GKKannadaSpardha Times

ಕನ್ನಡದ 100 ಪ್ರಸಿದ್ಧ ಗಾದೆಗಳು

Share With Friends

ವೇದ ಸುಳ್ಳಾದರೂ ಗಾದೆ ಸುಳ್ಳಾಗದು
1 ಹಿತ್ತಲ ಗಿಡ ಮದ್ದಲ್ಲ
2 ಮಾಡಿದ್ದುಣ್ಣೋ ಮಹರಾಯ
3 ಕೈ ಕೆಸರಾದರೆ ಬಾಯಿ ಮೊಸರು
4 ಹಾಸಿಗೆ ಇದ್ದಷ್ತು ಕಾಲು ಚಾಚು
5 ಅಂಗೈ ಹುಣ್ಣಿಗೆ ಕನ್ನಡಿ ಬೇಕೆ
6 ಧರ್ಮಕ್ಕೆ ದಟ್ಟಿ ಕೊಟ್ಟರೆ ಹಿತ್ತಲಲ್ಲಿ ಮಣ ಹಾಕಿದರಂತೆ
7 ಎತ್ತೆಗೆ ಜ್ವರ ಬಂದರೆ ಎಮ್ಮೆಗೆ ಬರೆ ಎಳೆದಂತೆ
8 ಮನೇಲಿ ಇಲಿ, ಬೀದೀಲಿ ಹುಲಿ
9 ಕುಂಬಳಕಾಯಿ ಕಳ್ಳ ಅಂದರೆ ಹೆಗಲು ಮುಟ್ಟಿ ನೋದಿಕೊOಡನOತೆ
1O ಕಾರ್ಯಾವಾಸಿ ಕತ್ತೆಕಾಲು ಹಿಡಿ

11 ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು
12 ಅಡಿಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು
13 ಕಪ್ಪೆನ ತಕ್ಕಡಿಲಿ ಹಾಕಿದ ಹಾಗೆ
14 ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ
15 ಅಕ್ಕಿ ಮೇಲೆ ಆಸೆ, ನೆಂಟರ ಮೇಲೂ ಪ್ರೀತಿ
16 ಅಜ್ಜಿಗೆ ಅರಿವೆ ಚಿಂತೆ , ಮಗಳಿಗೆ ಗಂಡನ ಚಿಂತೆ
17 ಅಲ್ಪನಿಗೆ ಐಶ್ವರ್ಯ ಬಂದರೆ ಅರ್ಧರಾತ್ರೀಲಿ ಕೊಡೆ ಹಿಡಿದನಂತೆ
18 ಅತ್ತೆಗೊOದು ಕಾಲ ಸೊಸೆಗೊOದು ಕಾಲ
19 ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ
2O ಬೇಲೀನೆ ಎದ್ದು ಹೊಲ ಮೆಯ್ದಂತೆ

21 ಅಂಬಲಿ ಕುಡಿಯುವವನಿಗೆ ಮೀಸೆ ತಿಕ್ಕುವನೊಬ್ಬ
22 ಅಂತೂ ಇಂತೂ ಕುಂತಿ ಮಕ್ಕಳಿಗೆ ಇಂತೂ ರಾಜ್ಯವಿಲ್ಲ
23 ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
24 ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ
25 ದೇವರು ವರ ಕೊಟ್ರು ಪೂಜಾರಿ ಕೊಡ
26 ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
27 ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು
28 ಎತ್ತು ಈಯಿತು ಅಂದರೆ ಕೊಟ್ಟಿಗೆಗೆ ಕಟ್ಟು ಎಂದರಂತೆ
29 ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ
3O ಗುಬ್ಬಿ ಮೇಲೆ ಬ್ರಹ್ಮಾಸ್ತ್ರ

