ನೇತಾಜಿ ಕುರಿತು ನೆನಪಿನಲ್ಲಿಡಬೇಕಾದ ಮಹತ್ವದ ಮೈಲುಗಲ್ಲುಗಳು
`ನೀವು ನನಗೆ ರಕ್ತ ಕೊಡಿ… ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ…’ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ತುಂಬಿದ ಮಾತಿದು. ಅಂದು ಸಿಡಿಲಬ್ಬರದ ಈ ಮಾತು ಕೇಳಿದ್ದ ಪ್ರತಿಯೊಬ್ಬರಲ್ಲೂ ದೇಶ ಪ್ರೇಮದ ಕಿಚ್ಚು ಜಾಗೃತವಾಗುತ್ತಿತ್ತು. ಈ ಮಾತನ್ನಾಡಿದವರು ಕೆಚ್ಚೆದೆಯ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್.
ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಭಾರತವು ಸ್ವಾತಂತ್ರ್ಯ ಪಡೆಯಲು ಭಾರತಕ್ಕೆ ಸಹಾಯ ಮಾಡಿದ ಜರ್ಮನಿ, ಜಪಾನ್, ರಷ್ಯಾಗಳಂತಹ ದೇಶಗಳು ಬ್ರಿಟಿಷ್ ವಿರುದ್ಧ ಹೋರಾಡಲು ಮತ್ತು ಸ್ವಾತಂತ್ರ್ಯ ಪಡೆಯಲು ಬೋಸರಿಗೆ ಸಹಾಯ ಮಾಡಲು ಸಿದ್ಧವಾಗಿದ್ದವು ಎಂದು ಭಾವಿಸಲಾಗಿವೆ. ಗಾಂಧಿಯವರು ಸ್ವಾತಂತ್ರ್ಯ ಪಡೆಯುವ ಬಗೆಗೆ ಒಂದೇ ಮಾರ್ಗದಲ್ಲಿದ್ದರು. ಆದರೆ ಬೋಸ್ ಸ್ವಾತಂತ್ರಕ್ಕೆ ಸಸಸ್ತ್ರ ಹೋರಾಟವನ್ನೂ ಒಪ್ಪಿದ್ದರು. ಅವರ ಹೋರಾಟವು ವಿಫಲವಾದರೂ, ಭಾರತ ಸ್ವಾತಂತ್ರ ಪಡೆಯುವಲ್ಲಿ ಜನರನ್ನು ಉತ್ತೇಜಿಸಿ ತನ್ನದೇ ಆದ ಕೊಡಿಗೆ ನೀಡಿದೆ ಎಂದು ಭಾವಿಸಲಾಗಿದೆ.
# ಮೈಲಿಗಲ್ಲುಗಳು :
➤ ಸುಭಾಷ್ಚಂದ್ರ ಬೋಸ್ ಜನಿಸಿದ್ದು 1897ರ ಜನವರಿ 23ರಂದು, ಒರಿಸ್ಸಾದ ಕಟಕ್ನಲ್ಲಿ. ತಂದೆ ಜಾನಕೀನಾಥ ಬೋಸ್, ತಾಯಿ ಪ್ರಭಾವತಿ. ಆ ದಂಪತಿಗಳ 9 ಮಕ್ಕಳಲ್ಲಿ ಸುಭಾಷ್ 6ನೇ ಯವರು.
➤ ಕಟಕ್ನಲ್ಲಿ ರ್ಯಾವೆನ್ಶಾ ಕೊಲಿಜಿಯೇಟ್ ಶಾಲೆಯಲ್ಲಿ ಪ್ರಾಥಮಿಕ ವ್ಯಾಸಂಗ, ಅಲ್ಲಿ ಮುಖ್ಯೋಪಾಧ್ಯಾಯ ಬೇಣಿಮಾಧವದಾಸ್ರ ರಿಂದ ಪ್ರೇರಣೆ, ಮುಂದೆ ವಿವೇಕಾನಂದರ ಸಾಹಿತ್ಯಗಳು, ಪತ್ರಗಳು ಮತ್ತು ’ಕೊಲೊಂಬೋದಿಂದ ಆಲ್ಮೋರಾಕ್ಕೆ’ ಉಪನ್ಯಾಸಗಳಿಂದ ಪ್ರಭಾವಿತರಾದ ಬೋಸರು ಅರವಿಂದರ ’ಆರ್ಯ’ ಮಾಸಪತ್ರಿಕೆಯ ತಪ್ಪದ ಓದುಗ!
➤ 1919ರಲ್ಲಿ ತತ್ವಶಾಸ್ತ್ರ ವಿಭಾಗದಲ್ಲಿ ಬಿ.ಎ. ಪದವಿ, ನಂತರ 1919ರ ಸೆಪ್ಟೆಂಬರ್ 15ರಂದು ಐ.ಸಿ.ಎಸ್ ಪರೀಕ್ಷೆಗಾಗಿ ಇಂಗ್ಲೆಂಡಿಗೆ ಪಯಣ.1920ರ ಸೆಪ್ಟಂಬರ್ನಲ್ಲಿ ನಾಲ್ಕನೇ ಸ್ಥಾನಿಗರಾಗಿ ಐ.ಸಿ.ಎಸ್ ಪದವಿ ಪ್ರಾಪ್ತಿ.
