ಗೃಹರಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಿಲ್ಲೆಯ ವಿವಿಧ ತಾಲೂಕು ಮತ್ತು ಉಪ ಘಟಕಗಳಲ್ಲಿ ಖಾಲಿ ಇರುವ 247 ಸ್ವಯಂ ಸೇವಕ ಹೋಂ ಗಾರ್ಡ್ (Chikkamagaluru Home Guards Recruitment 2024) ಹುದ್ದೆಗಳಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಸಲು 31/01/2024 ಕೊನೆಯ ದಿನಾಂಕವಾಗಿರುತ್ತದೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿಗಳನ್ನು ಚಿಕ್ಕಮಗಳೂರು ಜಿಲ್ಲಾ ಗೃಹರಕ್ಷ ಕಛೇರಿಯಿಂದ ಹಾಗೂ ಘಟಕಾಧಿಕಾರಿ ಕಛೇರಿಯಿಂದ ಗೃಹರಕ್ಷಕ ದಳದಿಂದ ಉಚಿತವಾಗಿ ಪಡೆಯಬಹುದಾಗಿದೆ. ಅರ್ಜಿಯ ಜೊತೆಯಲ್ಲಿ ಅಭ್ಯರ್ಥಿ ತನ್ನ ಜನ್ಮ ದಿನಾಂಕ ದೃಢೀಕರಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ ಮತ್ತು ಪಾಸ್ ಪೋರ್ಟ್ ಅಳತೆಯ ಚಿತ್ರವನ್ನು ಜಿಲ್ಲೆಯ ಗೃಹ ರಕ್ಷಕ ಘಟಕ ಅಧಿಕಾರಿಗಳಿಗೆ ಸಲ್ಲಿಸಲು ಸೂಚಿಸಲಾಗಿದೆ.
✦ ಒಟ್ಟು ಹುದ್ದೆಗಳು : 247
✦ ಉದ್ಯೋಗ ಸ್ಥಳ: ಚಿಕ್ಕಮಗಳೂರು
✦ ವಿದ್ಯಾರ್ಹತೆ : ಯಾವುದೇ ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಉತ್ತಿರ್ಣ ಆಗಿರಬೇಕು. ಅಭ್ಯರ್ಥಿ ಯಾವುದೇ ಕ್ರಿಮಿನಲ್ ಕೇಸ್ ದಾಖಲಾಗಿರಬಾರದು.
✦ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ ಸೈಟ್ : hgcd.karnataka.gov.in