Current AffairsLatest UpdatesSports

ಭಾರತದ ‘ಬಂಗಾರದ ಮನುಷ್ಯ’ ನೀರಜ್ ಚೋಪ್ರಾ

Share With Friends

ಒಲಂಪಿಕ್ಸ್ ಕ್ರೀಡಾಕೂಟದ ಇತಿಹಾಸದಲ್ಲೇ ಭಾರತ ನೀರಜ್ ಚೋಪ್ರಾ ಐತಿಹಾಸಿಕ ದಾಖಲೆ ನಿರ್ಮಾಣ ಮಾಡಿದ್ದು, ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟಿದ್ದಾರೆ. ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಜಾವೆಲಿನ್ ಥ್ರೋ ವಿಭಾಗದಲ್ಲಿ ನೀರಜ್ ಚೋಪ್ರಾ ತಮ್ಮ ಮೊದಲ ಪ್ರಯತ್ನದಲ್ಲೇ ದಾಖಲೆಯ 87.58ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು ಅಗ್ರ ಸ್ಥಾನಿಯಾಗುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಆ ಮೂಲಕ ಜಾವೆಲಿನ್ ಥ್ರೋದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ತಂದುಕೊಟ್ಟ ಕೀರ್ತಿಗೆ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ.

ನೀರಜ್ ಚೋಪ್ರಾ ಚಿನ್ನದ ಪದಕವನ್ನು ಜಯಿಸುವುದರೊಂದಿಗೆ ಐತಿಹಾಸಿಕ ಸಾಧನೆ ಮಾಡಿದ್ದಲ್ಲದೆ ಭಾರತವು ಒಲಿಂಪಿಕ್ಸ್ ವೊಂದರಲ್ಲಿ ಒಟ್ಟು 7 ಪದಕಗಳನ್ನು ಜಯಿಸಲು ನೆರವಾದರು. ಈ ಮೂಲಕ ಒಲಿಂಪಿಕ್ಸ್ ನಲ್ಲ್ಲಿ ಭಾರತವು ಸಾರ್ವಕಾಲಿಕ ಶ್ರೇಷ್ಠ ಸಾಧನೆ ಮಾಡಿತು. ಈ ಹಿಂದೆ ಭಾರತವು 2012ರ ಲಂಡನ್ ಒಲಿಂಪಿಕ್ಸ್ ನಲ್ಲಿ 6 ಪದಕದ ಸಾಧನೆ ಮಾಡಿತ್ತು.

# ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಹರಿಯಾಣದ ಪಾಣಿಪತ್ ಬಳಿಯ ಖಂಡ್ರಾ ಗ್ರಾಮದವರು. ಕೂಡು ಕುಟುಂಬದಿಂದ ಬಂದ ನೀರಜ್ ಚೋಪ್ರಾ ಮನೆಯಲ್ಲಿ 16 ಜನರಿದ್ದಾರೆ. ನೀರಜ್ ತಂದೆ ಕೃಷಿ ಮಾಡುತ್ತಿದ್ದು, ಮನೆಯವರು ಸಾಧಾರಣ ಕೆಲಸ ಹಾಗೂ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಪಾಕೆಟ್ ಮನಿಯಿಂದಲೇ ಸಲಕರಣೆಗಳನ್ನು ಖರೀದಿಸಿ ನೀರಜ್ ಅಭ್ಯಾಸ ಮಾಡುತ್ತಿದ್ದರು.

# ನೀರಜ್ ಚೋಪ್ರಾ ಕುರುಕ್ಷೇತ್ರ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದಿದ್ದು, ಭಾರತೀಯ ಸೇನೆಯಲ್ಲಿ ಸುಬೇದಾರ್ ಕೆಲಸ ಮಾಡುತ್ತಿದ್ದಾರೆ. ನೀರಜ್ ತಮ್ಮ 12ನೇ ವಯಸ್ಸಿನಲ್ಲಿ 90 ಕೆ.ಜಿ ತೂಕ ಹೊಂದಿದ್ದರು. ಬಳಿಕ ಕುಟುಂಬದವರ ಒತ್ತಾಯದ ಮೇರೆಗೆ ಜಿಮ್ ಮಾಡಿ, ಫಿಟ್ನೆಸ್ ಕಾಪಾಡಿಕೊಂಡರು. ನಂತರ ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

# ಹೈಲೈಟ್ಸ್
# ಹಾಗೆಯೇ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ಅಭಿನವ್ ಬಿಂದ್ರಾ ಬಳಿಕ ಒಲಿಂಪಿಕ್ಸ್ ವೈಯಕ್ತಿಕ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪರ ಸ್ವರ್ಣ ಪದಕ ಗೆದ್ದ ಸಾಧನೆ ಮಾಡಿದ್ದಾರೆ.

# ಈ ಹಿಂದೆ 2008 ರ ಬೀಜಿಂಗ್‌ನಲ್ಲಿ ಅಭಿನವ್ ಬಿಂದ್ರಾ ಚಿನ್ನದ ಪದಕ ಗೆದ್ದ ನಂತರ ಒಲಿಂಪಿಕ್ ಇತಿಹಾಸದಲ್ಲಿ ದೇಶಕ್ಕೆ ಸಿಕ್ಕ ಎರಡನೇ ವೈಯಕ್ತಿಕ ಚಿನ್ನದ ಪದಕವಾಗಿದೆ.

# ಭಾರತ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 1 ಚಿನ್ನ, 2 ಬೆಳ್ಳಿ ಹಾಗೂ 4 ಕಂಚಿನ ಪದಕವನ್ನು ಜಯಿಸಿದೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮೊದಲ ದಿನವೇ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಭಾರತದ ಪದಕದ ಖಾತೆ ತೆರೆದಿದ್ದರು. ಮಹಿಳೆಯರ 49 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಜಯಿಸುವುದರೊಂದಿಗೆ 26ರ ಹರೆಯದ ಮಣಿಪುರದ ಚಾನು ಇತಿಹಾಸ ನಿರ್ಮಿಸಿದ್ದರು.