➤ ವಿದೇಶೀ ನೌಕರಿ ಒಲ್ಲೆ ಎಂದು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನು 1921ರ ಎಪ್ರಿಲ್ 22ರಂದು ಬ್ರಿಟಿಷ್ ಸರ್ಕಾರದ ಭಾರತ ವ್ಯವಹಾರ ಸಚಿವ ಎಡ್ವಿನ್ ಮಾಂಟೆಗುಗೆ ಪತ್ರವೊಂದನ್ನು ಬರೆದು ಮರಳಿಸಿದ್ದರು ಬೋಸ್! 20ತಿಂಗಳ ಇಂಗ್ಲೆಂಡ್ ವಾಸದ ನಂತರ 1921ರ ಜುಲೈ 16ರಂದು ಮುಂಬಯಿಗೆ ಮರಳಿದರು ಬೋಸ್. ಅಂದೇ ಗಾಂಧೀಜಿ ಜತೆ ಮೊದಲ ಭೇಟಿ.
➤ 1921ರ ಆಗಸ್ಟ್ನಿಂದ ಚಿತ್ತರಂಜನ್ದಾಸ್ರ ಮಾರ್ಗದರ್ಶನದಲ್ಲಿ ಯುವಕರ ಸಂಘಟನೆಗೆ ಆದ್ಯತೆ. ಚಳುವಳಿಯ ಸಂದರ್ಭವೊಂದರಲ್ಲಿ ಮ್ಯಾಜಿಸ್ಟ್ರೇಟರು 6 ತಿಂಗಳ ಸಜೆ ಘೋಷಿಸಿದಾಗ ’ಬರಿಯ 6 ತಿಂಗಳೇ? ನನ್ನದೇನು ಕೋಳಿಕದ್ದ ಅಪರಾಧವೇ?’ ಎಂದಿದ್ದರು ಬೋಸ್!
➤ ಕಾಂಗ್ರೆಸ್ನ ಡೋಲಾಯಮಾನ ನೀತಿಗಳಿಗೆ ಬೇಸತ್ತು ಚಿತ್ತರಂಜನ್ದಾಸ್ರಿಂದ ’ಸ್ವರಾಜ್ಯಪಕ್ಷ ಸ್ಥಾಪನೆ. ಬೋಸ್ರು ದಾಸ್ರ ಜತೆಗೇ ಚಟುವಟಿಕೆಗಳಲ್ಲಿ ಭಾಗಿ. 1923ರ ಅಕ್ಟೋಬರ್ನಿಂದ ದಾಸ್ರು ಸ್ಥಾಪಿಸಿದ್ದ ’ಫಾರ್ವರ್ಡ್’ ದಿನಪತ್ರಿಕೆಯ ನಿರ್ವಹಣೆಯ ಜವಾಬ್ದಾರಿ. 1925ರ ಜೂನ್ 16, ದಾಸ್ರ ನಿಧನ, ಕ್ರಾಂತಿಕಾರಿ ಚಟುವಟಿಕೆಗಳಿಗಾಗಿ ಬೋಸ್ರ ಬಂಧನ, ಬಿಡುಗಡೆ.
➤ 1927ರ ನವೆಂಬರ್ನಲ್ಲಿ ಬಂಗಾಳಪ್ರದೇಶ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆ, ಆದರೆ ಗಾಂಧಿ ಪ್ರಣೀತ ಮಂದ ಮಾರ್ಗಕ್ಕಿಂತ ಸುಭಾಷ್ರದು ತೀರಾ ಭಿನ್ನ ಎಂಬುದು ಕ್ರಮೇಣ ಗೊತ್ತಾಯಿತು. ಹತ್ತಾರು ಚಳುವಳಿಗೆ ನೇತೃತ್ವ, ಅಖಿಲಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆ.
➤ 1933 ಫೆಬ್ರವರಿ 23ರಂದು ಯೂರೋಪಿನಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಪರ ಅಭಿಯಾನ. ಇಂಗ್ಲೆಂಡ್, ಆಸ್ಟ್ರಿಯಾ, ಇಟೆಲಿ ವಿಯೆನ್ನಾಗಳ ಭೇಟಿ, ತ್ವರಿತಗತಿಯ ಪ್ರವಾಸ, ಮಿಂಚಿನ ಓಡಾಟ. ಸ್ವಿಟ್ಜರ್ಲೆಂಡ್, ಚೆಕೋಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಪರ ಪ್ರಚಾರ. ಇಟೆಲಿ ಪ್ರಧಾನಿ ಬೆನಿತೋ ಮುಸ್ಸೋಲಿನಿ ಜತೆ ಚರ್ಚೆ. 1926 ಏಪ್ರಿಲ್ 8 ರಂದು ಮರಳಿ ಭಾರತಕ್ಕೆ, ಬಂದರಲ್ಲೇ ಬಂಧನ. 1937ರಲ್ಲಿ ಮತ್ತೆ ಆಸ್ಟ್ರಿಯಾ ಪಯಣ.
