CISF Recruitment : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ 1161 ಹುದ್ದೆಗಳ ನೇಮಕಾತಿ
CISF Recruitment : ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್)ಯು ಖಾಲಿ ಉದ್ಯೋಗಗಳನ್ನು ಭರ್ತಿ ಮಾಡಲು ಮುಂದಾಗಿದೆ. ಈ ಸಂಬಂಧ ಕಾನ್ಸ್‌ಟೇಬಲ್/ಟ್ರೇಡ್ಸ್‌ಮೆನ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ. 10ನೇ ತರಗತಿಯ ಅರ್ಹತೆಯುಳ್ಳ ಅಭ್ಯರ್ಥಿಗಳು ಮಾರ್ಚ್ 5 ರಿಂದ ಏಪ್ರಿಲ್ 3 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಮೂಲಕ ಒಟ್ಟು 1161 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಪ್ರಮುಖ ದಿನಾಂಕಗಳು :
ಅರ್ಜಿ ಪ್ರಾರಂಭ ದಿನಾಂಕ:- 05/03/2025
ಅರ್ಜಿ ಕೊನೆಯ ದಿನಾಂಕ:- 03/04/2025
ಒಟ್ಟು ಹುದ್ದೆಗಳ ಸಂಖ್ಯೆ: 1,161 ಹುದ್ದೆಗಳು
ಶೈಕ್ಷಣಿಕ ಅರ್ಹತೆ:
ಸ್ನೇಹಿತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರು ಕನಿಷ್ಠ ಎಸ್ ಎಸ್ ಎಲ್ ಸಿ ಪಾಸಾದರೆ ಸಾಕು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು
ವಯೋಮಿತಿ ಎಷ್ಟು:
ಸ್ನೇಹಿತರ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿ 28 ವರ್ಷಗಳವರೆಗೆ ಅಭ್ಯರ್ಥಿಗಳಿಗೆ ನಿಗದಿ ಮಾಡಲಾಗಿದೆ ಮತ್ತು ಮೀಸಲಾತಿ ಆಧಾರದ ಮೇಲೆ ವಯೋಮಿತಿ ಸಡಿಲಿಕೆ ಇದೆ,
ವೇತನ ನಶ್ರೇಣಿ :
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ನೇಮಕಾತಿ ಅಧಿಸೂಚನೆ ಪ್ರಕಾರ ಈ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಡ್ರೈವರ್ ಹುದ್ದೆಗಳಿಗೆ ಆಯ್ಕೆ ಆದಂತಹ ಅಭ್ಯರ್ಥಿಗಳಿಗೆ ಹುದ್ದೆಗಳ ಅನುಗುಣವಾಗಿ ಮಾಸಿಕವಾಗಿ ₹27,700/- ರಿಂದ ₹69,100 ವರೆಗೆ ಸಂಬಳ ನೀಡಲಾಗುತ್ತದೆ
ಅರ್ಜಿ ಶುಲ್ಕ:
ಸಾಮಾನ್ಯ/OBC/EWS ಅಭ್ಯರ್ಥಿಗಳಿಗೆ:- ₹100/-
ST/SC, ಮಹಿಳಾ ಅಭ್ಯರ್ಥಿಗಳಿಗೆ:- ಯಾವುದೇ ಅರ್ಜಿ ಶುಲ್ಕ ಇಲ್ಲ
ಆಯ್ಕೆ ವಿಧಾನ :
ಯಾವ ಪರೀಕ್ಷೆಗಳನ್ನು ನಡೆಸಲಾಗುವುದು?
ಸಿಐಎಸ್ಎಫ್ ಕಾನ್ಸ್‌ಟೇಬಲ್ ನೇಮಕಾತಿ ಪ್ರಕ್ರಿಯೆಯು ದೈಹಿಕ ದಕ್ಷತೆ ಪರೀಕ್ಷೆ (ಪಿಇಟಿ), ದೈಹಿಕ ಗುಣಮಟ್ಟ ಪರೀಕ್ಷೆ (ಪಿಎಸ್‌ಟಿ), ದಾಖಲೆ ಪರಿಶೀಲನೆ, ವ್ಯಾಪಾರ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಈ ಎಲ್ಲಾ ಆಯ್ಕೆ ಪ್ರಕ್ರಿಯೆಗಳನ್ನು ವಿವಿಧ ನೇಮಕಾತಿ ಕೇಂದ್ರಗಳಲ್ಲಿ ನಡೆಸಲಾಗುವುದು. ಅಭ್ಯರ್ಥಿಗಳು ಈ ಎಲ್ಲಾ ಹಂತಗಳನ್ನು ಯಶಸ್ವಿಯಾಗಿ ಪಾಸಾಗಬೇಕು.
ಅರ್ಜಿ ಸಲ್ಲಿಸುವುದು ಹೇಗೆ (Constable recruitment 2025).?
ಸ್ನೇಹಿತರೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಕಾಲಿ ಇರುವಂತ 1,161 ಹುದ್ದೆಗಳಿಗೆ ನೀವು ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ಕೆಳಗಡೆ ನೀಡಿದಂತ ಲಿಂಕ್ ಬಳಸಿಕೊಂಡು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸುವ ಮುನ್ನ ಈ ಹುದ್ದೆಗಳ ನೇಮಕಾತಿ ಕುರಿತು ಅಧಿಕೃತ ಅಧಿಸೂಚನೆ ಡೌನ್ಲೋಡ್ ಮಾಡಿಕೊಂಡು ಪ್ರತಿಯೊಂದು ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಿ ನಂತರ ಅರ್ಜಿ ಸಲ್ಲಿಸಿ
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಸಲ್ಲಿಸಲು https://cisfrectt.cisf.gov.in/ ವೆಬ್ಸೈಟ್ ವಿಳಾಸಕ್ಕೆ ಭೇಟಿನೀಡಿ.