Current AffairsLatest Updates

Karnataka : 18 ಬಿಜೆಪಿ ಶಾಸಕರ ಅಮಾನತು ಆದೇಶ ವಾಪಸ್‌

Share With Friends

Karnataka : Suspension of 18 BJP MLAs revoked

ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದಲ್ಲಿ ನಡೆದ ಸಂಧಾನ ಸಭೆಯಲ್ಲಿ 18 ಬಿಜೆಪಿ ಶಾಸಕರ ಅಮಾನತು ಆದೇಶವನ್ನು ವಾಪಸ್ ಪಡೆಯಲಾಗಿದೆ. ಈ ಹಿಂದೆ ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆದಿತ್ತು. ಆ ವೇಳೆ ಬಿಜೆಪಿ ಶಾಸಕರು ಸ್ಪೀಕರ್ ಯು.ಟಿ ಖಾದರ್ ಅವರ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಮೂಲಕ​​ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಿ ಖಾದರ್​ ಆದೇಶಿಸಿದ್ದರು. ಆದರೆ, ಇದೀಗ ಶಾಸಕ ಅಮಾನತು ಆದೇಶವನ್ನು ಹಿಂಪಡೆಯಲು ಸಭೆಯಲ್ಲಿ ತೀರ್ಮಾನವಾಗಿದೆ.

ಅಮಾನತುಗೊಂಡಿದ್ದ ಶಾಸಕರು ಯಾರ್ಯಾರು?: ಬಿಜೆಪಿ ಸದಸ್ಯರಾದ ದೊಡ್ಡನಗೌಡ ಪಾಟೀಲ್, ಡಾ.ಅಶ್ವತ್ಥನಾರಾಯಣ, ಬೈರತಿ ಬಸವರಾಜ, ಡಾ.ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ.ಹರೀಶ್, ಡಾ.ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ.ರಾಮಮೂರ್ತಿ, ಯಶಪಾಲ್ ಸುವರ್ಣ, ಬಿ.ಸುರೇಶ್ ಗೌಡ, ಶರಣು ಸಲಗಾರ್, ಚನ್ನಬಸಪ್ಪ, ಬಸವರಾಜ ಮತ್ತಿಮಾಡ್, ಎಸ್.ಆರ್.ವಿಶ್ವನಾಥ್ ಹಾಗೂ ಎಂ.ಆರ್.ಪಾಟೀಲ್ ಅಮಾನತುಗೊಂಡಿದ್ದರು.

ಅಮಾನತಿಗೆ ಕಾರಣವೇನು?
ಬಜೆಟ್​ ಅಧಿವೇಶನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ಕೋಲಾಹಲ ಎಬ್ಬಿಸಿದ್ದವು. ಮಾರ್ಚ್​ 21 ರಂದು ವಿಧಾನಸಭೆ ಕಲಾಪದಲ್ಲಿ ಭಾರಿ ಹೈಡ್ರಾಮಾಕ್ಕೆ ಕಾರಣವಾಗಿದ್ದವು. ಸದನ ಶುರುವಾಗುತ್ತಿದ್ದಂತೆಯೇ ಹನಿಟ್ರ್ಯಾಪ್​ ವಿಚಾರ ಪ್ರಸ್ತಾಪ ಮಾಡಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಪ್ರತಿಪಕ್ಷ ಪಟ್ಟು ಹಿಡಿದಿತ್ತು. ನಂತರ ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ, ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮೇಲೆ ಎಸೆಯುತ್ತಾ, ‘ಹನಿಟ್ರ್ಯಾಪ್ ಸರ್ಕಾರ’ ಎಂದು ಘೋಷಣೆಗಳನ್ನು ಕೂಗಿದ್ದರು. ಈ ವೇಳೆ ಸ್ಪೀಕರ್, ಶಾಸಕರು ತಾಳ್ಮೆ ವಹಿಸುವಂತೆ, ಕಲಾಪಕ್ಕೆ ಅಡ್ಡಿಪಡಿಸದಂತೆ ಮನವಿ ಮಾಡಿದ್ದರು. ಆದರೂ ಸಹ ವಿಪಕ್ಷ ಬಿಜೆಪಿ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದರು. ಇದರಿಂದ ಸ್ಪೀಕರ್​ 18 ಬಿಜೆಪಿ ಸದಸ್ಯರನ್ನು 6 ತಿಂಗಳು ಕಲಾಪದಿಂದ ಅಮಾನತುಗೊಳಿಸಿ ರೂಲಿಂಗ್ ಹೊರಡಿಸಿದ್ದರು.