➤ ಕಾಂಗ್ರೆಸ್ನ ಅಖಿಲಭಾರತ ಅಧಿವೇಶನದ ಅಧ್ಯಕ್ಷತೆ 1938ರ ಫೆಬ್ರವರಿ 19ರಂದು, ಹರಿಪುರದಲ್ಲಿ. ವಿದೇಶೀ ನೆಲಗಳ ಓಡಾಟದಿಂದ ಪಡೆದ ರಾಜಕೀಯ ಅನುಭವ-ಒಳನೋಟಗಳಿಂದ ಬ್ರಿಟಿಷರ ಒಡೆದು ಆಳುವನೀತಿಕುರಿತ ಕ್ಷಾತ್ರತೇಜದ ಐತಿಹಾಸಿಕ ಭಾಷಣ, ದೇಶ ವಿಭಜನೆಯ ಬ್ರಿಟಿಷರ ತಂತ್ರದ ಸೂಚನೆ. ಮುಂದಿನ ೯ ವರ್ಷದಲ್ಲೇ ಸತ್ಯವಾದ ಬೋಸ್ ಭವಿಷ್ಯವಾಣಿ! ಆರೆಸ್ಸೆಸ್ನ ’ಸಂಘ ಶಿಕ್ಷಾವರ್ಗ’ ಶಿಬಿರಕ್ಕೆ ೧೯೩೮ರಲ್ಲಿ ಭೇಟಿಗೆ ಒಪ್ಪಿಗೆ, ಸಂಘದ ಧ್ಯೇಯ – ಅನುಶಾಸನ ಕಾರ್ಯಪದ್ಧತಿ ಕುರಿತ ಶ್ಲಾಘನೆ. ಆದರೆ ಕಾರಣಾಂತರಗಳಿಂದ ಭೇಟಿ ಸಾಧ್ಯವಾಗಲಿಲ್ಲ.
➤ ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆದ ಮೊತ್ತಮೊದಲ ಚುನಾವಣೆಯಲ್ಲಿ ಡಾ|| ಪಟ್ಟಾಭಿ ಸೀತಾರಾಮಯ್ಯರ ವಿರುದ್ಧ 215 ಮತಗಳ ಗೆಲುವು! ಸುಭಾಷ್ ವಿರುದ್ಧ ಹಲವಾರು ಟೀಕೆಗಳು, ಅನಗತ್ಯ ಋಣಾತ್ಮಕ ಮಾತುಗಳು ಗಾಂಧೀಜಿಯಿಂದ. ಸ್ವಾತಂತ್ರ್ಯದ ಮೋಡಗಳು ಸಮೀಪ ಇರುವಂತೆಯೇ ಬ್ರಿಟಿಷ್ ಸರ್ಕಾರದ ಜತೆ ದುರ್ಬಲ ಕಾಂಗ್ರೆಸ್ನ ತಾರ್ಕಿಕ ನಡೆಗಳಿಂದ ಬೇಸತ್ತು ಕಾಂಗ್ರೆಸ್ಗೆ ರಾಜೀನಾಮೆ, ’ಫಾರ್ವರ್ಡ್ ಬ್ಲಾಕ್’ ಸ್ಥಾಪನೆ.
➤ 1940, ಜೂನ್ 18ರಂದು ಡಾ|| ಹೆಡಗೇವಾರ್ ಜತೆ ಭೇಟಿ ಆದರೆ ತೀವ್ರ ಜ್ವರದಿಂದ ಹಾಸಿಗೆ ಹಿಡಿದಿದ್ದ ಡಾ|| ಹೆಡಗೇವಾರ್ ಜತೆ ಸಾಧ್ಯವಾಗದ ಮಾತುಕತೆ. ಮೂರೇದಿನದಲ್ಲಿ ಡಾ|| ಹೆಡಗೇವಾರ್ ನಿಧನ. ಕೈ ತಪ್ಪಿದ ಮಹಾಮಿಲನ. ನಂತರ ವೀರ ಸಾವರ್ಕರ್ ಭೇಟಿ.
➤ ’ಬೋಸ್ ಕಾಣೆಯಾಗಿದ್ದಾರೆ’ ಎಂಬ ಸುದ್ದಿ 1941 ಜನವರಿ 26ಕ್ಕೆ! ಕಾಬೂಲ್ ಮೂಲಕ ಬರ್ಲಿನ್ ಸೇರಿದ ಬೋಸ್ರಿಂದ ಸೈನಿಕ ಕಾರ್ಯಾಚರಣೆ. ’ಫ್ರೀ ಇಂಡಿಯಾ ಸೆಂಟರ್’ 1941 ನವೆಂಬರ್ 2ಕ್ಕೆ ಉದ್ಘಾಟನೆ, ’ಆಜಾದ್ ಹಿಂದ್’ ಲಾಂಛನ, ’ಜೈಹಿಂದ್’ ಘೋಷಣೆ, ಬೋಸರಿಗೆ ’ನೇತಾಜಿ’ ಬಿರುದು.
