Megastar Chiranjeevi : ಯುಕೆಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಪಡೆದ ಮೊದಲ ಭಾರತೀಯ ಮೆಗಾಸ್ಟಾರ್ ನಟ ಚಿರಂಜೀವಿ
Megastar Chiranjeevi becomes first Indian to receive UK’s lifetime achievement award
ಚಿತ್ರರಂಗಕ್ಕೆ ನೀಡಿದ ಕೊಡುಗೆಗಾಗಿ ಟಾಲಿವುಡ್ ನಟ ಮೆಗಾಸ್ಟಾರ್ ಚಿರಂಜೀವಿ (Chiranjeevi) ಅವರಿಗೆ ಬ್ರಿಟಿಷ್ ಸರ್ಕಾರದಿಂದ ‘ಜೀವಮಾನ ಸಾಧನೆ ಪ್ರಶಸ್ತಿ’ ಸಿಕ್ಕಿದೆ. ಈ ಗೌರವವನ್ನು ಅವರು ಸ್ವೀಕರಿಸಿದ್ದಾರೆ. ಮಾರ್ಚ್ 19ರಂದು ಇಂಗ್ಲೆಂಡ್ನ ಪಾರ್ಲಿಮೆಂಟ್ನಲ್ಲಿ (England Parliment) ಇದನ್ನು ನೀಡಿ ಗೌರವಿಸಲಾಗಿದೆ.
ಚಿತ್ರರಂಗಕ್ಕೆ ಚಿರಂಜೀವಿ ಅವರು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಹಲವು ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ಇದರ ಜೊತೆಗೆ ಅವರ ಕಡೆಯಿಂದ ಅನೇಕ ಸಾಮಾಜಿಕ ಕೆಲಸಗಳು ಕೂಡ ಆಗುತ್ತಿವೆ. ಇದೆಲ್ಲವನ್ನೂ ಗಮನಿಸಿದ ಬ್ರಿಟಿಷ್ ಸರ್ಕಾರ ಅವರಿಗೆ ಜೀವಮಾನ ಸಾಧನೆ ಅವಾರ್ಡ್ ನೀಡಿದೆ.
ಚಿರಂಜೀವಿ ಅವರ ಹೆಸರಲ್ಲಿ ಅನೇಕ ದಾಖಲೆಗಳು ಇವೆ. ಅವರಿಗೆ ಈ ಮೊದಲು ಪದ್ಮ ವಿಭೂಷಣ ನೀಡಿ ಗೌರವಿಸಲಾಗಿದೆ. ಅಲ್ಲದೆ, 24 ಸಾವಿರ ಡ್ಯಾನ್ಸ್ ಸ್ಟೆಪ್ ಮಾಡಿದ ಖ್ಯಾತಿ ಪಡೆದು, ಅವರ ಹೆಸರು ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಬುಕ್ಗೆ ಸೇರ್ಪಡೆ ಆಯಿತು. ಎಎನ್ಆರ್ ನ್ಯಾಷನಲ್ ಅವಾರ್ಡ್ ಕೂಡ ಅವರಿಗೆ ಸಿಕ್ಕಿದೆ.
ನಾಲ್ಕು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದೊಂದಿಗೆ, ಚಿರಂಜೀವಿ ತಮ್ಮ ಐಕಾನಿಕ್ ಚಲನಚಿತ್ರಗಳ ಮೂಲಕ ಪ್ರೇಕ್ಷಕರನ್ನು ಆಕರ್ಷಿಸಿದ್ದಾರೆ, ಇದು ಅವರನ್ನು ಭಾರತೀಯ ಚಿತ್ರರಂಗದಲ್ಲಿ ಪೌರಾಣಿಕ ವ್ಯಕ್ತಿಯನ್ನಾಗಿ ಮಾಡಿದೆ. ಅವರು ತಮ್ಮ ದತ್ತಿ ಯೋಜನೆಗಳ ಮೂಲಕವೂ ಭಾರಿ ಪ್ರಭಾವ ಬೀರಿದ್ದಾರೆ. ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ಆರೋಗ್ಯ ಮತ್ತು ಶಿಕ್ಷಣ ಉಪಕ್ರಮಗಳನ್ನು ಬೆಂಬಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ.