Current AffairsLatest UpdatesPersons and Personalty

SL Bhyrappa : ಪದ್ಮಭೂಷಣ ಪುರಸ್ಕೃತ ಕನ್ನಡದ ಖ್ಯಾತ ಸಾಹಿತಿ ಎಸ್‌‍.ಎಲ್‌.ಭೈರಪ್ಪ ವಿಧಿವಶ

Share With Friends

Padma Bhushan awardee and veteran novelist SL Bhyrappa

ಕನ್ನಡದ ಪ್ರಖ್ಯಾತ ಸಾಹಿತಿ ಹಾಗೂ ಪದಭೂಷಣ ಪ್ರಶಸ್ತಿ ಪುರಸ್ಕೃತ ಎಸ್‌‍.ಎಲ್‌.ಭೈರಪ್ಪ(94) ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ರಾಜಾರಾಜೇಶ್ವರಿ ನಗರದಲ್ಲಿರುವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕನ್ನಡ ಸಾಹಿತ್ಯಿಕ ಸಾಧನೆಯಿಂದಲೇ ಭಾರತ ಸರ್ಕಾರದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮಭೂಷಣ ಮತ್ತು ಸರಸ್ವತಿ ಸಮ್ಮಾನ್ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ಸಾಹಿತಿ ಎಸ್.ಎಲ್. ಭೈರಪ್ಪ ಅವರು ಮೈಸೂರಿನಲ್ಲಿ ನಿವೃತ್ತಿ ಜೀವನನ್ನು ನಡೆಸುತ್ತಿದ್ದ ಭೈರಪ್ಪ ಅವರು ವಯೋಸಹಜದಿಂದಾಗಿ ಸಣ್ಣ ಪುಟ್ಟ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ, ಕಳೆದೊಂದು ವರ್ಷದಿಂದ ಬೆಂಗಳೂರಿನಲ್ಲಿ ಬಂದು ವಾಸವಾಗಿದ್ದರು. ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ

ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದರು. ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿಯತೆ ಗಳಿಸಿವೆ. ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ (ರಿ) ಸ್ಥಾಪಿಸಿದ್ದಾರೆ.

ತಮ್ಮ ಸಾಹಿತ್ಯ ಸೇವೆಗಾಗಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಅವರ ಪ್ರಮುಖ ಕಾದಂಬರಿಗಳಾದ ವಂಶವೃಕ್ಷ, ದಾಟು, ತಂತು ಮುಂತಾದವು ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿವೆ. ಭೈರಪ್ಪನವರು ಕಾದಂಬರಿಗಳ ಜೊತೆಗೆ ಸೌಂದರ್ಯ ಮೀಮಾಂಸೆಯ ಕುರಿತು ಹಲವು ಗ್ರಂಥಗಳನ್ನು ರಚಿಸಿದ್ದಾರೆ. ಅವರು 1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ’ ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

ಜೀವನ :
ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ 26-07-1934[1] ರಂದು ಹುಟ್ಟಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು. ಕಿತ್ತು ತಿನ್ನುವ ಬಡತನ, ಬೇಜವಾಬ್ದಾರಿ ತಂದೆ, ಪ್ಲೇಗ್ ಮಾರಿಯಿಂದ ತತ್ತರಗೊಂಡ ಪರಿಸರದಲ್ಲೂ ಅವರ ಸಣ್ಣ ವಯಸ್ಸಿನಲ್ಲೇ ಅವರ ತಾಯಿಯ ಧೀಮಂತಿಕೆಯನ್ನು ಮೈಗೂಡಿಸಿ ಕೊಂಡರು. ಶಾಲಾ ದಾಖಲೆಗಳ ಪ್ರಕಾರ ಅವರ ಜನ್ಮದಿನ 20-08-1931 ಎಂದು ಅವರು ತಮ್ಮ ಆತ್ಮಕಥೆ ಭಿತ್ತಿಯಲ್ಲಿ ಹೇಳಿಕೊಂಡಿದ್ದಾರೆ. (ಪುತ 50 ಮೊದಲ ಮುದ್ರಣ).