➤ ಜರ್ಮನ್ ಸೇನಾಕೇಂದ್ರಗಳಿಗೆ ಸೈನಿಕ ತರಬೇತಿ, ಬರ್ಲಿನ್ ರೇಡಿಯೋದಲ್ಲಿ ಆಗಾಗ ಭಾಷಣ, ಹಿಟ್ಲರ್ ಜತೆ ಭೇಟಿ. ಜಪಾನ್ಗೆ ತೆರಳಿ ಅಲ್ಲಿಂದ ಪೂರ್ವಾಂಚಲ ಭಾರತದ ಗಡಿಗಳಲ್ಲಿ ಸೈನ್ಯ ಸಜ್ಜು ಮಾಡಲು ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ಭೂಗತ ಚಟುವಟಿಕೆ.
➤ ಬಲಿಷ್ಠಗೊಂಡ ಆಜಾದ್ ಹಿಂದ್ ಸೇನೆಗೆ ದೌಡಾಯಿಸುತ್ತಿದ್ದ ನಿವೃತ್ತಯುದ್ಧ ಕೈದಿಗಳು. ಮುಂದಿನ ದಿನಗಳಲ್ಲಿ ಪಕ್ವ ಸೈನ್ಯವಾಗಿ ರೂಪುಗೊಂಡ ಇಂಡಿಯನ್ ನ್ಯಾಷನಲ್ ಆರ್ಮಿ (ಐ.ಎನ್.ಎ). ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ (ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ) ಸ್ಥಾಪನೆ; ಐಎನ್ಎಯ ಕಮಾಂಡರ್ ಇನ್ ಚೀಫ್ ಆಗಿ ಬೋಸ್.
➤1945ರ ಆಗಸ್ಟ್18ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನ. ಆ ಕುರಿತು ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇದೆ. ಅನ್ವೇಷಣಾ ಸಮಿತಿ ನೇಮಿಸಿದರೂ, ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದಾರೆಂದೇ, ತಿಳಿದಿದ್ದರು.
➤ ಬೋಸರು ಆಗಾಗ ಹೇಳುತ್ತಿದ್ದರು ’ನೀವು ನಿಮ್ಮ ರಕ್ತ ಕೊಡಿ ನಾನು ನಿಮಗೆ ಸ್ವಾತಂತ್ರ್ಯ ತಂದು ಕೊಡುತ್ತೇನೆ. ಸ್ವಾತಂತ್ರ್ಯವೆಂಬುದು ಯಾರೂಕೊಡುವಂಥ ಸರಕಲ್ಲ ಅದು ನಾವು ಪಡೆದುಕೊಳ್ಳಬೇಕಾದದ್ದು!’
# ಐ.ಸಿ.ಎಸ್. ಪದವಿ ತಿರಸ್ಕರ:
ರಾಷ್ಟ್ರ ನಿರ್ಮಾಣದ ಜವಾಬ್ದಾರಿಯುತ ಸ್ಥಾನದಲ್ಲಿದ್ದು ರಾಷ್ಟ್ರಹಿತಕ್ಕೆ ಧಕ್ಕೆಯಾಗುವ ಯಾವುದೇ ವಿಷಯಗಳಲ್ಲಿ ದುರ್ಬಲನೀತಿ ಹೊಂದಿರಬಾರದೆಂಬ ಸುಭಾಷ್ರ ದಿಟ್ಟನಿಲುವಿನ ಪ್ರತಿಧ್ವನಿಯಾಗಿತ್ತು ಆ ಮಾತು. ಕಾಂಗ್ರೆಸ್ನ ಬಲಹೀನ ನಾಯಕತ್ವ, ದುರ್ಬಲ ಒಪ್ಪಂದಗಳು, ಸ್ವಾಭಿಮಾನಶೂನ್ಯ ವರ್ತನೆಗೆ ಪ್ರತಿಯಾಗಿ ಆತ್ಮಾಭಿಮಾನದ ಸ್ವರಾಜ್ಯಹೋರಾಟಕ್ಕೆ ಬಲತುಂಬಿದವರು ನೇತಾಜಿ.
ತಾನು ಕಷ್ಟಪಟ್ಟು ಗಳಿಸಿದ್ದ ಐ.ಸಿ.ಎಸ್. ಪದವಿಯನ್ನೇ ತಿರಸ್ಕರಿಸಿ, ಸ್ವಾತಂತ್ರ್ಯ ಸಂಗ್ರಾಮಕ್ಕೆ ಧುಮುಕಿದ ಬೋಸರಿಗಿದ್ದ ರಾಜಕೀಯ ಚಿಂತನೆಯ ವೈಶಾಲ್ಯತೆ ಆ ಕಾಲಮಾನದ ಯಾರೊಬ್ಬರಲ್ಲೂ ಇರಲಿಲ್ಲ. ಆಸ್ಟ್ರಿಯಾ, ಇಂಗ್ಲೆಂಡ್, ಜರ್ಮನಿ, ಜಪಾನ್ ಸೇರಿದಂತೆ ಹತ್ತಾರು ರಾಷ್ಟ್ರಗಳಲ್ಲಿ ಮಿಂಚಿನಂತೆ ಸಂಚಾರ ನಡೆಸಿ ಭಾರತೀಯ ಸ್ವರಾಜ್ಯ ಹೋರಾಟದ ದನಿಗೆ ಕ್ರಾಂತಿಯ ತೀವ್ರತೆ ತಂದಿದ್ದ ಬೋಸರು, ತಾನು ನಂಬಿದ್ದ ಕ್ರಾಂತಿಪಥದಲ್ಲಿ ಎಂದೂ ರಾಜಿಮಾಡಿದವರಲ್ಲ.
