ರಾಷ್ಟ್ರಧ್ವಜದ ಬಗ್ಗೆ ಪ್ರತಿಯೊಬ್ಬರೂ ತಿಳಿದಿರಲೇಬೇಕಾದ ಸಾಮಾನ್ಯ ಸಂಗತಿಗಳು
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ 22, 1947ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ 15, 1947ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ 26 1950 ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ ಬಾವುಟವಾಗಿಯೂ, 26, ಜನವರಿ, 1950ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ. ಹಿಂದಿ ಭಾಷೆಯಲ್ಲಿ ತಿರಂಗಾ, ಕನ್ನಡದಲ್ಲಿ ತ್ರಿವರ್ಣ – ಮೂರು ವರ್ಣಗಳ ಧ್ವಜವೆಂದು ಸೂಚಿಸುವ ಪದಗಳು ಭಾರತದ ಬಾವುಟವನ್ನು ಸೂಚಿಸುವಾಗ ಬಳಕೆಯಲ್ಲಿದೆ.
# ನಮ್ಮ ರಾಷ್ಟ್ರದ್ವಜದ ಬಣ್ಣಗಳ ವಿಶೇಷತೆ :
➤ ಕೇಸರಿ : ತ್ರಿವರ್ಣ ಧ್ವಜದಲ್ಲಿ ಮೇಲೆ ಇರುವ ಕೇಸರಿ ಬಣ್ಣ ಧೈರ್ಯ, ಪರಿತ್ಯಾಗ ಮತ್ತು ದೇಶದ ಒಳಿತಿಗಾಗಿ ನಡೆಯುವ ಬಲಿದಾನಗಳ ಸಂಕೇತವಾಗಿದೆ.
➤ ಬಿಳಿ : ಧ್ವಜದ ಮಧ್ಯೆ ಇರುವ ಬಿಳಿ ಬಣ್ಣ ಸತ್ಯ, ಶಾಂತಿ ಮತ್ತು ಶುದ್ಧತೆಯ ಸಂಕೇತವಾಗಿದೆ. ಆ ಮೂಲಕ ಶುದ್ಧ ಮನಸ್ಸಿನವರೊಡನೆ ನಿತ್ಯವೂ ಸತ್ಯ ಶಾಂತಿಗಳೊಂದಿಗೆ ನಮ್ಮನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಸತ್ಯ ಮಾರ್ಗದ ಸಂಕೇತ ಬಿಳಿ.
➤ ಹಸಿರು : ಕೆಳಗೆ ಇರುವ ಹಸಿರು ಬಣ್ಣ ಪ್ರಗತಿಯ ಸಂಕೇತವೂ ಹೌದು. ಜೊತೆಗೆ ಮನುಷ್ಯ ಮತ್ತು ಪ್ರಕೃತಿಯ ನಡುವಿನ ಅವಿನಾಭಾವ ಸಂಬಂಧವನ್ನು ತಿಳಿಸುತ್ತದೆ. ವಿಶಾಲವಾದ ಈ ಪ್ರಕೃತಿಯಲ್ಲಿ ಮನುಷ್ಯ ಅತಿಥಿಯಷ್ಟೇ. ಹಾಗಾಗಿ ಪ್ರಕೃತಿಯೊಡನೆ ಬೆರೆತು ಹಚ್ಚ ಹಸಿರಿನ ಒಡಲಿಗೆ ತೊಂದರೆ ಉಂಟು ಮಾಡದೆ ಅದರ ಅಸ್ತಿತ್ವವನ್ನು ಕಾಪಾಡಿಕೊಂಡು ಬರಬೇಕು. ಜೊತೆಗೆ ಪ್ರಕೃತಿಯಲ್ಲಿರುವ ಸಕಲ ಜೀವರಾಶಿಯ ಜೊತೆ ಮನುಷ್ಯ ಬಾಂಧವ್ಯದಿಂದ ಇರಬೇಕು ಎನ್ನುವುದನ್ನು ಸೂಚಿಸುತ್ತದೆ.
➤ ಅಶೋಕ ಚಕ್ರ :
ಅಂದಹಾಗೆ, ನಮ್ಮ ತ್ರಿವರ್ಣಧ್ವಜ ರೂಪುಗೊಂಡಿದ್ದು 1931ರಲ್ಲಿ. ಸ್ವಾತಂತ್ರ್ಯ ಪೂರ್ವದಲ್ಲಿ ತ್ರಿವರ್ಣ ಧ್ವಜದ ಮಧ್ಯೆ ಮಹಾತ್ಮ ಗಾಂಧೀಜಿ ಅವರ ಚರಕವನ್ನು ಅಳವಡಿಸಲಾಗಿತ್ತು. ಆದರೆ ನಂತರ ಜುಲೈ 22, 1947ರಲ್ಲಿ ಚರಕದ ಬದಲಾಗಿ ವೃತ್ತಾಕಾರದಲ್ಲಿರುವ ಅಶೋಕ ಚಕ್ರವನ್ನು ಬಳಸಿ, ಕೇಸರಿ ಬಿಳಿ ಹಸಿರು ಬಣ್ಣದ ಧ್ವಜದ ಮಧ್ಯೆ ಅಶೋಕಚಕ್ರ ಇರುವ ರಾಷ್ಟ್ರಧ್ವಜವನ್ನು ಸಂವಿಧಾನಬದ್ಧವಾಗಿ ಅಂಗೀಕರಿಸಲಾಯಿತು. ಅಶೋಕ ಚಕ್ರವು ಬೌದ್ಧ ದೊರೆ ಸಾಮ್ರಾಟ್ ಅಶೋಕನ ಚಿಹ್ನೆಯಾಗಿದ್ದು, ರಾಷ್ಟ್ರಧ್ವಜದಲ್ಲಿರುವ ಈ ಚಕ್ರವು ಧರ್ಮವನ್ನು ಪ್ರತಿನಿಧಿಸಿದರೆ ಆ ಚಕ್ರದ ಮಧ್ಯೆ ಇರುವ 24 ಗೆರೆಗಳು ವಿವಿಧ ಆಚರಣೆ, ಸಂಸ್ಕೃತಿ, ವಿವಿಧತೆಯಂತಹ ಬಹುತ್ವವನ್ನು ಪ್ರತಿನಿಧಿಸುತ್ತದೆ.
# ತ್ರಿವರ್ಣ ಧ್ವಜದ ವೈಶಿಷ್ಟ್ಯ :
ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ. ಈ ನಮ್ಮ ಸ್ವಾತಂತ್ರ್ಯ ದೇಶದ ಸಂಕೇತವಾಗಿರುವ ರಾಷ್ಟ್ರದ್ವಜದ ಅವಹೇಳನ ರಾಷ್ಟ್ರದ್ರೋಹವಾಗಿರುತ್ತದೆ.
ಅದರ ಉಳಿವಿಗಾಗಿ ಬಲಿದಾನವಾಗಲು ಸದಾ ಸಿದ್ದವಾಗಿರುವ ನಾವುಗಳು ಅದರ ಮೇಲಿರುವ ಭಕ್ತಿಯನ್ನೇ ದೇಶಭಕ್ತಿ ಎನ್ನುತ್ತೇವೆ. ಅಂದಿನ ಪ್ರಧಾನಿಯಾಗಿದ್ದ ಜವಾಹರಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೇಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ. ಆದರೆ ಅದು ಕೈ ನೂಲು ಮತ್ತು ಕೈ ನೇಯ್ಗೆಯದೇ ಆಗಿರಬೇಕು.
ಕೇಸರಿ – ಬಿಳಿ – ಹಸಿರು ಬಣ್ಣಗಳ ಅಳತೆ ಸಮ ಪ್ರಮಾಣದಲ್ಲಿ ಇದ್ದು ನೀಲಿಚಕ್ರವು ಹೆಚ್ಚು ಕಡಿಮೆ ಬಿಳಿ ಬಣ್ಣದ ಅಡ್ಡ ಗೆರೆಗಳಷ್ಟಿದ್ದು, ಅದರಲ್ಲಿ ಇಪ್ಪತ್ತ ನಾಲ್ಕು ರೇಖೆಗಳಿವೆ. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರ ತಕ್ಕದ್ದು ಎಂದು ತಿಳಿಸಿದೆ. ರಾಷ್ಟ್ರಧ್ವಜ ತಯಾರಿಸುವ ಹಕ್ಕು ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ.
ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ. ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.
