Current AffairsLatest Updates

B.Saroja Devi : ಹಿರಿಯ ಬಹುಭಾಷಾ ನಟಿ ಬಿ.ಸರೋಜಾದೇವಿ ನಿಧನ

Share With Friends
*ಸರೋಜಾ ದೇವಿ ಅವರು 7 ಜನವರಿ 1938 ರಲ್ಲಿ ಜನಿಸಿದರು. ತಮ್ಮ 17 ನೇ ವಯಸ್ಸಿಗೆ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ನಂತರ ಅದ್ಭುತವಾಗಿ ನಟಿಸುತ್ತಾ ಸಿನಿ ಪ್ರೇಮಿಗಳ ಅಚ್ಚುಮೆಚ್ಚಿನ ನಟಿಯಾದರು. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ‘ನಟಸಾರ್ವಭೌಮ’ ಅವರ ಕೊನೆಯ ಚಿತ್ರ.

*1955 ರಲ್ಲಿ ಮಹಾಕವಿ ಕಾಳಿದಾಸ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಸರೋಜಾ ದೇವಿ ಅವರ ಅಭಿನಯದ ಮೊದಲ ಚಿತ್ರವೇ ರಾಷ್ಟ್ರ ಪ್ರಶಸ್ತಿಗೆ ಭಾಜನವಾಗಿತ್ತು. 1955 ರಲ್ಲಿ ಸರೋಜ ದೇವಿ ಶ್ರೀ ರಾಮ ಪೂಜ ಎಂಬ ಚಿತ್ರದಲ್ಲಿ ಕಾಣಿಸಿದ್ದರು.

*ಸರೋಜಾದೇವಿ ಅವರು 1969ರಲ್ಲಿ ಪದ್ಮಶ್ರೀ ಪ್ರಶಸ್ತಿ ಮತ್ತು 1992ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಅವರು ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಮತ್ತು ತಮಿಳುನಾಡಿನಿಂದ ಕಲೈಮಾಮಣಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದರು.

*ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು. ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು.

B. Saroja Devi : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.

ಒಂದು ಕಾಲದಲ್ಲಿ ಕನ್ನಡ ಬೆಳ್ಳಿತೆರೆಯಲ್ಲಿ ಬೆಳಗಿದ ಅಭಿನೇತ್ರಿ. ಕಿತ್ತೂರು ಚೆನ್ನಮ್ಮ ಚಿತ್ರದಲ್ಲಿ ಹೂಂಕರಿಸಿದ್ದ ಬಿ.ಸರೋಜಾದೇವಿ ಬಭ್ರುವಾಹನ ಚಿತ್ರದಲ್ಲಿ ಚಿತ್ರಾಂಗದೆಯಾಗಿದ್ದರು. ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರಗಳಲ್ಲಿ ನಟಿಸಿರುವ ಭಾರತೀಯ ನಟಿ. ಅವರು ಏಳು ದಶಕಗಳಲ್ಲಿ ಸುಮಾರು 200 ಚಿತ್ರಗಳಲ್ಲಿ ನಟಿಸಿದ್ದಾರೆ. ಆಕೆಯನ್ನು ಕನ್ನಡದಲ್ಲಿ “ಅಭಿನಯ ಸರಸ್ವತಿ” (ನಟನೆಯ ಸರಸ್ವತಿ) ಮತ್ತು ತಮಿಳಿನಲ್ಲಿ “ಕನ್ನಡತು ಪೈಂಗಿಲಿ” (ಕನ್ನಡದ ಗಿಳಿ) ಎಂಬ ಉಪನಾಮಗಳಿಂದ ಕರೆಯಲಾಗುತ್ತದೆ. ಅವರು ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಅತ್ಯಂತ ಯಶಸ್ವಿ ನಟಿಯರಲ್ಲಿ ಒಬ್ಬರು.