31 ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ?
32 ಗೆದ್ದೆತ್ತಿನ ಬಾಲ ಹಿಡಿದ ಹಾಗೆ
33 ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನಂತೆ
34 ಭಂಗೀದೇವರಿಗೆ ಹೆಂದುಗುಡುಕ ಪೂಜಾರಿ
35 ಕಾಸಿಗೆ ತಕ್ಕ ಕಜ್ಜಾಯ
36 ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
37 ಕೂಸು ಹುಟ್ಟುವ ಮುಂಚೆ ಕುಲಾವಿ
38 ಅವರು ಚಾಪೆ ಕೆಳಗೆ ತೂರಿದರೆ ನೀನು ರಂಗೋಲಿ ಕೆಲಗೆ ತೂರು
39 ಇಬ್ಬರ ಜಗಳ ಮೂರನೆಯವನಿಗೆ ಲಾಭ
4O ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ

41 ತಾನು ಮಾಡುವುದು ಉತ್ತಮ, ಮಗ ಮಾಡುವುದು ಮಧ್ಯಮ, ಆಳು ಮಾಡುವುದು
ಹಾಳು
42 ಉಚ್ಚೇಲಿ ಮೀನು ಹಿಡಿಯೋ ಜಾತಿ
43 ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮಂದಿರು, ಬೆಳಿತಾ ಬೆಳಿತಾ ದಾಯಾದಿಗಳು
44 ಮಗೂನೂ ಚಿವುಟಿ ತೊಟ್ಟಿಲು ತೂಗಿದ ಹಾಗೆ
45 ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ
46 ಅಂಗೈಯಲ್ಲಿ ಬೆಣ್ಣೆ ಇಟ್ಕೊಂಡು ಊರೆಲ್ಲಾ ತುಪ್ಪಕ್ಕೆ ಅಲೆದಾಡಿದರಂತೆ
47 ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅಂದ ಹಾಗೆ
48 ನಮ್ಮ ದೇವರ ಸತ್ಯ ನಮಗೆ ಗೊತ್ತಿಲ್ಲವೇ ?
49 ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ
5O ಕಜ್ಜಿ ಹೋದರೂ ಕಡಿತ ಹೋಗಲಿಲ್ಲ

51 ಮಾತು ಬೆಳ್ಳಿ, ಮೌನ ಬಂಗಾರ
52 ಎಲ್ಲಾರ ಮನೆ ದೋಸೆನೂ ತೂತೆ
53 ಒಲ್ಲದ ಗಂಡನಿಗೆ ಮೊಸರಲ್ಲೂ ಕಲ್ಲು
54 ಅಡುಗೆ ಮಾಡಿದವಳಿಗಿಂತ ಬಡಿಸಿದವಲೇ ಮೇಲು
55 ತಾಯಿಯಂತೆ ಮಗಳು ನೂಲಿನಂತೆ ಸೀರೆ
56 ಅನುಕೂಲ ಸಿಂಧು, ಅಭಾವ ವೈರಾಗ್ಯ
57 ಕೊಚ್ಚೆ ಮೇಲೆ ಕಲ್ಲು ಹಾಕಿದ ಹಾಗೆ
58 ತಮ್ಮ ಮನೇಲಿ ಹಗ್ಗಣ ಸತ್ತಿದ್ದರೂ ಬೇರೆ ಮನೆಯ ಸತ್ತ ನೊಣದ ಕಡೆ ಬೆಟ್ಟು ಮಾಡಿದ ಹಾಗೆ
59 ಹುಣಿಸೆ ಮುಪ್ಪಾದರೂ ಹುಳಿ ಮುಪ್ಪೇ ?
6O ಮನೆಗೆ ಮಾರಿ, ಊರಿಗೆ ಉಪಕಾರಿ

61 ಉಗುರಿನಲ್ಲಿ ಹೋಗೋ ಚಿಗುರಿಗೆ ಕೋಡಾಲಿ ಏಕೆ ?
62 ಅಲ್ಪರ ಸಂಘ ಅಭಿಮಾನ ಭಂಗ
62 ಸಗಣಿಯವನ ಸ್ನೇಹಕ್ಕಿಂತ ಗಂಧದವನ ಜೊತೆ ಗುದ್ದಾಟ ಮೇಲು
63 ಮಾಡಿದವರ ಪಾಪ ಆಡಿದವರ ಬಾಯಲ್ಲಿ
64 ನಾಯಿ ಬೊಗಳಿದರೆ ದೇವಲೋಕ ಹಾಳಾಗುತ್ಯೇ ?
65 ಗೋರ್ಕಲ್ಲ ಮೇಲೆ ನೀರು ಸುರಿದOತೆ
66 ಆಕಾಶ ನೋಡೋದಕ್ಕೆ ನೂಕುನುಗ್ಗಲೇ ?
67 ಗಾಳಿ ಬಂದಾಗ ತೂರಿಕೋ
68 ಯಾರದ್ದೋ ದುಡ್ಡು ಯಲ್ಲಮ್ಮನ ಜಾತ್ರೆ
69 ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು
7O ಬಿರಿಯಾ ಉಂಡ ಬ್ರಾಹ್ಮಣ ಭಿಕ್ಷೆ ಬೇಡಿದ