ಶೀಘ್ರ ಸ್ವಾತಂತ್ರ್ಯಪ್ರಾಪ್ತಿಗಾಗಿ ಅವರು ಮಂಡಿಸುತ್ತಿದ್ದ ವಾದಗಳು, ಅದಕ್ಕಾಗಿ ಶ್ರಮಿಸ ಬೇಕಾದ ತ್ವರಿತ ಸಿದ್ಧತೆಗಳ ಕುರಿತು ಬೋಸ್ರ ನಿಲುವುಗಳೆಲ್ಲ ಕಾಂಗ್ರೆಸ್ನ ಮಂದಗಾಮಿ ಗುಂಪಿಗೆ ಅಸಹ್ಯವಾಗಿತ್ತು. ಸ್ವತಃ ಗಾಂಧೀಜಿಯವರೇ “ಬೋಸ್ಗೆ ದೂರಗಾಮಿ ಚಿಂತನೆ ಇಲ್ಲ” ಎಂದು ಹಲವು ಬಾರಿ ಬೋಸ್ರನ್ನು ಟೀಕಿಸಿದ್ದರು! ಆದರೆ 1938ರಲ್ಲಿ ಭಾರತದ ವಿಭಜನೆಯ ಮುಸ್ಲಿಂಲೀಗ್- ಬ್ರಿಟಿಷರ ತಂತ್ರಗಾರಿಕೆಯ ಕುರಿತು ಮೊದಲಬಾರಿಗೆ ಬಹಿರಂಗವಾಗಿ ಎಚ್ಚರಿಸಿದರೂ ಮಂದಗಾಮಿಗಳಿಗೆ ಕೇಳಿಸಲಿಲ್ಲ. ಪರಿಣಾಮವಾಗಿ 9 ವರ್ಷದಲ್ಲೇ ದೇಶ ಹೋಳಾಯಿತು! ಬೋಸ್ರ ದೂರಗಾಮಿ ಚಿಂತನೆಗಳಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕಾಂಗ್ರೆಸ್ನಿಂದ ಸ್ವತಃ ಹೊರನಡೆದರು ಬೋಸ್.
# `ಸ್ವರಾಜ್ಯ ಪಕ್ಷ ಸ್ಥಾಪನೆ. :
ಬೋಸ್ ಅವರು ದಾಸ್ ಅವರರ ಜತೆಗೇ ಚಟುವಟಿಕೆ ಗಳಲ್ಲಿ ಭಾಗಿಯಾದರು. 1923ರ ಅಕ್ಟೋಬರ್ನಿಂದ ದಾಸ್ರು ಸ್ಥಾಪಿಸಿದ್ದ `ಫಾರ್ವರ್ಡ್’ ದಿನಪತ್ರಿಕೆಯ ನಿರ್ವಹಣೆಯ ಜವಾಬ್ದಾರಿಯನ್ನು ವಹಿಸಿಕೊಂಡರು. 1925ರ ಜೂನ್ 16, ದಾಸ್ ನಿಧನರಾದರು. ಕ್ರಾಂತಿಕಾರಿ ಚಟುವಟಿಕೆಗಳಿಗಾಗಿ ಬೋಸ್ರು ಬಂಧನಕ್ಕೊಳಗಾಗಿ ನಂತರ ಬಿಡುಗಡೆಗೊಂಡರು. 1927ರ ನವೆಂಬರ್ನಲ್ಲಿ ಬಂಗಾಳಪ್ರದೇಶ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಗೊಂಡರು. ಎಂ.ಕೆ. ಗಾಂಧಿ ಪ್ರಣೀತ ಮಂದ ಮಾರ್ಗಕ್ಕಿಂತ ಸುಭಾಷ್ರದು ತೀರಾ ಭಿನ್ನ ಎಂಬುದು ಕ್ರಮೇಣ ಚಳವಳಿಯಲ್ಲಿರುವ ಎಲ್ಲರಿಗೂ ಸ್ಪಷ್ಟವಾಯಿತು.