17 ನೇ ವಯಸ್ಸಿನಲ್ಲಿ, ಅವರನ್ನು ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್‌ಸ್ಟಾರ್ ಎಂದೂ ಕರೆದರು. ಸರೋಜಾದೇವಿ ಅವರು ತಮ್ಮ ಕನ್ನಡ ಚಲನಚಿತ್ರ ಮಹಾಕವಿ ಕಾಳಿದಾಸ (1955) ಚಿತ್ರದ ಮೂಲಕ ದೊಡ್ಡ ಬ್ರೇಕ್ ಪಡೆದರು. ಅವರು ಪಾಂಡುರಂಗ ಮಹಾತ್ಯಂ (1957) ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು ಮತ್ತು 1970 ರ ದಶಕದ ಅಂತ್ಯದವರೆಗೆ ಹಲವಾರು ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿದರು. ತಮಿಳು ಚಲನಚಿತ್ರ ನಾಡೋಡಿ ಮನ್ನನ್ (1958) ಅವರನ್ನು ತಮಿಳು ಚಿತ್ರರಂಗದ ಅಗ್ರ ನಟಿಯರಲ್ಲಿ ಒಬ್ಬರನ್ನಾಗಿ ಮಾಡಿತು. 1967 ರಲ್ಲಿ ಅವರ ಮದುವೆಯ ನಂತರ, ಅವರು 1974 ರವರೆಗೆ ತಮಿಳು ಚಲನಚಿತ್ರಗಳಲ್ಲಿ ಬೇಡಿಕೆಯ ನಟಿಯಾಗಿ ಎರಡನೇ ಸ್ಥಾನದಲ್ಲಿ ಮುಂದುವರೆದರು, ಆದರೆ ಅವರು 1958 ರಿಂದ 1980 ರವರೆಗೆ ತೆಲುಗು ಮತ್ತು ಕನ್ನಡ ಚಿತ್ರರಂಗದಲ್ಲಿ ಅಗ್ರ ನಟಿಯಾಗಿ ಮುಂದುವರೆದರು. ಪೈಘಮ್ (1959) ದಿಂದ ಪ್ರಾರಂಭಿಸಿ 1960 ರ ದಶಕದ ಮಧ್ಯಭಾಗದವರೆಗೆ ಅವರು ಹಿಂದಿ ಚಲನಚಿತ್ರಗಳಲ್ಲಿ ನಟಿಸಿದರು.

ಕನ್ನಡದಲ್ಲಿ ಡಾ.ರಾಜ್‌ಕುಮಾರ್, ಕಲ್ಯಾಣ್‌ಕುಮಾರ್, ಉದಯಕುಮಾರ್ ಅವರ ಜೊತೆ ನಟಿಸಿದರು. ತೆಲುಗಿನಲ್ಲಿ ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್ ಅವರ ಜೊತೆ ನಟಿಸಿದರು. ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿಗಣೇಶನ್ ಜೊತೆಗೆ 22 ಹಿಟ್ ಚಿತ್ರಗಳಲ್ಲಿ, ಎಂ.ಜಿ. ರಾಮಚಂದ್ರನ್ ಜೊತೆ 26 ಹಿಟ್ ಚಿತ್ರಗಳಲ್ಲಿ ನಟಿಸಿದರು. ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್‌ದತ್ ಜೊತೆ ನಟಿಸಿದ ಸರೋಜಾದೇವಿ, ಚತುರ್ಭಾಷಾ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡ ನಟಿ. ದಶಕಗಳ ನಂತರ ಜಯಂತಿ ನಾಲ್ಕು ಭಾಷೆಯಲ್ಲಿ ನಟಿಸಿದರು.

ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ, ಶ್ರೀ ಕೃಷ್ಣ ರುಕ್ಮಿಣಿ ಸತ್ಯಭಾಮಾ, ಲಕ್ಷ್ಮೀಸರಸ್ವತಿ, ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನ ಪಾಟ್ಟಾಲಿ ಮುತ್ತು, ಪಡಿಕಥ ಮೇಥೈ, ಕಲ್ಯಾಣ ಪರಿಸು, ತೆಲುಗಿನ ಪಂಡರಿ ಭಕ್ತಲು, ದಕ್ಷಯಜ್ಞಂ, ಹಿಂದಿಯ ಆಶಾ, ಮೆಹಂದಿ ಲಗ ಕೆ ರಖನಾ, ಮಲೆಯಾಳಂನ ಮುತ್ತುಮಿಂತ್ರೋ ಸೇರಿದಂತೆ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಕನ್ನಡ ಚಿತ್ರರಂಗದ ಮೊದಲ ಮಹಿಳಾ ಸೂಪರ್ ಸ್ಟಾರ್!
ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿ ಯಶಸ್ಸು ಕಂಡ ನಟಿ ಬಿ ಸರೋಜಾ ದೇವಿ. ತಮ್ಮ 7 ದಶಕಗಳ ಸಿನಿ ಜರ್ನಿಯಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ಮಿಂಚಿರುವ ಖ್ಯಾತಿ ಬಿ ಸರೋಜಾ ದೇವಿ ಅವರದ್ದು. ಬಿ ಸರೋಜಾ ದೇವಿ ಅವರ ನಟನೆ ಎಷ್ಟು ನೈಜವಾಗಿರುತ್ತಿತ್ತು ಅಂದ್ರೆ.. ಅವರಿಗೆ ‘ಅಭಿನಯ ಸರಸ್ವತಿ’ ಎಂಬ ಬಿರುದು ಸಿಕ್ಕಿತ್ತು. ಅಭಿನಯದಲ್ಲೇ ‘ಸರಸ್ವತಿ’ ಎಂದು ಕರೆಯಿಸಿಕೊಂಡವರು ಬಿ ಸರೋಜಾ ದೇವಿ. ತಮಿಳು ಚಿತ್ರರಂಗದಲ್ಲಿ ಇವರಿಗೆ ‘ಕನ್ನಡತು ಪೈಂಗಿಲಿ’ ಅಂದ್ರೆ ‘ಕನ್ನಡದ ಗಿಳಿ’ ಎಂಬ ಹೆಸರು ನೀಡಲಾಗಿತ್ತು. ಅಷ್ಟೇ ಅಲ್ಲ… ಸ್ಯಾಂಡಲ್‌ವುಡ್‌ನಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ಮಿಂಚಿದ್ದ ಬಿ ಸರೋಜಾ ದೇವಿ ‘ಕನ್ನಡ ಸಿನಿಮಾರಂಗದ ಮೊದಲ ಮಹಿಳಾ ಸೂಪರ್‌ ಸ್ಟಾರ್‌’ ಸಹ ಹೌದು.

ಪ್ರಶಸ್ತಿಗಳು ಮತ್ತು ಗೌರವಗಳು :
ಸರೋಜಾ ದೇವಿಯವರು 2008 ರಲ್ಲಿ ಅಂದಿನ ಭಾರತದ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರಿಂದ ಜೀವಮಾನದ ಸಾಧನೆಗೆ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು.

‘ರಾಷ್ಟ್ರೀಯ ಪ್ರಶಸ್ತಿಗಳು’
ಭಾರತದ 60 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಭಾರತ ಸರ್ಕಾರದಿಂದ 2008 ರ ಜೀವಮಾನ ಸಾಧನೆ ಪ್ರಶಸ್ತಿ.
1992ರಲ್ಲಿ ಕೇಂದ್ರ ಸರಕಾರದ ‘ಪದ್ಮಭೂಷಣ ಪ್ರಶಸ್ತಿ’
1969ರಲ್ಲಿ ಕೇಂದ್ರ ಸರಕಾರದ ಪದ್ಮ ಶ್ರೀ ಪಡೆದಿದ್ದಾರೆ.