ಅಮಾನತ್ತಾದ ಶಾಸಕರಿಗೆ ಏನೆಲ್ಲಾ ನಿರ್ಬಂಧ ವಿಧಿಸಲಾಗಿತ್ತು?
1.ವಿಧಾನಸಭೆಯ ಸಭಾಂಗಣ, ಲಾಬಿ ಮತ್ತು ಗ್ಯಾಲರಿಗಳಿಗೆ ಪ್ರವೇಶಿಸುವಂತಿಲ್ಲ.
2.ಸದಸ್ಯರಾಗಿರುವ ವಿಧಾನಮಂಡಲದ/ವಿಧಾನ ಸಭೆಯ ಸ್ಥಾಯಿ ಸಮಿತಿಗಳ ಸಭೆಗಳಲ್ಲಿಯೂ ಭಾಗವಹಿಸುವಂತಿಲ್ಲ.
3.ವಿಧಾನ ಸಭೆಯ ಕಾರ್ಯಕಲಾಪಗಳ ಪಟ್ಟಿಯಲ್ಲಿ ಹೆಸರಿನಲ್ಲಿ ಯಾವುದೇ ವಿಷಯವನ್ನು ನಮೂದು ಮಾಡತಕ್ಕದಲ್ಲ.
4.ಅಮಾನತ್ತಿನ ಅವಧಿಯಲ್ಲಿ ನೀಡುವ ಯಾವುದೇ ಸೂಚನೆಗಳನ್ನು ಸ್ವೀಕರಿಸಲಾಗುವುದಿಲ್ಲ.
5.ಅಮಾನತ್ತಿನ ಅವಧಿಯಲ್ಲಿ ನಡೆಯುವ ಸಮಿತಿಗಳ ಚುನಾವಣೆಯಲ್ಲಿ ಮತದಾನ ಮಾಡುವಂತಿಲ್ಲ.
6.ಅಮಾನತ್ತಿನ ಅವಧಿಯಲ್ಲಿ ಯಾವುದೇ ದಿನಭತ್ಯೆಯನ್ನು ಪಡೆಯಲು ಅರ್ಹರಿರುವುದಿಲ್ಲ.

ಅಮಾನತು ಪ್ರಕರಣ ಇತ್ಯರ್ಥ ಆಗಿದ್ದು ಹೇಗೆ?
1.ಕಳೆದ ಬಜೆಟ್ ಅಧಿವೇಶನದಲ್ಲಿ 18 ಮಂದಿ ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದ ಸ್ಪೀಕರ್ ಯು.ಟಿ.ಖಾದರ್
2.ಸರ್ಕಾರದ ಜೊತೆಗೆ ಚರ್ಚೆ ಮಾಡಿಯೇ ಅಮಾನತು ಮಾಡಿರುವುದಾಗಿ ಘೋಷಿಸಿದ್ದ ಖಾದರ್
3.ಬಳಿಕ ಪ್ರಕರಣ ಇತ್ಯರ್ಥ ಪಡಿಸುವಂತೆ ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್ ಒತ್ತಾಯ
4.ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹಾಗೂ ಸ್ಪೀಕರ್ ಯು.ಟಿ. ಖಾದರ್ ಜೊತೆಗೆ ನಿರಂತರ ಸಂಪರ್ಕ ಸಾಧಿಸಿದ್ದ ಆರ್. ಅಶೋಕ್
5.ಕೊನೆಗೂ ಸ್ಪೀಕರ್ ಮನವೊಲಿಸುವಲ್ಲಿ ಯಶಸ್ವಿಯಾಗಿರುವ ಆರ್. ಅಶೋಕ್
6.ಸ್ಪೀಕರ್, ಸಿಎಂ ಹಾಗೂ ಕಾನೂನು ಸಚಿವರಿಗೆ ಆರ್. ಅಶೋಕ್‌ರಿಂದ ಸಾಲು ಸಾಲು ಮಾಹಿತಿ
7.ನಮ್ಮ ಶಾಸಕರುಗಳು ನಡೆದ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ
8.ಸ್ಪೀಕರ್ ಅವರನ್ನು ಭೇಟಿ ಮಾಡಿದ್ದು, ವಿಷಾದದ ಬಗ್ಗೆ ತಿಳಿಸಿದ್ದಾರೆ
9.ಅಮಾನತ್ತಾಗಿರುವ ಶಾಸಕರಿಗೆ 6 ತಿಂಗಳ ಟಿಎ, ಡಿಎ ಇಲ್ಲ ಎಂಬುದು ಸರಿಯಲ್ಲ. ಇದರಿಂದ ಕೆಲ ಶಾಸಕರು ಆರ್ಥಿಕ ಸಂಕಷ್ಟಕ್ಕೂ ಸಿಲುಕಿದ್ದಾರೆ ಎಂದು ಮಾಹಿತಿ ನೀಡಿರುವ ಆರ್.ಅಶೋಕ್.
10.ಆರ್.ಅಶೋಕ್ ಮಾತಿಗೆ ಇತ್ತ ಸ್ಪೀಕರ್ ಮುಂದೆ ಸರ್ಕಾರದ ಕಡೆಯಿಂದ ಸಕಾರಾತ್ಮಕವಾದ ಪ್ರತಿಕ್ರಿಯೆ ಲಭ್ಯ
11.ಸರ್ಕಾರಕ್ಕೆ ಈಗ ಎರಡು ವರ್ಷ ತುಂಬಿದೆ. ಇಂತಹ ಸಂದರ್ಭದಲ್ಲಿ ವಿಪಕ್ಷದ 18 ಶಾಸಕರ ಅಮಾನತ್ತು ಮುಜುಗರ ತರುವಂತೆ ಆಗಲಿದೆ.
12.ಹೀಗಾಗಿ, ಅಮಾನತು ಆದೇಶ ವಾಪಸ್ ಪಡೆಯುವಂತೆ ಸ್ಪೀಕರ್‌ಗೆ ಮನವಿ

error: Content Copyright protected !!