ಜನಜಾಗೃತಿಗಾಗಿ ಹತ್ತಾರು ಚಳವಳಿಗಳನ್ನು ತನ್ನ ನೇತೃತ್ವದಲ್ಲೇ ಆರಂಭಿಸಿದರು. ಅಖಿಲಭಾರತ ಟ್ರೇಡ್ ಯೂನಿಯನ್ ಕಾಂಗ್ರೆಸ್ನ ಅಧ್ಯಕ್ಷರಾಗಿ ಆಯ್ಕೆಗೊಂಡರು. ಫೆಬ್ರವರಿ 23, 1933ರಂದು ಯೂರೋಪಿನಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಪರ ಅಭಿಯಾನ. ಇಂಗ್ಲೆಂಡ್, ಆಸ್ಟ್ರಿಯಾ, ಇಟೆಲಿ ವಿಯೆನ್ನಾಗಳ ಭೇಟಿ, ತ್ವರಿತಗತಿಯ ಪ್ರವಾಸ ಎಲ್ಲವೂ ನಡೆಯಿತು. ಸ್ವಿಟ್ಜರ್ಲೆಂಡ್, ಚೆಕೋ ಸ್ಲೋವಾಕಿಯಾ, ಪೋಲೆಂಡ್, ಜರ್ಮನಿಗಳಲ್ಲಿ ಭಾರತದ ಪರ ಪ್ರಚಾರ ನಡೆಸಿದರು. ಇಟೆಲಿ ಪ್ರಧಾನಿ ಬೆನಿತೋ ಮುಸೋಲಿನಿಯ ಜತೆ ಚರ್ಚೆ ನಡೆಸಿದರು. 1936 ಏಪ್ರಿಲ್ 8ರಂದು ಮರಳಿ ಭಾರತಕ್ಕೆ ಬಂದು ಬಂದರಿನಲ್ಲೇ ಬಂಧನಕ್ಕೊಳಗಾದರು. 1937ರಲ್ಲಿ ಮತ್ತೆ ಆಸ್ಟ್ರಿಯಾಕ್ಕೆ ಹೋದರು.
# ಕಾಂಗ್ರೆಸ್ನ ಅಖಿಲಭಾರತ ಅಧಿವೇಶನದ ಅಧ್ಯಕ್ಷತೆ :
1938ರ ಫೆಬ್ರವರಿ 19ರಂದು, ಹರಿಪುರದಲ್ಲಿ ಕಾಂಗ್ರೆಸ್ನ ಅಖಿಲಭಾರತ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದರು. ವಿದೇಶೀ ನೆಲಗಳ ಓಡಾಟದಿಂದ ಪಡೆದ ರಾಜಕೀಯ ಅನುಭವದ ಒಳನೋಟಗಳಿಂದ ಬ್ರಿಟಿಷರ ಒಡೆದಾಳುವ ನೀತಿ ಕುರಿತ ಕ್ಷಾತ್ರತೇಜದ ಐತಿಹಾಸಿಕ ಭಾಷಣವನ್ನು ಮಾಡಿದರು. ದೇಶ ವಿಭಜನೆ ಮಾಡುವುದೇ ಬ್ರಿಟಿಷರ ತಂತ್ರ ಎಂದು ಬೋಸ್ರು ನುಡಿದ ಭವಿಷ್ಯ ಮುಂದಿನ 9 ವರ್ಷಗಳಲ್ಲೇ ಸತ್ಯವಾಯ್ತು! ಕಾಂಗ್ರೆಸ್ ಅಧ್ಯಕ್ಷಗಾದಿಗೆ ನಡೆದ ಮೊತ್ತಮೊದಲ ಚುನಾವಣೆಯಲ್ಲಿ ಡಾ|| ಪಟ್ಟಾಭಿ ಸೀತಾರಾಮಯ್ಯರ ವಿರುದ್ಧ 215 ಮತಗಳ ಗೆಲುವು ಪಡೆದುಕೊಂಡರು!
ಯಾರನ್ನೂ ಟೀಕಿಸದವರೆಂದು ಗುರುತಿಸಿಕೊಂಡ ಗಾಂಧೀಜಿಯಿಂದ ಸುಭಾಷ್ ವಿರುದ್ಧ ಹಲವಾರು ಟೀಕೆಗಳು, ಋಣಾತ್ಮಕ ಮಾತುಗಳು ಕೇಳಿಬರುತ್ತಲೇ ಇದ್ದವು. ಸ್ವಾತಂತ್ರ್ಯ ಪ್ರಾಪ್ತಿಯ ದಿನ ಸಮೀಪ ಇರುವಂತೆಯೇ ಬ್ರಿಟಿಷ್ ಸರ್ಕಾರದ ಜತೆ ದುರ್ಬಲ ಕಾಂಗ್ರೆಸ್ ಇರಿಸಿಕೊಂಡ ತಾರ್ಕಿಕ ನಡೆಗಳಿಂದ ಬೇಸತ್ತು ಕಾಂಗ್ರೆಸ್ಗೆ ರಾಜೀನಾಮೆ ಕೊಟ್ಟುಬಿಟ್ಟರು. ನಂತರ `ಫಾರ್ವರ್ಡ್ ಬ್ಲಾಕ್’ ಸ್ಥಾಪನೆಮಾಡಿದರು.