# ರಾಷ್ಟ್ರಧ್ವಜ ವಿನ್ಯಾಸ ಮಾಡಿದವರು ಯಾರು?
ದೇಶಾದ್ಯಂತ ಇಂದು ರಾರಾಜಿಸುತ್ತಿರುವ ದೇಶದ ರಾಷ್ಟ್ರದ ಧ್ವಜದ ವಿನ್ಯಾಸ ಮಾಡಿದವರು ಸ್ವಾತಂತ್ರ್ಯ ಹೋರಾಟಗಾರ “ಪಿಂಗಾಳಿ ವೆಂಕಯ್ಯ”. 1876ರ ಆಗಸ್ಟ್ 2ರಂದು ಆಂಧ್ರಪ್ರದೇಶದ(ಈಗಿನ) ಮಚಿಲಿಪಟ್ಟಣಂ ಸಮೀದಪ ಭಟ್ಲಾಪೆನುಮರ್ರು ಎಂಬಲ್ಲಿ ಪಿಂಗಾಳಿ ಜನಿಸಿದ್ದರು.
ಭಾರತೀಯ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸ್ವ ಘೋಷಿತ ನೂರಾರು ರಾಷ್ಟ್ರಧ್ವಜಗಳನ್ನು ಬಳಸಲಾಗಿತ್ತು. ಕೊನೆಗೆ ಸ್ಪಷ್ಟ ಹಾಗೂ ಅಧಿಕೃತ ವಿನ್ಯಾಸದ ಧ್ವಜ 1947ರಲ್ಲಿ ರೂಪತಳೆದಿತ್ತು. ಪಿಂಗಾಳಿ ವೆಂಕಯ್ಯ ಅವರ ವಿನ್ಯಾಸದಲ್ಲೇ ಸ್ವಲ್ಪ ಬದಲಾವಣೆ ಮಾಡಿ 1947ರಲ್ಲಿ ಅಂಗೀಕರಿಸಲಾಗಿತ್ತು.
ಹಿಂದೂ ಪತ್ರಿಕೆಯಲ್ಲಿ ಅಂದು ಪ್ರಕಟವಾದ ವರದಿ ಪ್ರಕಾರ, ಪಿಂಗಾಳಿ ವೆಂಕಯ್ಯ ಅವರೊಬ್ಬ ಭೂ ತಜ್ಞರಾಗಿದ್ದರು, ಕೃಷಿಕ ಹಾಗೂ ಶಿಕ್ಷಣ ಪ್ರೇಮಿಯಾಗಿದ್ದರು. ಆದರೆ 1963ರಲ್ಲಿ ಪಿಂಗಾಳಿ ಬಡತನದಲ್ಲಿಯೇ ಇಹಲೋಕ ತ್ಯಜಿಸಿದ್ದರು. ಅಷ್ಟೇ ಅಲ್ಲ ಇಡೀ ಸಮಾಜವೇ ಅವರನ್ನು ಮರೆತುಬಿಟ್ಟಿತ್ತು. 2009ರಲ್ಲಿ ಕೇಂದ್ರ ಸರ್ಕಾರ ಗೌರವಾರ್ಥವಾಗಿ ಅಂಚೆಚೀಟಿ ಬಿಡುಗಡೆಗೊಳಿಸಿತ್ತು! 2011ರಲ್ಲಿ ಪಿಂಗಾಳೆ ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಘೋಷಿಸಬೇಕೆಂದು ಪ್ರಸ್ತಾಪ ಸಲ್ಲಿಸಲಾಗಿತ್ತು. ಆದರೆ ಅದು ಈವರೆಗೂ ಈಡೇರಿಲ್ಲ.
# ಗರಗ ಗ್ರಾಮಕ್ಕೆ ರಾಷ್ಟ್ರಧ್ವಜ ತಯಾರಿಸುವ ಹಕ್ಕು :
ರಾಜ್ಯದ ಧಾರವಾಡ ಜಿಲ್ಲೆಯ ಗರಗ ಗ್ರಾಮಕ್ಕೆ ರಾಷ್ಟ್ರಧ್ವಜ ತಯಾರಿಸುವ ಹಕ್ಕು ನೀಡಲಾಗಿದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು 52 ಇಂತಹ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿದೆ. ಭಾರತದ ಸಂವಿಧಾನದಲ್ಲಿ ಉಲ್ಲೇಖಿಸಿದಂತೆ ಮತ್ತು ಭಾರತೀಯ ಸ್ಟ್ಯಾಂಡರ್ಡ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜ ಉತ್ಪಾದಿಸಬೇಕು. ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನ(ರಾಷ್ಟ್ರಧ್ವಜ) ತಿರಸ್ಕೃತವಾಗುತ್ತದೆ.
