ಬಾರಿಸಿ ದಾಖಲೆ ನಿರ್ಮಿಸಿದ್ದರು. ಈ ದಾಖಲೆಯನ್ನು ಮೂರು ವರ್ಷಗಳ ಹಿಂದೆ ಜಸ್​ಪ್ರೀತ್ ಬುಮ್ರಾ ಮುರಿದಿದ್ದಾರೆ.

ಇನ್ನು ಈ ಓವರ್​ನಲ್ಲಿ ಒಟ್ಟು 35 ರನ್ ನೀಡುವ ಮೂಲಕ ಸ್ಟುವರ್ಟ್ ಬ್ರಾಡ್ ಟೆಸ್ಟ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಕಳಪೆ ದಾಖಲೆಯೊಂದನ್ನು ಕೂಡ ತನ್ನದಾಗಿಸಿಕೊಂಡರು. ಅಂದರೆ ಈ ಓವರ್​ನಲ್ಲಿ ಬುಮ್ರಾ 29 ರನ್ ಕಲೆಹಾಕಿದರೆ, ಬ್ರಾಡ್ ವೈಡ್+ಫೋರ್ ಹಾಗೂ ನೋಬಾಲ್​ನೊಂದಿಗೆ ಹೆಚ್ಚುವರಿ 6 ರನ್​ಗಳನ್ನು ನೀಡಿದ್ದರು. ಈ ಮೂಲಕ ಒಂದೇ ಓವರ್​ನಲ್ಲಿ 35 ರನ್​ ಬಿಟ್ಟುಕೊಟ್ಟಿದ್ದರು.

ಮಂಗಳೂರು ಸಮಾಚಾರ ಪತ್ರಿಕೆಯೊಂದಿಗೆ ಆರಂಭವಾದ ಕನ್ನಡ ಪತ್ರಿಕಾರಂಗ ಇಂದು ಮಹತ್ವದ ಸುಧಾರಣೆಗಳೊಂದಿಗೆ ಹೆಮ್ಮರವಾಗಿ ಬೆಳೆದು ನಿಂತಿದೆ. ಪತ್ರಿಕೋದ್ಯಮವು ಎಲ್ಲಾ ಮಜಲುಗಳಲ್ಲೂ ಗಟ್ಟಿಯಾಗಿ ಬೇರೂರಿದ್ದು, ಮುದ್ರಣ, ಎಲೆಕ್ಟ್ರಾನಿಕ್‌, ಡಿಜಿಟಲ್‌, ಆನ್‌ಲೈನ್‌ ಎಲ್ಲಾ ಕ್ಷೇತ್ರದಲ್ಲೂ ತನ್ನ ಛಾಪನ್ನು ಮೂಡಿಸಿದೆ. ಹೀಗೆ ಪ್ರತಿಕಾ ರಂಗವು ಕಾಲಕ್ಕೆ ತಕ್ಕಂತೆ ಬದಲಾಗಿದ್ದು, ಪತ್ರಿಕೋದ್ಯಮದ ಹಿನ್ನೆಲೆ, ಅದು ಕಾಲಕ್ಕೆ ತಕ್ಕಂತೆ ಬದಲಾದ ವೈಖರಿ ಹಾಗೂ ಸಮಾಜದಲ್ಲಿ ನಡೆಯುವ ತಪ್ಪುಗಳ ವಿರುದ್ಧ ಧ್ವನಿ ಎತ್ತುವ ಬಗ್ಗೆ ಜನರಿಗೆ ತಿಳಿಸಲು ಪತ್ರಿಕಾ ದಿನವನ್ನು ಆಚರಿಸಲಾಗುತ್ತದೆ.


ಭಾರತೀಯ ರೈಲ್ವೆ ಇಲಾಖೆಯಿಂದ ರೈಲ್‌ಒನ್ ಆಪ್‌ ಬಿಡುಗಡೆ
ಭಾರತೀಯ ರೈಲ್ವೆ ಇಲಾಖೆ ರೈಲ್‌ಒನ್ ಎಂಬ ಹೊಸ ಆಪ್‌ ಅನ್ನು ಬಿಡುಗಡೆ ಮಾಡಿದೆ. ಈ ಆಪ್‌ನಿಂದಾಗಿ ರೈಲ್ವೆ ಸಂಬಂಧಪಟ್ಟ ಎಲ್ಲಾ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗಲಿದೆ. ರೈಲ್ವೆಯ ಕೋಟ್ಯಂತರ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಉದ್ದೇಶದಿಂದ ಇದನ್ನು ಜಾರಿಗೆ ತರಲಾಗಿದೆ.