# ಅಸ್ಸಾಂನ 23ರ ವಯಸ್ಸಿನ ಲವ್ಲೀನಾ ಬೊರ್ಗೊಹೈನ್ ಮಹಿಳೆಯರ ವೆಲ್ಟರ್‌ವೇಟ್ ಸ್ಪರ್ಧೆಯಲ್ಲಿ ಸೆಮಿ ಫೈನಲ್ ಪ್ರವೇಶಿಸಿ ಭಾರತಕ್ಕೆ ಪದಕ ಖಚಿತಪಡಿಸಿದರು.

# ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಬ್ಯಾಡ್ಮಿಂಟನ್ ತಾರೆ ಪಿ.ವಿ. ಸಿಂಧು ಅವರು ಸೆಮಿ ಫೈನಲ್‌ನಲ್ಲಿ ವಿಶ್ವದ ನಂ.1 ಆಟಗಾರ್ತಿ ತೈ ಝು ಯಿಂಗ್ ವಿರುದ್ಧ ಸೋಲನುಭವಿಸಿ ನಿರಾಸೆಗೊಳಿಸಿದರಾದರೂಕಂಚಿನ ಪದಕ ತನ್ನದಾಗಿಸಿಕೊಂಡರು.

# ಕುಸ್ತಿಪಟು ರವಿ ಕುಮಾರ ದಹಿಯಾ ನಿರೀಕ್ಷೆಗೂ ಮೀರಿ ಪ್ರದರ್ಶನ ನೀಡಿ ಬೆಳ್ಳಿ ಪದಕ ಗೆದ್ದುಕೊಂಡರು. ನಿರೀಕ್ಷೆ ಮೂಡಿಸಿದ್ದ ಬಜರಂಗ್ ಪುನಿಯಾ ಹಾಗೂ ವಿನೇಶ್ ಫೋಗಟ್ ಪೈಕಿ ಪುನಿಯಾ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.

# ಪುರುಷರ ಹಾಕಿ ತಂಡ ಕಂಚಿನ ಪದಕ ಪಂದ್ಯದಲ್ಲಿ ಜರ್ಮನಿಯನ್ನು ಸೋಲಿಸಿ 41 ವರ್ಷಗಳ ಬಳಿಕ ದೇಶಕ್ಕೆ ಮೊದಲ ಒಲಿಂಪಿಕ್ಸ್ ಪದಕ ಗೆದ್ದುಕೊಟ್ಟಿತ್ತು.

# ನೀರಜ್ ಚೋಪ್ರಾಗೆ ದೇಶಾದ್ಯಂತ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಜತೆಗೆ ಸರ್ಕಾರವೂ ಬಹುಮಾನ ಘೋಷಿಸಿದ್ದು, ಹರಿಯಾಣ ಸರ್ಕಾರ 6 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.

# ಟೋಕಿಯೋ ಒಲಿಂಪಿಕ್ಸ್‌ನ ಚಿನ್ನದ ಪದಕ ವಿಜೇತ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾಗೆ ಮಣಿಪುರ ಕ್ಯಾಬಿನೆಟ್ 1 ಕೋಟಿ ಬಹುಮಾನವನ್ನು ನೀಡುವ ಮೂಲಕ ಗೌರವಿಸಲು ನಿರ್ಧರಿಸಿದೆ.

# ಒಲಿಂಪಿಕ್ಸ್ ಇತಿಹಾಸದಲ್ಲೇ ಪ್ರಥಮ ಬಾರಿಗೆ ಅಥ್ಲೆಟಿಕ್ಸನಲ್ಲಿ ಭಾರತಕ್ಕೆ ಚಿನ್ನ ಗೆದ್ದು ಕೊಟ್ಟು ಇತಿಹಾಸ ನಿರ್ಮಾಣ ಮಾಡಿದ ಹರಿಯಾಣದ ನೀರಜ್ ಚೋಪ್ರಾ ಅವರ ಸಾಧನೆಗೆ ಅಪ್ಪಟ‌ ಕನ್ನಡಿಗರ ಕೊಡುಗೆ ಕೂಡ ಇದೆ. ಮೂರು ವರ್ಷಗಳ‌ ಕಾಲ ಚೋಪ್ರಾ ಅವರಿಗೆ ತರಬೇತು ನೀಡಿದ್ದು ಶಿರಸಿ‌ ಸಮೀಪದ ಬೆಂಗಳೆ ಮೂಲದ, ಭಾರತೀಯ ಸೇನೆಯಲ್ಲಿ‌ ಸುಬೇದುದಾರ ಆಗಿರುವ ಕಾಶಿನಾಥ್ ನಾಯ್ಕ‌

# 2020ರ ಒಲಿಂಪಿಕ್ಸ್‌ನಲ್ಲಿ ಭಾರತದ ಸಾಧನೆ
ಚಿನ್ನ: ನೀರಜ್ ಚೋಪ್ರಾ
ಬೆಳ್ಳಿ: ಮೀರಾಬಾಯಿ ಚಾನು, ರವಿ ಕುಮಾರ್ ದಹಿಯಾ
ಕಂಚು: ಪಿ.ವಿ.ಸಿಂಧು, ಲವ್ಲೀನಾ ಬೊರ್ಗೊಹೈನ್, ಫೀಲ್ಡ್ ಹಾಕಿ, ಬಜರಂಗ್ ಪುನಿಯಾ.

error: Content Copyright protected !!