ಕರ್ನಾಟಕ ಖಾದಿ ಗ್ರಾಮೋದ್ಯೋಗ ಸಂಯುಕ್ತ ಸಂಘದ ಇತಿಹಾಸ
ಕೆಕೆಜಿಎಸ್ಎಸ್ ಅನ್ನು ನವೆಂಬರ್ 7,1957ರಂದು ಸ್ಥಾಪಿಸಲಾಯಿತು. ಗಾಂಧೀವಾದಿಗಳ ಗುಂಪೊಂದು ಈ ಪ್ರದೇಶದ ಖಾದಿ ಮತ್ತು ಇತರೆ ಗುಡಿ ಕೈಗಾರಿಕೆಗಳ ಬೆಳವಣಿಗೆಗೆ ಒಕ್ಕೂಟವನ್ನು ರಚಿಸಲಾಯಿತು. ವೆಂಕಟೇಶ್ ಮಾಗಡಿ ಮತ್ತು ಶ್ರೀರಂಗ ಕಾಮತ ಎನ್ನುವವರು ಕ್ರಮವಾಗಿ ಮೊದಲ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿದ್ದರು.
ಕರ್ನಾಟಕದ ಸುಮಾರು 58 ಸಂಸ್ಥೆಗಳನ್ನು ಈ ಸಂಘದ ಆಶ್ರಯದಲ್ಲಿ ತರಲಾಯಿತು ಮತ್ತು ಹುಬ್ಬಳ್ಳಿಯಲ್ಲಿ ಪ್ರಧಾನ ಕಚೇರಿಯಾಗಿ ಕಾರ್ಯ ನಿರ್ವಹಿಸಲು ಪ್ರಾರಂಭಿಸಿತು. ಇದು 17 ಎಕರೆ ಪ್ರದೇಶದಲ್ಲಿ ಉತ್ಪಾದನಾ ಸೌಲಭ್ಯಗಳ ಜೊತೆಗೆ, ಟೆಕ್ಸಟೈಲ್ ವಿದ್ಯಾರ್ಥಿಗಳಿಗೆ ತರಬೇತಿ ಕಾಲೇಜನ್ನು ಸಹ ಹೊಂದಿದೆ. ಖಾದಿ ಉತ್ಪಾದನೆಯೂ 1982ರಲ್ಲಿ ಪ್ರಾರಂಭವಾದರೂ ಧ್ವಜ ಉತ್ಪಾದನೆಯು 2004ರಿಂದ ಕಾರ್ಯಚರಣೆಯನ್ನು ನಿರ್ವಹಿಸಲು ಪ್ರಾರಂಭಿಸಿತು. 10,500 ರೂ.ಗಳ ಹೂಡಿಕೆಯೊಂದಿಗೆ ಪ್ರಾರಂಭವಾದ ಈ ಸಂಘ ಇಂದು ವರ್ಷಕ್ಕೆ ಸರಾಸರಿ 1 ಕೋಟಿ ರೂ.ಗಳ ಮೌಲ್ಯದ ಧ್ವಜಗಳನ್ನು ತಯಾರಿಸುತ್ತದೆ.
# ಮೊದಲ ರಾಷ್ಟ್ರಧ್ವಜ ಹಸಿರು, ಹಳದಿ ಮತ್ತು ಕೆಂಪು :
ಒಂದು ವರದಿ ಪ್ರಕಾರ, ಭಾರತದ ಮೊದಲ ರಾಷ್ಟ್ರಧ್ವಜ ಹಸಿರು, ಹಳದಿ ಮತ್ತು ಕೆಂಪು ಪಟ್ಟಿಯನ್ನು ಹೊಂದಿತ್ತು. ಈ ಧ್ವಜವನ್ನು 1906ರ ಆಗಸ್ಟ್ 7ರಂದು ಹಾರಿಸಲಾಗಿತ್ತು. ಇದೊಂದು ಧಾರ್ಮಿಕ ಸಂಕೇತದ ಧ್ವಜವಾಗಿದ್ದು, ಇದರಲ್ಲಿ ಎಂಟು ಹೂಗಳು ಮತ್ತು ಅದರ ಮೇಲೆ ವಂದೇ ಮಾತರಂ ಅನ್ನು ಬರೆಯಲಾಗಿತ್ತು. ಹೆಮ್ಮೆಯ ವಿಚಾರ ಏನೆಂದರೆ ಇದೇ ಮೊದಲ ಬಾರಿಗೆ ನ್ಯೂಯಾರ್ಕ್ ಟೈಮ್ಸ್ ಸ್ಕ್ವಾರ್ ನಲ್ಲಿ (ಆಗಸ್ಟ್ 15, 2020) ಭಾರತೀಯ ತ್ರಿವರ್ಣ ಧ್ವಜ ಹಾರಿಸಲಾಗಿದೆ.