ರೈಲ್‌ಒನ್‌ ಒಂದು ಸೂಪರ್‌ ಆಪ್‌ ಆಗಿದ್ದು, ಈ ಆಪ್‌ ಮೂಲಕ ಟಿಕೆಟ್ ಬುಕಿಂಗ್, ಪಿಎನ್‌ಆರ್ ಟ್ರ್ಯಾಕಿಂಗ್, ಕೋಚ್ ಸಂಖ್ಯೆ, ಆಹಾರ ಆರ್ಡರ್ ಸೇರಿದಂತೆ ಹಲವು ಸೇವೆಗಳ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅಲ್ಲದೇ ಐಆರ್‌ಸಿಟಿಸಿ ರೈಲು ಟಿಕೆಟ್‌ಗಳನ್ನು ಕಾಯ್ದಿರಿಸಬಹುದು. ಆಂಡ್ರಾಯ್ಡ್ ಮತ್ತು ಐಒಎಸ್ ಆಪ್ ಸ್ಟೋರ್‌ಗಳಲ್ಲಿ ಈ ಆಪ್‌ ಡೌನ್‌ಲೋಡ್‌ಗೆ ಲಭ್ಯವಿದೆ.

ರೈಲ್‌ಒನ್ ಅಪ್ಲಿಕೇಶನ್ ಅನ್ನು ರೈಲ್ವೆ ಮಾಹಿತಿ ವ್ಯವಸ್ಥೆ ಕೇಂದ್ರ (CRIS) ರಚಿಸಿದೆ. ಅಪ್ಲಿಕೇಶನ್‌ಗೆ ಸಂಬಂಧಿಸಿದಂತೆ ಬಳಕೆದಾರರಿಗೆ ಉತ್ತಮ ಅನುಭವ ಒದಗಿಸುವುದು ಇದರ ಮೂಲ ಉದ್ದೇಶವಾಗಿದೆ. ಈ ಆಪ್ ಅನ್ನು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಘೋಷಿಸಲಾಗಿತ್ತು.

ವಿಶೇಷತೆ.. ?
ರೈಲ್ವೆ ಸೇವೆಗಳನ್ನು ಒಂದೇ ವೇದಿಕೆಗೆ ತರುವುದು, ಈ ಮೂಲಕ ಬಳಕೆದಾರರಿಗೆ ಉತ್ತಮ ಅನುಭವ ನೀಡುವುದು.
ಆಂಡ್ರಾಯ್ಡ್ ಪ್ಲೇಸ್ಟೋರ್ ಮತ್ತು ಐಒಎಸ್‌ ಆಪ್ ಸ್ಟೋರ್ ಪ್ಲಾಟ್‌ಫಾರ್ಮ್‌ಗಳಿಂದ ಇದನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು.
ಸಿಂಗಲ್ ಸೈನ್ ಇನ್‌ ಅಂದರೆ, ಹಲವು ಪಾಸ್‌ವರ್ಡ್‌ಗಳನ್ನು ನೆನಪಿಟ್ಟುಕೊಳ್ಳುವ ಅಗತ್ಯ ಇಲ್ಲ.
ಇನ್‌ಸ್ಟಾಲ್‌ ನಂತರ ಅಸ್ತಿತ್ವದಲ್ಲಿರುವ ರೈಲ್‌ಕನೆಕ್ಟ್ ಅಥವಾ ಯುಟಿಸನ್‌ ಮೊಬೈಲ್ ಕ್ರೆಡೆನ್ಶಿಯಲ್‌ ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದು.
ಬಳಕೆದಾರರಿಗೆ ಇನ್ನು ಮುಂದೆ ವಿವಿಧ ಭಾರತೀಯ ರೈಲ್ವೆ ಸೇವೆಗಳಿಗೆ ಪ್ರತ್ಯೇಕ ಅಪ್ಲಿಕೇಶನ್‌ಗಳ ಅಗತ್ಯ ಇಲ್ಲ.
ಅಪ್ಲಿಕೇಶನ್ ಆರ್ ವ್ಯಾಲೆಟ್ (ರೈಲ್ವೆ ಇ-ವ್ಯಾಲೆಟ್) ಕೂಡ ಇದರಲ್ಲಿದೆ.
ಸರಳ ಎಂಪಿನ್‌ ಅಥವಾ ಬಯೋಮೆಟ್ರಿಕ್ ಲಾಗಿನ್ ಆಯ್ಕೆಗಳ ಮೂಲಕ ಇದಕ್ಕೆ ಪ್ರವೇಶಿಸಬಹುದು
ಕನಿಷ್ಠ ಮಾಹಿತಿಯ ಅಗತ್ಯವಿರುವ ಸುವ್ಯವಸ್ಥಿತ ನೋಂದಣಿ ಪ್ರಕ್ರಿಯೆಯಿಂದ ಕೋಟ್ಯಂತರ ಜನರಿಗೆ ಪ್ರಯೋಜನ ಸಿಗಲಿದೆ.
ವಿಚಾರಣೆಗಳಿಗೆ, ಮೊಬೈಲ್ ಸಂಖ್ಯೆ/ಒಟಿಪಿ ಪರಿಶೀಲನೆಯ ಮೂಲಕ ಪ್ರವೇಶ ಲಭ್ಯ.