ಅವರ 5ನೇ ವಯಸ್ಸಿನಲ್ಲಿ ಅವರ ತಾಯಿ ಬಡತನ – ಪ್ಲೇಗ್ ಗಳಿಗೆ ಜೀವವನ್ನು ತೆತ್ತಾಗ ಬದುಕಿನ ವಿಶ್ವ ವಿಶಾಲತೆಯ ರಂಗದಲ್ಲಿ ಸಾಹಸಮಯವಾದ ಬದುಕನ್ನು ತಾವೇ ನಿರ್ಮಿಸಿ ಕೊಳ್ಳ ತೊಡಗಿ ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದರು. ಗಾಂಧೀಜಿಯವರ ಮೌಲ್ಯಗಳಿಗೆ ಬೆಲೆ ಕೊಟ್ಟು ಸ್ವಾತಂತ್ರ ಚಳುವಳಿಗೆ ತೊಡಗಿಸಿಕೊಂಡಾಗ ಅವರಿಗೆ ಕೇವಲ 13 ವರ್ಷ!

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.
ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ `ಧರ್ಮಶ್ರೀ’ ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ.

ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದ ಗೊಂಡಿವೆ. ಗೃಹಭಂಗ,ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975 ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.

ಪರ್ವ' ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ. ಲೈಂಗಿಕತೆ ಮತ್ತು ಸಾವುಗಳ ನೆಲೆಯಲ್ಲಿ ದ್ರೌಪದಿ, ಕುಂತಿ, ಮಾದ್ರಿ, ಗಾಂಧಾರಿ ಪಾತ್ರಗಳನ್ನು ವಿಶಿಷ್ಟವಾಗಿ ಮೂಡಿಸಿದ್ದಾರೆ. ಕಾದಂಬರಿಗಳಲ್ಲದೆ ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿದಸಾಹಿತ್ಯ ಮತ್ತು ಪ್ರತೀಕ’, ಕಥೆ ಮತ್ತು ಕಥಾವಸ್ತು',ನಾನೇಕೆ ಬರೆಯುತ್ತೇನೆ’ ಎಂಬ ಕೃತಿಗಳನ್ನೂ ಭೈರಪ್ಪ ರಚಿಸಿದ್ದಾರೆ. ಪ್ರಸ್ತುತ ಮೈಸೂರಿನ ಕುವೆಂಪು ನಗರದಲ್ಲಿ ವಾಸವಾಗಿದ್ದಾರೆ. 1999ರಲ್ಲಿ ಕನಕಪುರಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಭೈರಪ್ಪ ಆಯ್ಕೆಯಾಗಿದ್ದರು.

ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ. `ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ಸಾಹಿತಿ :
ಭೈರಪ್ಪನವರು ವೃತ್ತಿ ಜೀವನದಲ್ಲಿಯೂ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕರು (1958-60)
ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರು (1960-66)
ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕರು (1967-1971).
ಮೈಸೂರಿನ ಪ್ರಾದೇಶಿಕ ಶಿಕ್ಷಣ ಕಾಲೇಜಿನ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ 1991ರಲ್ಲಿ ನಿವೃತ್ತಿ

ಪ್ರಮುಖ ಅಂಶಗಳು:
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ, 1934ರ ಜುಲೈ 26ರಂದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸಂತೇಶಿವರ ಗ್ರಾಮದಲ್ಲಿ ಜನಿಸಿದ್ದರು. ಆಧುನಿಕ ಕನ್ನಡ ಸಾಹಿತ್ಯದ ಪ್ರಮುಖ ಕಾದಂಬರಿಕಾರರಲ್ಲಿ ಒಬ್ಬರು. ಅವರ ಕೃತಿಗಳು ತತ್ವಶಾಸ್ತ್ರ, ಸೌಂದರ್ಯ ಮೀಮಾಂಸೆ ಮತ್ತು ಮಾನವೀಯ ವಿಷಯಗಳನ್ನು ಒಳಗೊಂಡಿರುತ್ತವೆ. ಅವರ ಕೃತಿಗಳು ಕನ್ನಡದಲ್ಲಿ ಹೆಚ್ಚು ಮಾರಾಟವಾಗಿದ್ದು, ಹಿಂದಿ, ಮರಾಠಿ, ಮತ್ತು ಇಂಗ್ಲಿಷ್ ಸೇರಿದಂತೆ ಹಲವು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿವೆ.