71 ದುಡ್ಡೇ ದೊಡ್ಡಪ್ಪ ವಿದ್ಯೆಯೇ ಅದರಪ್ಪ
72 ಬರಗಾಲದಲ್ಲಿ ಅಧಿಕ ಮಾಸ
73 ಹೊಳೆ ನೀರಿಗೆ ದೊಣ್ಣೆನಾಯಕನ ಅಪ್ಪಣೆ ಬೇಕೆ ?
74 ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡ ಹಾಗೆ
75 ಕುರುಡರ ರಾಜ್ಯದಲ್ಲಿ ಒಕ್ಕಣ್ಣನೇ ರಾಜ
76 ಮಂತ್ರಕ್ಕಿಂತ ಉಗುಳೇ ಜಾಸ್ತಿ
77 ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ
78 ಕುಂಬಾರನಿಗೆ ವರುಷ, ದೊಣ್ಣೆಗೆ ನಿಮಿಷ
79 ಕಂತೆಗೆ ತಕ್ಕ ಬೊಂತೆ
😯 ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ

81 ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
82 ಓದಿ ಓದಿ ಮರುಳಾದ ಕೂಚಂಭಟ್ಟ
83 ಸತ್ಯಕ್ಕೆ ಸಾವಿಲ್ಲ, ಸುಳ್ಳಿಗೆ ಸುಖವಿಲ್ಲ
84 ಕೋಟಿ ವಿದ್ಯೆಗಿಂತ ಮೇಟಿ ವಿದ್ಯೆಯೇ ಮೇಲು
86 ಬೆಟ್ಟ ಅಗೆದು ಇಲಿ ಹಿಡಿದ ಹಾಗೆ
87 ಓದುವಾಗ ಓದು, ಆಡುವಾಗ ಆಡು
88 ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
89 ಸಂಸಾರ ಗುಟ್ಟು, ವ್ಯಾಧಿ ರಟ್ಟು
9O ಗಿಣಿ ಸಾಕಿ ಗಿಡುಗನ ಕೈಗೆ ಕೊಟ್ಟರಂತೆ
91 ಕೊಟ್ಟವನು ಕೋಡಂಗಿ , ಇಸ್ಕೊಂಡೋನು ಈರಭದ್ರ
92 ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
93 ಮುಖ ನೋಡಿ ಮಣೆ ಹಾಕು
94 ಕುರಿ ಕಾಯೋದಕ್ಕೆ ತೋಳನನ್ನು ಕಳಿಸಿದರಂತೆ
95 ಮಂತ್ರಕ್ಕೆ ಮಾವಿನಕಾಯಿ ಉದುರತ್ಯೇ ?
96 ತುಂಬಿದ ಕೊಡ ತುಳುಕುವುದಿಲ್ಲ
97 ಉಪ್ಪಿಗಿಂತ ರುಚಿಯಿಲ್ಲ ತಾಯಿಗಿಂತ ದೇವರಿಲ್ಲ
98 ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
99 ಇರಲಾರದೆ ಇರುವೆ ಬಿಟ್ಟುಕೊಂಡ ಹಾಗೆ
1OO ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
1O1 ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊಂಡರು

ಕನ್ನಡ ವ್ಯಾಕರಣ : ಛಂದಸ್ಸು ಮತ್ತು ಛಂದಸ್ಸಿನ ಕೃತಿಗಳು

Leave a Reply

Your email address will not be published. Required fields are marked *

error: Content Copyright protected !!