ಬೈಕ್ ಟ್ಯಾಕ್ಸಿಗೆ ಕೇಂದ್ರ ಸರ್ಕಾರ ಅನುಮತಿ :
ರಾಜ್ಯ ಸರ್ಕಾರ (State Government) ನಿಷೇಧ ಹೇರಿದ ಹಿನ್ನೆಲೆ ಭಾರೀ ಪ್ರತಿಭಟನೆ ನಡೆಯುತ್ತಿರುವ ಹೊತ್ತಲ್ಲೇ ಬೈಕ್ ಟ್ಯಾಕ್ಸಿಗೆ (Bike Taxi) ಕೇಂದ್ರ ಸರ್ಕಾರ (Central Government) ಅನುಮತಿ ನೀಡಿದೆ. ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಕಳದ ಜೂ.16ರಿಂದ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಯನ್ನು ಬ್ಯಾನ್‌ಗೊಳಿಸಿತ್ತು. ಈ ಹಿನ್ನೆಲೆ ಇದರ ವಿರುದ್ಧ ಭಾರಿ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಈ ಸಂಬಂಧ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಹೊರಡಿಸಿದ್ದು, ನಿಮ್ಮ ಖಾಸಗಿ ಬೈಕ್‌ಗಳನ್ನು ಬಳಸಿಕೊಂಡು ಅಗ್ರಿಗೇಟರ್ ಸೇವೆಗಳನ್ನು ಒದಗಿಸಬಹುದು. ಆದರೆ ಆಯಾ ರಾಜ್ಯ ಸರ್ಕಾರದ ಅನುಮತಿ ಕಡ್ಡಾಯ ಎಂದು ತಿಳಿಸಿದೆ. ಆದರೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಮಾರ್ಗಸೂಚಿಯಲ್ಲಿ ಏನಿದೆ?
– ರಾಜ್ಯ ಸರ್ಕಾರಗಳು ಖಾಸಗಿ ಬೈಕ್‌ಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರ್‌ಗಳಿಗೆ ಅನುಮತಿ ಕೊಡಬಹುದು.
– ಇದರಿಂದ ಸಂಚಾರ ದಟ್ಟಣೆ, ಮಾಲಿನ್ಯ ನಿಯಂತ್ರಣ, ಕೈಗೆಟುಕುವ ದರದ ಪ್ರಯಾಣ, ಸ್ಥಳೀಯ ಸಾರಿಗೆ ಅಭಿವೃದ್ಧಿ ಮತ್ತು ಜೀವನವನ್ನ ರೂಪಿಸಲು ಅವಕಾಶ ಮಾಡಿಕೊಡಬಹುದು.
– ರಾಜ್ಯ ಸರ್ಕಾರಗಳು ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 67ರ ಸಬ್ ಸೆಕ್ಷನ್ (3)ರ ಅಡಿಯಲ್ಲಿ ಅಗ್ರಿಗೇಟರ್‌ಗಳಿಗೆ ಖಾಸಗಿ ವಾಹನಗಳನ್ನ ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅನುಮತಿ ಕೊಡಬಹುದು
– ಇದರಡಿ ಅಗ್ರಿಗೇಟರ್‌ಗಳಿಗೆ ದೈನಂದಿನ, ವಾರದ, ಹದಿನೈದು ದಿನದ ಅನುಮತಿಗಾಗಿ ಸರ್ಕಾರ ಶುಲ್ಕ


ಕನ್ನಡದಲ್ಲಿ ಪ್ರಚಲಿತ ವಿದ್ಯಮಾನಗಳು (Current Affairs in Kannada 2025)
Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್

error: Content Copyright protected !!