20219ರ ಮೈಸೂರು ದಸರಾ ಉದ್ಘಾಟನೆ:
ಕನ್ನಡ ನಾಡ ಹಬ್ಬ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ 2019ನೇ ಸಾಲಿನ ಉದ್ಘಾಟಕರನ್ನಾಗಿ ಎಸ್.ಎಲ್. ಭೈರಪ್ಪ ಆಯ್ಕೆಯಾಗಿದ್ದರು. ಈ ವೇಳೆ ಮಾತನಾಡಿದ್ದ ಅವರು, ಈ ಬಾರಿಯ ವಿಶ್ವವಿಖ್ಯಾತ ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವುದಕ್ಕೆ ಅತೀವ ಸಂತಸವಾಗಿದೆ ಎಂದಿದ್ದರು.

ಸರಸ್ವತೀ ಸಮ್ಮಾನ್ ಪ್ರಶಸ್ತಿ ಪಡೆದ ಮೊದಲಿಗರು :
1999 ರಲ್ಲಿ ಕನಕಪುರದಲ್ಲಿ ನಡೆದ 67ನೇ ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ ಸ್ಥಾನದ ಗೌರವ ಅವರಿಗೆ ಸಿಕ್ಕಿತು. ಸರಸ್ವತೀ ಸಮ್ಮಾನ್ ಪ್ರಶಸ್ತಿಯನ್ನು ಕನ್ನಡದಲ್ಲಿ ಪಡೆದವರಲ್ಲಿ ಇವರು ಮೊದಲಿಗರು.

ಭೈರಪ್ಪ ಅವರ ಕಾದಂಬರಿಗಳಿಗೆ ಸಂದ ಪ್ರಮುಖ ಪ್ರಶಸ್ತಿಗಳು
“ತಂತು” ಕಾದಂಬರಿಗೆ ಭಾರತೀಯ ಭಾಷಾ ಪರಿಷತ್ತಿನ ಪ್ರಶಸ್ತಿ ಲಭಿಸಿದೆ.
“ದಾಟು” ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.
“ವಂಶವೃಕ್ಷ”, “ಸಾಕ್ಷಿ”, “ದಾಟು” ಕಾದಂಬರಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಲಭಿಸಿವೆ.
1994 ರಲ್ಲಿ ಮಾಸ್ತಿ ಪ್ರಶಸ್ತಿ ಹಾಗೂ 1985 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಸಂದಿದೆ.

ಭೈರಪ್ಪ ಅವರ ಕಾದಂಬರಿಗಳು :
ಭೀಮಕಾಯ(1952), ಬೆಳಕು ಮೂಡಿತು(1959), ಧರ್ಮಶ್ರೀ – (1961), ದೂರ ಸರಿದರು(1967), ಮತದಾನ (1965), ವಂಶವೃಕ್ಷ(1965), ಜಲಪಾತ (1967), ನಾಯಿ ನೆರಳು (1968), ತಬ್ಬಲಿಯು ನೀನಾದೆ ಮಗನೆ(1968), ಗೃಹಭಂಗ(1970), ನಿರಾಕರಣ-(1971), ಗ್ರಹಣ-(1972), ದಾಟು (1973), ಅನ್ವೇಷಣ(1976), ಪರ್ವ(1979), ನೆಲೆ (1983), ಸಾಕ್ಷಿ (1986) ಅಂಚು-(1990), ತಂತು (1993), ಸಾರ್ಥ(1998), ಮಂದ್ರ(2001), ಆವರಣ(2007), ಕವಲು (2010), ಯಾನ (2014) ಉತ್ತರಕಾಂಡ-(2017).

