Agniveer Recruitment 2025 : ಅಗ್ನಿವೀರ್ ನೇಮಕಾತಿ ಆರಂಭ
Agniveer Recruitment 2025 : ಭಾರತೀಯ ಸೇನೆಯಲ್ಲಿ ಅಗ್ನಿವೀರ್ ಆಗಲು ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ.ಭಾರತೀಯ ರಕ್ಷಣಾ ಪಡೆಗಳಾದ ಭೂಸೇನೆ, ವಾಯುಸೇನೆ, ನೌಕಾಸೇನೆಗಳಲ್ಲಿ ಪ್ರತಿವರ್ಷವು ಸಹ ಎರಡು ಬಾರಿ ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆಯಾಗಿದೆ. ಭಾರತೀಯ ರಕ್ಷಣಾ ಪಡೆಗಳಲ್ಲಿ ಅಗ್ನಿಪಥ ಯೋಜನೆಯ ಅಗ್ನಿವೀರರನ್ನು ಜೆನೆರಲ್ ಡ್ಯೂಟಿ, ಟೆಕ್ನೀಷಿಯನ್, ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್, ಟ್ರೇಡ್ಸ್ಮನ್, ಮಹಿಳಾ ಅಗ್ನಿವೀರರನ್ನು ಸೇನಾ ಪೊಲೀಸ್ ಪಡೆಗಳಲ್ಲಿ, ಹೀಗೆ ಈ ಎಲ್ಲಾ ಕೆಟಗರಿಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ. ಆನ್ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ಆನ್ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು.
2025-26ರ ಅಗ್ನಿವೀರರ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಸೇನಾ ನೇಮಕಾತಿ ಕಚೇರಿ ಈ ಪ್ರಕ್ರಿಯೆ ನಡೆಸುತ್ತಿದೆ. ಏಪ್ರಿಲ್ 20, 2025 ಕೊನೆಯ ದಿನವಾಗಿದೆ. ಏಪ್ರಿಲ್ 20ರೊಳಗೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಭಾರತೀಯ ಸೇನೆಗೆ ಸೇರಲು ಅಧಿಕೃತ ವೆಬ್ಸೈಟ್ joinindianarmy.nic.in ಗೆ ಭೇಟಿ ನೀಡುವ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳ ವಿಶೇಷತೆ ಎಂದರೆ ನೀವು ನಾಲ್ಕು ವರ್ಷ ಭಾರತೀಯ ರಕ್ಷಣಾ ಪಡೆಗಳಲ್ಲಿ ಸೇವೆ ಮಾಡುವ ಜತೆಗೆ, ಅತ್ಯುತ್ತಮ ಸಂಬಳ ಪಡೆಯುವ ಜತೆಗೆ, ನಿಮ್ಮ ಮುಂದಿನ ಶಿಕ್ಷಣಗಳನ್ನು ಸಹ ಅಲ್ಲಿಯೇ ಮುಗಿಸಿಕೊಳ್ಳಬಹುದಾಗಿದೆ.
ವಯೋಮಿತಿ : ಕನಿಷ್ಠ 17 ವರ್ಷ 6 ತಿಂಗಳು ಆಗಿರಬೇಕು. ಗರಿಷ್ಠ 21 ವರ್ಷ ವಯಸ್ಸು ಮೀರಿರಬಾರದು.
ಸೇವೆ ಅವಧಿ : 4 ವರ್ಷ.
ವಿದ್ಯಾರ್ಹತೆ : 8Th, SSLC, PUC And ITI ಪಾಸ್ ಆಗಿರಬೇಕು
ಅಗ್ನಿವೀರ್ (ಜೆನೆರಲ್ ಡ್ಯೂಟಿ) : ಎಸ್ಎಸ್ಎಲ್ಸಿ / 10th ಶಿಕ್ಷಣವನ್ನು ಕನಿಷ್ಠ 45 ಶೇಕಡ ಅಂಕಗಳೊಂದಿಗೆ ಪಡೆದಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇಕಡ.33 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಡ್ರೈವಿಂಗ್ ಲೈಸೆನ್ಸ್ ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರ್ (ಟೆಕ್): ದ್ವಿತೀಯ ಪಿಯುಸಿ / 10+2 ಶಿಕ್ಷಣವನ್ನು ಭೌತಶಾಸ್ತ್ರ/ ರಸಾಯನಶಾಸ್ತ್ರ / ಗಣಿತ / ಇಂಗ್ಲಿಷ್ ವಿಷಯಗಳಲ್ಲಿ ಓದಿ, ಶೇಕಡ.50 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಪ್ರತಿ ವಿಷಯದಲ್ಲಿ ಕನಿಷ್ಠ ಶೇಕಡ.40 ಅಂಕಗಳೊಂದಿಗೆ ಪಾಸ್ ಆಗಿರಬೇಕು.