# ರಾಷ್ಟ್ರ ದ್ವಜವನ್ನು ಸರಿಯಾಗಿ ಪ್ರದರ್ಶನ ಮಾಡುವ ಕೆಲವು ವಿಧಾನಗಳು :
ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು. ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.
ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು. ದ್ವಜ ಏರಿಸುವಾಗ ದ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.
ರಾಷ್ಟ್ರದ್ವಜವನ್ನು ಉರಿಸುವುದಾಗಲಿ, ಕೆಡಿಸುವುದಾಗಲಿ, ಕಾಲಡಿಯಲ್ಲಿ ಹಾಕುವುದಾಗಲಿ, ಹಾಳುಗೆಡುವುದಾಗಲಿ ಅಥವಾ ಅದಕ್ಕೆ ಯಾವುದೇ ತರಹದ ಅಗೌರವ ತೋರುವ ರೀತಿಯಲ್ಲಿ ನಡೆದು ಕೊಂಡರೆ, ಮಾತು, ಬರಹ ಅಥವಾ ಕೃತ್ಯದ ಮೂಲಕ ಅಗೌರವ ತೋರಿದರೆ ರಾಷ್ಟ್ರೀಯ ಗೌರವದ ಅವಮಾನ ವಿರೋಧಿ ಕಾಯ್ದೆಯಡಿಯಲ್ಲಿ ಶಿಕ್ಷೆಗೆ ಗುರಿ ಪಡಿಸಲಾಗುವುದು.
ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಹಾರುತ್ತಿರುವ ದ್ವಜವನ್ನು ಕಾಪಾಡಬೇಕು.
ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಕೋಲಿನಿಂದ ಅದನ್ನು ಹಾರಿಸತಕ್ಕದು. ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.
# ನೆನಪಿನಲ್ಲಿಡಬೇಕಾದ 10 ಅಂಶಗಳು :
1. ಭಾರತದ ರಾಷ್ತ್ರೀಯ ಧ್ವಜ’ದ ಈಗಿನ ಅವತರಣಿಕೆಯನ್ನು ಜುಲೈ 22, 1947ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು.
2. ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳುಪು, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ.
3. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ
4. ಪಂಡಿತ್ ಜವಾಹರ್ ಲಾಲ್ ನೆಹರು 1947 ಜುಲೈ 22 ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು.
5. ನಮ್ಮ ಸರಕಾರವು ದ್ವಜ ಕೇವಲ ಕೈ ನೆಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು.ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ ಆದರೆ ಅದು ಕೈ ನೂಲು ಮತ್ತು ಕೈ ನೆಯ್ಗೆಯದೇ ಇರಬೇಕು.
6. ದ್ವಜದ ಉದ್ದ ಮತ್ತು ಅಗಲ 3:2 ಪ್ರಮಾಣದಲ್ಲಿರತಕ್ಕದ್ದು
7. ರಾಷ್ಟ್ರ ಧ್ವಜ ಕರ್ನಾಟಕದಲ್ಲಿ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ.
8. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಬೇಕು.ಬ್ಯೂರೋದ ಮಾನದಂಡಕ್ಕೆ ತಕ್ಕಂತೆ ಇಲ್ಲದಿದ್ದರೆ ಉತ್ಪನ್ನವೇ ತಿರಸ್ಕೃತವಾಗುತ್ತದೆ.
9. ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು.ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.
10. ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಬಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ದ್ವಜ ಕೋಲಿನಿಂದ ಅದನ್ನು ಹಾರಿಸ ತಕ್ಕದು.