ಕಾದಂಬರಿಗಳು :
ಭೀಮಕಾಯ
ಬೆಳಕು ಮೂಡಿತು
ಧರ್ಮಶ್ರೀ – (1961)
ದೂರ ಸರಿದರು- (1962)
ಮತದಾನ – (1965)
ವಂಶವೃಕ್ಷ- (1965)
ಜಲಪಾತ (ಕಾದಂಬರಿ)- (1967)
ನಾಯಿ ನೆರಳು- (1968)
ತಬ್ಬಲಿಯು ನೀನಾದೆ ಮಗನೆ-(1968)
ಗೃಹಭಂಗ-(1970)
ನಿರಾಕರಣ-(1971)
ಗ್ರಹಣ-(1972)
ದಾಟು -(1973)
ಅನ್ವೇಷಣ-(1976)
ಪರ್ವ-(1979)
ನೆಲೆ -(1983)
ಸಾಕ್ಷಿ -(1986)
ಅಂಚು-(1990)
ತಂತು -(1993)
ಸಾರ್ಥ-(1998)
ಮಂದ್ರ-(2001)
ಆವರಣ-(2007)
ಕವಲು – (2010)
ಯಾನ – (2014)
ಉತ್ತರಕಾಂಡ-(2017)

ಆತ್ಮ ಚರಿತ್ರೆ : ಭಿತ್ತಿ

ತತ್ತ್ವಶಾಸ್ತ್ರ :
ಸತ್ಯ ಮತ್ತು ಸೌಂದರ್ಯ (1966) – ಪಿ.ಎಚ್.ಡಿ ಪ್ರಬಂಧ
ಸಾಹಿತ್ಯ ಮತ್ತು ಪ್ರತೀಕ (1967)
ಕಥೆ ಮತ್ತು ಕಥಾವಸ್ತು (1969)
ಸಂದರ್ಭ:ಸಂವಾದ (2011)

ಇತರೆ :
ನಾನೇಕೆ ಬರೆಯುತ್ತೇನೆ? (1980)
ಇತರ ಭಾಷೆಗಳಿಗೆ ಅನುವಾದವಾಗಿರುವ ಕಾದಂಬರಿಗಳು
ಧರ್ಮಶ್ರೀ – ಸಂಸ್ಕೃತ, ಮರಾಠಿ
ವಂಶವೃಕ್ಷ – ತೆಲುಗು, ಮರಾಠಿ, ಹಿಂದಿ, ಉರ್ದು, ಇಂಗ್ಲೀಷ್
ನಾಯಿ ನೆರಳು – ಗುಜರಾತಿ, ಹಿಂದಿ
ತಬ್ಬಲಿಯು ನೀನಾದೆ ಮಗನೆ – ಹಿಂದಿ
ಗೃಹಭಂಗ – ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
ನಿರಾಕರಣ -ಹಿಂದಿ
ದಾಟು – ಇಂಗ್ಲೀಷ್, ಭಾರತದ ಹದಿನಾಲ್ಕು ಭಾಷೆಗಳಿಗೆ ಅನುವಾದವಾಗಿದೆ
ಅನ್ವೇಷಣ -ಹಿಂದಿ,ಮರಾಠಿ
ಪರ್ವ -ಹಿಂದಿ, ಮರಾಠಿ, ಇಂಗ್ಲೀಷ್, ತೆಲುಗು, ಬೆಂಗಾಲಿ, ತಮಿಳು
ನೆಲೆ -ಹಿಂದಿ
ಸಾಕ್ಷಿ – ಹಿಂದಿ, ಇಂಗ್ಲೀಷ್
ಅಂಚು -ಹಿಂದಿ, ಮರಾಠಿ
ತಂತು -ಹಿಂದಿ, ಮರಾಠಿ
ಸಾರ್ಥ -ಹಿಂದಿ, ಮರಾಠಿ, ಇಂಗ್ಲೀಷ್, ಸಂಸ್ಕೃತ
ನಾನೇಕೆ ಬರೆಯುತ್ತೇನೆ -ಮರಾಠಿ
ಸತ್ಯ ಮತ್ತು ಸೌಂದರ್ಯ -ಇಂಗ್ಲೀಷ್
ಭಿತ್ತಿ -ಹಿಂದಿ, ಮರಾಠಿ