ಕಾಬೂಲ್ ಮೂಲಕ ಬರ್ಲಿನ್ ಸೇರಿದ ಬೋಸ್ರಿಂದ ಸೈನಿಕ ಕಾರ್ಯಾಚರಣೆ ಆರಂಭಗೊಂಡಿತು. 1941ರ ನವೆಂಬರ್ 2ರಂದು `ಫ್ರೀ ಇಂಡಿಯಾ ಸೆಂಟರ್’ ಉದ್ಘಾಟನೆ ಮಾಡಿದರು. `ಆಜಾದ್ ಹಿಂದ್’ ಎಂಬ ಲಾಂಛನ ಇರಿಸಿಕೊಂಡು `ಜೈಹಿಂದ್’ ಎಂಬ ಘೋಷಣೆಯನ್ನು ಕೂಗುವುದಕ್ಕೆ ಪ್ರೇರೇಪಿಸಿದರು. ಜನತೆ ಪ್ರೀತಿಯಿಂದ ಬೋಸರಿಗೆ `ನೇತಾಜಿ’ ಬಿರುದನ್ನಿತ್ತು ಗೌರವಿಸಿತು. ಜರ್ಮನ್ ಸೇನಾಕೇಂದ್ರಗಳಿಗೆ ಸೈನಿಕ ತರಬೇತಿ, ಬರ್ಲಿನ್ ರೇಡಿಯೋದಲ್ಲಿ ಆಗಾಗ ಭಾಷಣ, ಹಿಟ್ಲರ್ ಜತೆ ಭೇಟಿ. ಜಪಾನ್ಗೆ ತೆರಳಿ ಅಲ್ಲಿಂದ ಪೂರ್ವಾಂಚಲ ಭಾರತದ ಗಡಿಗಳಲ್ಲಿ ಸೈನ್ಯ ಸಜ್ಜು ಮಾಡಲು ಇಂಡಿಯನ್ ಇಂಡಿಪೆಂಡೆನ್ಸ್ ಲೀಗ್ ಮೂಲಕ ಅವಿರತ ಚಟುವಟಿಕೆ.
# ಇಂಡಿಯನ್ ನ್ಯಾಷನಲ್ ಆರ್ಮಿ (INA) :
ಲಿಷ್ಠಗೊಂಡ ಆಜಾದ್ ಹಿಂದ್ ಸೇನೆಗೆ ದೌಡಾಯಿಸುತ್ತಿದ್ದ ನಿವೃತ್ತಯುದ್ಧ ಕೈದಿಗಳು. ಮುಂದಿನ ದಿನಗಳಲ್ಲಿ ಪಕ್ವ ಸೈನ್ಯವಾಗಿ ರೂಪುಗೊಂಡ ಇಂಡಿಯನ್ ನ್ಯಾಷನಲ್ ಆರ್ಮಿ [ಐ.ಎನ್.ಎ]. ಪಾದರಸದಂತೆ ಪೂರ್ವ ಏಷ್ಯಾ ರಾಷ್ಟ್ರಗಳಲ್ಲಿ ಓಡಾಡಿ ಸ್ವರಾಜ್ಯ ಹೋರಾಟಕ್ಕೆ ಅಗಾಧ ಬೆಂಬಲ ಪಡೆದ ಬೋಸ್ರಿಂದ ಆರ್ಜೀ-ಹುಕುಮಂತ್-ಎ-ಆಜಾದ್ ಹಿಂದ್ [ಸ್ವತಂತ್ರ ಭಾರತದ ಹಂಗಾಮಿ ಸರ್ಕಾರ] ಸ್ಥಾಪನೆ; ಐಎನ್ಎಯ ಕಮಾಂಡರ್-ಇನ್-ಚೀಫ್ ಆಗಿ ಬೋಸ್.
1945ರ ಆಗಸ್ಟ್ 18ರಂದು ದಕ್ಷಿಣ ವಿಯೆಟ್ನಾಂನ ಸೈಗಾನ್ನಿಂದ ವಿಮಾನಹತ್ತಿದ ಸುಭಾಷ್, ವಿಮಾನ ಸ್ಫೋಟದಿಂದಾಗಿ ನಿಧನರಾದರು ಎಂಬುದು `some’-ಭಾವಿತ ಮತ್ತು ಅದೇ ಒಂದು ನಿಗೂಢ ರಹಸ್ಯವಾಗಿ ಇಂದಿಗೂ ಚರ್ಚೆಯ ವಸ್ತುವಾಗಿದೆ. ಸ್ಪಷ್ಟಗೊಳ್ಳದ ಅನೇಕ ವಿವಾದಗಳು ಇಂದಿಗೂ ಇವೆ. ಅನ್ವೇಷಣಾ ಸಮಿತಿಗಳನ್ನು ನೇಮಿಸಿದರೂ ಅವರ ಸಾವನ್ನೊಪ್ಪದ ಅನೇಕಮಂದಿ ಬಹಳವರ್ಷ ನೇತಾಜಿ ಬದುಕಿದ್ದರೆಂದೇ ತಿಳಿದಿದ್ದಾರೆ.