ಅಗ್ನಿವೀರ್ ಕ್ಲರ್ಕ್ / ಸ್ಟೋರ್ ಕೀಪರ್ ಟೆಕ್ನಿಕಲ್ : ಪಿಯುಸಿ ಶಿಕ್ಷಣವನ್ನು ಯಾವುದೇ ವಿಷಯಗಳಲ್ಲಿ (ಆರ್ಟ್ಸ್, ಕಾಮರ್ಸ್, ಸೈನ್ಸ್) ಶೇಕಡ.60 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇಕಡ.50 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್: 10ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇಕಡ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಟ್ರೇಡ್ಸ್ಮನ್ : 8ನೇ ತರಗತಿ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇಕಡ.33 ಅಂಕ ಪಡೆದಿರಬೇಕು.
ಅಗ್ನಿವೀರ್ ಜೆನೆರಲ್ ಡ್ಯೂಟಿ – ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳಾ ಅಗ್ನಿವೀರರು: ಎಸ್ಎಸ್ಎಲ್ಸಿ ಶಿಕ್ಷಣವನ್ನು ಕನಿಷ್ಠ ಶೇಕಡ.45 ಅಂಕಗಳೊಂದಿಗೆ ಪಾಸ್ ಮಾಡಿರಬೇಕು. ಪ್ರತಿ ವಿಷಯದಲ್ಲಿ ಶೇಕಡ.33 ಅಂಕ ಪಡೆದಿರಬೇಕು. ಲೈಟ್ ಮೋಟಾರ್ ವೆಹಿಕಲ್ ವಾಹನ ಚಾಲನ ಪರವಾನಗಿ (ಡಿಎಲ್) ಇರುವವರಿಗೆ ಆದ್ಯತೆ ನೀಡಲಾಗುವುದು.
ಅಗ್ನಿವೀರರ ಹುದ್ದೆಗೆ ಆಯ್ಕೆ ವಿಧಾನ : ಲಿಖಿತ ಪರೀಕ್ಷೆ , ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ ಇರುತ್ತವೆ.
ಅರ್ಜಿ ಶುಲ್ಕ ಎಷ್ಟು..?
ಈ ನೇಮಕಾತಿಗಾಗಿ, ಎಲ್ಲಾ ವರ್ಗಗಳ (ಸಾಮಾನ್ಯ, ಒಬಿಸಿ, ಎಸ್ಸಿ, ಎಸ್ಟಿ, ಇಡಬ್ಲ್ಯೂಎಸ್) ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ, ಇದನ್ನು ಆನ್ಲೈನ್ ಮಾರ್ಗದ ಮೂಲಕ ಮಾತ್ರ ಸ್ವೀಕರಿಸಲಾಗುತ್ತದೆ. ಅರ್ಜಿ ಸಲ್ಲಿಸಲು 10ನೇ ಮತ್ತು 12ನೇ ತರಗತಿಯ ಅಂಕಪಟ್ಟಿಗಳು, ಪ್ರಮಾಣಪತ್ರಗಳು, ಸ್ಕ್ಯಾನ್ ಮಾಡಿದ ಸಹಿ, ಪಾಸ್ಪೋರ್ಟ್ ಗಾತ್ರದ ಫೋಟೋ ಮತ್ತು ಜಾತಿ ಪ್ರಮಾಣಪತ್ರ (ಅನ್ವಯಿಸಿದರೆ) ಅಗತ್ಯವಿದೆ. ಈ ಅಂಶವನ್ನು ಕಡ್ಡಾಯವಾಗಿ ಅರ್ಹ ಅಭ್ಯರ್ಥಿಗಳು ಗಮನಿಸಬೇಕು ಎಂದು ಸೂಚಿಸಲಾಗಿದೆ.
ಭೂಸೇನೆ ಅಗ್ನಿವೀರರಿಗೆ ವೇತನ ಮತ್ತು ಭತ್ಯೆಗಳು
1ನೇ ವರ್ಷ : ರೂ.30,000 ಜತೆಗೆ ಇತರೆ ಭತ್ಯೆಗಳು.