ಚಲನಚಿತ್ರವಾಗಿರುವ ಕಾದಂಬರಿಗಳು :
ವಂಶವೃಕ್ಷ – 1972
ತಬ್ಬಲಿಯು ನೀನಾದೆ ಮಗನೆ – 1977
ಮತದಾನ – 2001
ನಾಯಿ ನೆರಳು – 2006

ಟಿ.ವಿ. ಧಾರಾವಾಹಿಯಾಗಿರುವ ಕಾದಂಬರಿಗಳು :
ಗೃಹಭಂಗ
ದಾಟು (ಹಿಂದಿ)

ಪ್ರಶಸ್ತಿ/ಗೌರವಗಳು :
*2023 ರಲ್ಲಿ ಪದ್ಮಭೂಷಣ ಪ್ರಶಸ್ತಿ.
*ಡಾ.ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ – 2014
*ನಾಡೋಜ ಪ್ರಶಸ್ತಿ – 2011
*ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)- 2010
*ಪಂಪ ಪ್ರಶಸ್ತಿ – 2005
*ಎನ್ ಟಿ ಆರ್‍ ರಾಷ್ಟ್ರೀಯ ಪ್ರಶಸ್ತಿ- 2007
*ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟು- 2007
*ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)- 1975
*ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ) -1966
*ವಾಗ್ವಿಲಾಸಿನಿ ಪುರಸ್ಕಾರ್ (ದೀನನಾಥ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ)- 2012 (ಗಾನಕೋಗಿಲೆ *ಭಾರತರತ್ನ ಲತಾ ಮಂಗೇಶ್ಕರ್ ಅವರು ತಮ್ಮ ತಂದೆ ದೀನನಾಥ ಮಂಗೇಶ್ಕರ್ ಹೆಸರಿನಲ್ಲಿ ಸ್ಥಾಪಿಸಲಾಗಿರುವ ಸ್ಮೃತಿ ಪ್ರತಿಷ್ಠಾನ ಈ ಪುರಸ್ಕಾರ ನೀಡುತ್ತಿತ್ತು. ಇದುವರೆಗೂ 20 ಲೇಖಕರಿಗೆ ಈ ಪುರಸ್ಕಾರ ನೀಡಲಾಗಿದ್ದು ಅವರಲ್ಲಿ 18 ಮರಾಠಿ ಲೇಖಕರು ಹಾಗೂ ಇಬ್ಬರು ಸಿನಿಮಾ ಸಾಹಿತ್ಯ ಕ್ಷೇತ್ರದ ಜಾವೆದ್ ಅಖ್ತರ್ ಮತ್ತು ಮಜರೂರ ಸುಲ್ತಾನಪುರಿ ಸೇರಿದ್ದಾರೆ. ಮಹಾರಾಷ್ಟ್ರದಾಚೆಗಿನ ಲೇಖಕರೊಬ್ಬರಿಗೆ ನೀಡುತ್ತಿರುವ ಮೊದಲ ಸಂದರ್ಭ ಇದಾಗಿದೆ)
*ರಾಷ್ಟ್ರೀಯ ಪ್ರಾಧ್ಯಾಪಕ (ನ್ಯಾಷನಲ್ ಪ್ರೊಫೆಸರ್)[6]
*ಭೈರಪ್ಪಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ,[7]
*ಕಾದಂಬರಿಕಾರ ಪೊ.ಎಸ್‌.ಎಲ್‌.ಭೈರಪ್ಪ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಉದಯವಾಣಿ, 18ಏಪ್ರಿಲ್2015
*S.L.Bhairappa was cheated of Higher Padma Award, in preference. To Shri. Ravishankar, Star of Mysore, July,19,2017
*’ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ’, ‘ಪದ್ಮಶ್ರೀ ಪುರಸ್ಕೃತ ಡಾ.ಎಸ್.ಎಲ್.ಭೈರಪ್ಪನವರಿಗೆ ಮತ್ತೊಂದು ಗೌರವ, ಕನ್ನಡಪ್ರಭ,25, ಸೆಪ್ಟೆಂಬರ್, 2020

error: Content Copyright protected !!