ಇದೇನೇ ಇರಲಿ, ಎಲ್ಲರಿಂದಲೂ ‘ನೇತಾಜಿ’ ಎಂದು ಪ್ರೀತಿಯಿಂದ ಕರೆಸಿಕೊಳ್ಳುತ್ತಿದ್ದ ಸುಭಾಷ್ ಚಂದ್ರ ಬೋಸ್ ರವರ ವ್ಯಕ್ತಿತ್ವ ನಿಷ್ಕ್ರಿಯ ಹಾಗು ಪರಮ ಸ್ವಾರ್ಥಿಗಳಾದ ಗಾಂಧೀಜಿ-ನೆಹರುಗಳಿಗಿಂತ ಯಾವಾಗಲೂ ಎತ್ತರದ ಸ್ಥಾನದಲ್ಲಿ ನಿಲ್ಲುವಂತಹುದು. ಬೋಸ್ ನಾಡುಕಂಡ ಶ್ರೇಷ್ಠ ಸ್ವರಾಜ್ಯ ಹೋರಾಟಗಾರರಲ್ಲಿ ಒಬ್ಬರು. ಭಾರತದ ಸೈನ್ಯಬಲದ ಕುರಿತು, ಗಡಿ ರಕ್ಷಣೆ ಕುರಿತು ಅವರಿಗಿದ್ದ ದೃಷ್ಟಿಕೋನ ಇಂದಿನವರೆಗೂ ಯಾವುದೇ ರಕ್ಷಣಾ ಸಚಿವರಿಗೆ ಅರ್ಥವಾಗಿಲ್ಲ. ಬೋಸ್ರಂತಹ ಮಹಾನ್ ರಾಷ್ಟ್ರನಾಯಕನ ಜೀವನದ ಘಟನೆಗಳ ಮೆಲುಕೇ ಸ್ಫೂರ್ತಿಯುತ. ಕಲಿಯಬೇಕಾದ ಪಾಠಗಳೂ ಹತ್ತಾರು. ಅತ್ಯುತ್ತಮ ರಾಜತಾಂತ್ರಿಕ ಸಂಬಂಧ ಹೊಂದಿದ್ದ ಬೋಸರು ರಾಷ್ಟಕ್ಕೇ ದಿಗ್ದರ್ಶನ ಮಾಡಿದವರು.
# ಪರಾಕ್ರಮ ದಿನ :
1897ರ ಜನವರಿ 23ರಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ಒಡಿಶಾದ ಕಟಕ್ ನಲ್ಲಿ ಜನಿಸಿದ್ದರು. ಈ ದಿನವನ್ನು ಪರಾಕ್ರಮ ದಿನವನ್ನಾಗಿ ಆಚರಿಸಲಾಗುತ್ತಿದೆ.ನೇತಾಜಿಯವರ 125ನೇ ವರ್ಷದ ಜನ್ಮದಿನ ಇಂದು ಆಗಿರುವುದರಿಂದ ಈ ವರ್ಷವಿಡೀ ವಿಶೇಷವಾಗಿ ಆಚರಿಸಲಾಗುತ್ತಿದೆ. ಜನವರಿ 23ನ್ನು ಪ್ರತಿವರ್ಷ ಪರಾಕ್ರಮ ದಿನವನ್ನಾಗಿ ಆಚರಿಸಲು ಕೇಂದ್ರ ಸರ್ಕಾರ ನಿರ್ಧರಿಸಿತು. ಕೋಲ್ಕತ್ತಾದಲ್ಲಿ ಪರಾಕ್ರಮ ದಿವಸದ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
# ಸುಭಾಷ್ ಚಂದ್ರ ಬೋಸ್ ಸಂದೇಶಗಳು :
* ನನಗೆ ರಕ್ತ ನೀಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ
* ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ.
* ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆದುಕೊಳ್ಳಬೇಕು.
* ನಮ್ಮ ದೇಶ ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ವಾತಂತ್ರ್ಯವೊಂದೇ ಪರಿಹಾರ. ಗುಲಾಮಿತನದ ಸಂಕೋಲೆಯನ್ನು ಕಿತ್ತೆಸೆಯಲು ಒಂದೇ ಹೃದಯ, ಒಂದು ಪ್ರಾಣವಾಗಿ ಎಲ್ಲರೂ ಕಟಿಬದ್ಧರಾಗಬೇಕಾಗಿದೆ.
* ಭಾರತದ ಮೇಲೆ ಇಟ್ಟಿರುವ ನಂಬಿಕೆಯನ್ನು ಯಾವತ್ತೂ ಕಳೆದುಕೊಳ್ಳಬೇಡಿ. ಭಾರತವನ್ನು ಬಂಧನದಲ್ಲಿಡುವ ಯಾವ ಶಕ್ತಿಯೂ ಭೂಮಿಯಲ್ಲಿ ಇಲ್ಲ. ಶೀಘ್ರದಲ್ಲೇ ಭಾರತ ಸ್ವತಂತ್ರವಾಗಲಿದೆ.
* ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಬಹುದೊಡ್ಡ ಅಪರಾಧ