2ನೇ ವರ್ಷ : ರೂ.33,000 ಜತೆಗೆ ಇತರೆ ಭತ್ಯೆಗಳು.
3ನೇ ವರ್ಷ : ರೂ.36,500 ಜತೆಗೆ ಇತರೆ ಭತ್ಯೆಗಳು.
4ನೇ ವರ್ಷ : ರೂ.40,000 ಜತೆಗೆ ಇತರೆ ಭತ್ಯೆಗಳು.
ಅಗ್ನಿವೀರ್ ಹುದ್ದೆಗೆ ನೀಡುವ ಸೇವಾ ನಿಧಿ ಪ್ಯಾಕೇಜ್, ಇತರೆ ಭತ್ಯೆಗಳು
*ರಿಸ್ಕ್ ಅಂಡ್ ಹಾರ್ಡ್ಶಿಪ್, ರೇಷನ್, ಡ್ರೆಸ್, ಪ್ರಯಾಣ ಭತ್ಯೆಗಳನ್ನು ನೀಡಲಾಗುತ್ತದೆ.
ರೂ.48 ಲಕ್ಷ ಮೊತ್ತದ ಜೀವ ವಿಮೆ ಇರುತ್ತದೆ.
*ಅಗ್ನಿವೀರರಿಂದ 9 ಸಾವಿರ ರೂ ಮತ್ತು ಸರ್ಕಾರದ 9 ಸಾವಿರ ರೂ ಗಳ ವಂತಿಗೆಯಿಂದ ಪ್ರತಿ ತಿಂಗಳು 18 ಸಾವಿರ ರೂ.ಗಳ ಪಿಎಫ್ ಸೌಲಭ್ಯ ಇರಲಿದೆ.
*ಒಟ್ಟಾರೆ ವಾರ್ಷಿಕ ಆದಾಯಕ್ಕೆ ತೆರಿಗೆಯಿಂದ ವಿನಾಯಿತಿ ಇದೆ. 48 ಲಕ್ಷ ರೂಪಾಯಿವರೆಗಿನ ವಿಮಾ ಸೌಲಭ್ಯ ಇರಲಿದ್ದು, ಇದಕ್ಕೆ ಸೈನಿಕರು ವಂತಿಕೆ ಕಟ್ಟಬೇಕಿಲ್ಲ.
*ನಿವೃತ್ತಿ ಸಮಯದಲ್ಲಿ ಒಟ್ಟು 11.70 ಲಕ್ಷ ರೂ ನಿವೃತ್ತಿಯ ಪ್ಯಾಕೇಜ್ ಸಿಗಲಿದೆ. ಆದರೆ, ಪಿಂಚಣಿ ಸೌಲಭ್ಯವಿರುವುದಿಲ್ಲ.
*ಸೇವಾ ಸಮಯದಲ್ಲಿ ಜೀವಹಾನಿಯಾದರೆ ಸೈನಿಕರ ಕುಟುಂಬಕ್ಕೆ ಒಂದು ಕೋಟಿ ರೂಪಾಯಿಗಳ ಪರಿಹಾರ ನೀಡಲಾಗುತ್ತದೆ. ಜತೆಗೆ ಉಳಿದ ಸೇವಾ ಅವಧಿಯ ಸಂಬಳ ಪ್ರಾಪ್ತವಾಗಲಿದೆ.
*ಒಂದು ವೇಳೆ ಸೇವೆ ಸಮಯದಲ್ಲಿ ಅಂಗವೈಕಲ್ಯವಾದರೆ ಅದರ ಗಂಭೀರತೆ ಆಧಾರದಲ್ಲಿ ಪರಿಹಾರ ಸಿಗಲಿದೆ. ಸಾಮಾನ್ಯವಾಗಿ ಇದು 44 ಲಕ್ಷ ರೂಪಾಯಿವರೆಗೆ ಇರಲಿದೆ. ಜತೆಗೆ ಸೇವೆಯ ಉಳಿದ ಭಾಗದ ಸಂಬಳ ದೊರೆಯಲಿದೆ.
*ಭಾರತೀಯ ಸೇನೆಗೆ ಸೇರಲು ಅಧಿಕೃತ ವೆಬ್ಸೈಟ್ joinindianarmy.nic.in ಗೆ ಭೇಟಿ ನೀಡಿ