‘ರಾಜ್ಯ ಪ್ರಶಸ್ತಿಗಳು’
2009 – ತಮಿಳುನಾಡು ಸರ್ಕಾರದಿಂದ ಕಲೈಮಾಮಣಿ ಚಿತ್ರಕ್ಕೆ ಜೀವಮಾನ ಸಾಧನೆ ಪ್ರಶಸ್ತಿ
2009 – ಕರ್ನಾಟಕ ಸರ್ಕಾರದಿಂದ ಡಾ.ರಾಜ್‌ಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ
2009 – ಎರಡನೇ ಬಾರಿಗೆ ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ
2001 – ಆಂಧ್ರ ಪ್ರದೇಶ ಸರ್ಕಾರದಿಂದ NTR ರಾಷ್ಟ್ರೀಯ ಪ್ರಶಸ್ತಿ
1993 – ತಮಿಳುನಾಡು ಸರ್ಕಾರದ ಎಂಜಿಆರ್ ಪ್ರಶಸ್ತಿ
1988 – ಕರ್ನಾಟಕ ಸರ್ಕಾರದ ರಾಜ್ಯೋತ್ಸವ ಪ್ರಶಸ್ತಿ
1980 – ಕರ್ನಾಟಕ ರಾಜ್ಯದಿಂದ ಅಭಿನಂದನ-ಕಾಂಚನ ಮಾಲಾ ಪ್ರಶಸ್ತಿ
1969 – ಕುಲ ವಿಳಕ್ಕು ಚಿತ್ರಕ್ಕೆ ಅತ್ಯುತ್ತಮ ನಟಿಯಾಗಿ ತಮಿಳುನಾಡು ರಾಜ್ಯ ಚಲನಚಿತ್ರ ಪ್ರಶಸ್ತಿ
1965 – ಕರ್ನಾಟಕದಿಂದ ಅಭಿನಯ ಸರಸ್ವತಿ ಗೌರವ

‘ಇತರ ಪ್ರಶಸ್ತಿಗಳು’
2009 – ನಾಟ್ಯ ಕಲಾಧರ್ ಪ್ರಶಸ್ತಿ— ತಮಿಳು ಸಿನಿಮಾ, ಭರತ್ ಕಲಾಚಾರ್ ಚೆನ್ನೈ
2007 – ಕರ್ನಾಟಕ ತೆಲುಗು ಅಕಾಡೆಮಿಯಿಂದ ಗಮನಾರ್ಹ ಸಾಧನೆಗಾಗಿ NTR ಪ್ರಶಸ್ತಿ
2007 – ಚಾರಿಟಬಲ್ ಟ್ರಸ್ಟ್ ಮತ್ತು ರೋಟರಿ ಕ್ಲಬ್ ಆಫ್ ಚೆನ್ನೈನಿಂದ ರೋಟರಿ ಶಿವಾಜಿ ಪ್ರಶಸ್ತಿ
2006 – ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್
2006 – ತಮಿಳು ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ವಿಜಯ್ ಪ್ರಶಸ್ತಿ
2003 – ಸರ್ವಾಂಗೀಣ ಸಾಧನೆಗಾಗಿ ದಿನಕರನ್ ಪ್ರಶಸ್ತಿ
1997 – ಚೆನ್ನೈನಲ್ಲಿ ಸಿನಿಮಾ ಎಕ್ಸ್‌ಪ್ರೆಸ್‌ನಿಂದ ಜೀವಮಾನ ಸಾಧನೆ ಪ್ರಶಸ್ತಿಗಳು
1994 – ಫಿಲ್ಮ್‌ಫೇರ್ ಜೀವಮಾನ ಸಾಧನೆ ಪ್ರಶಸ್ತಿ

ಬಿ. ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ
2010 ರಲ್ಲಿ, ಭಾರತೀಯ ವಿದ್ಯಾ ಭವನ ‘ಪದ್ಮಭೂಷಣ ಬಿ. ಸರೋಜಾದೇವಿ ರಾಷ್ಟ್ರೀಯ ಪ್ರಶಸ್ತಿ’, ಪ್ರತಿ ವರ್ಷ ಪ್ರದರ್ಶನ ಕಲೆಯ ಕಲಾವಿದರನ್ನು ಗೌರವಿಸುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸ್ಥಾಪಿಸಿತು. ಕೆ.ಜೆ.ಯೇಸುದಾಸ್, ವೈಜಯಂತಿಮಾಲಾ, ಅಂಜಲಿದೇವಿ, ಅಂಬರೀಶ್, ಜಯಂತಿ ಮತ್ತಿತರರು ಈ ಪ್ರಶಸ್ತಿಯನ್ನು ಗಳಿಸಿದ್ದಾರೆ

error: Content Copyright protected !!