Current AffairsSpardha TimesSports

ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ಹೊಸ ದಾಖಲೆ ಬರೆದ ಬೆನ್‌ ಡಕೆಟ್‌

Share With Friends

ಆಸ್ಟ್ರೇಲಿಯಾ ವಿರುದ್ದದ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 165 ರನ್‌ಗಳನ್ನು ಸಿಡಿಸುವ ಮೂಲಕ ಇಂಗ್ಲೆಂಡ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ನೂತನ ದಾಖಲೆಯನ್ನು ಬರೆದಿದ್ದಾರೆ. ತಮ್ಮ ಸೊಗಸಾದ ಇನಿಂಗ್ಸ್‌ನಲ್ಲಿ ಬೆನ್‌ ಡಕೆಟ್‌ 3 ಸಿಕ್ಸರ್‌ ಹಾಗೂ 17 ಬೌಂಡರಿಗಳನ್ನು ಸಿಡಿಸಿದರು. ಇದರಲ್ಲಿ ಅವರ 115ರ ಸ್ಟ್ರೈಕ್‌ ರೇಟ್‌ನಲ್ಲಿ ರನ್‌ಗಳನ್ನು ಗಳಿಸಿದ್ದಾರೆ.

*ತಮ್ಮ ವೃತ್ತಿ ಜೀವನದ ಶ್ರೇಷ್ಠ ಇನಿಂಗ್ಸ್‌ ಮೂಲಕ ಬೆನ್‌ ಡಕೆಟ್‌ ಅವರು ನೂತನ ಮೈಲುಗಲ್ಲು ತಲುಪಿದ್ದಾರೆ. ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಇತಿಹಾಸದಲ್ಲಿಯೇ ವೈಯಕ್ತಿಕ ಗರಿಷ್ಠ ಮೊತ್ತವನ್ನು ಕಲೆ ಹಾಕಿದ ಬ್ಯಾಟ್ಸ್‌ಮನ್‌ ಎಂಬ ದಾಖಲೆಯನ್ನು ಬೆನ್‌ ಡಕೆಟ್‌ ಬರೆದಿದ್ದಾರೆ.

*ಆ ಮೂಲಕ 23 ವರ್ಷಗಳ ಹಳೆಯ ದಾಖಲೆಯನ್ನು ಮುರಿದಿದ್ದಾರೆ. ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ 150 ಅಥವಾ ಅದಕ್ಕಿಂತ ಹೆಚ್ಚು ರನ್‌ ಗಳಿಸಿದ ಬ್ಯಾಟ್ಸ್‌ಮನ್‌ ಎನಿಸಿಕೊಂಡಿದ್ದಾರೆ.

*ಆಂಡಿ ಫ್ಲವರ್‌ ಮತ್ತು ನೇಥನ್‌ ಆಶ್ಲೆ ಅವರು ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡಿದ್ದರು. ಆಂಡಿ ಫ್ಲವರ್‌ ಅವರು 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಪಂದ್ಯದಲ್ಲಿ 164 ಎಸೆತಗಳಲ್ಲಿ 145 ರನ್‌ಗಳನ್ನು ಕಲೆ ಹಾಕಿದ್ದರು.

*ಇನ್ನು ನೇಥನ್‌ ಆಶ್ಲೇ ಅವರು 2004ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಯುಎಸ್‌ಎ ವಿರುದ್ದದ ಪಂದ್ಯದಲ್ಲಿ 151 ಎಸೆತಗಳಲ್ಲಿ ಅಜೇಯ 145 ರನ್‌ಗಳನ್ನು ದಾಖಲಿಸಿದ್ದರು.

*2017ರ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಜೋ ರೂಟ್‌ 133 ರನ್‌ಗಳನ್ನು ಕಲೆ ಹಾಕಿದ್ದರು. 2002ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯ ಜಿಂಬಾಬ್ವೆ ವಿರುದ್ದದ ಪಂದ್ಯದಲ್ಲಿ ಮಾರ್ಕಸ್‌ ಟ್ರೆಸ್ಕೋಥಿಕ್‌ 119 ರನ್‌ಗಳನ್ನು ಗಳಿಸಿದ್ದರು.

*ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯಲ್ಲಿ ವೈಯಕ್ತಿಕ ಗರಿಷ್ಠ ಮೊತ್ತ ಕಲೆ ಹಾಕಿದ ಇಂಗ್ಲೆಂಡ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಬೆನ್‌ ಡಕೆಟ್‌ ಅಗ್ರ ಸ್ಥಾನವನ್ನು ಅಲಂಕರಿಸಿದ್ದಾರೆ.

Leave a Reply

Your email address will not be published. Required fields are marked *