Current AffairsSpardha Times

ಪ್ರಧಾನಿ ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ

Share With Friends

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಇಂದು ಮಾಸ್ಕೋ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ 2019ರಲ್ಲಿ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್-ಕಾಲ್ಡ್ ಅನ್ನು ಅಧಿಕೃತವಾಗಿ ನೀಡಲಾಯಿತು. ಮಾಸ್ಕೋದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತಿದೊಡ್ಡ ನಾಗರಿಕ ಪ್ರಶಸ್ತಿಯನ್ನು ಪ್ರದಾನ ಮಾಡಿದರು.

ರಷ್ಯಾ ಮತ್ತು ಭಾರತದ ನಡುವಿನ ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ಪ್ರಧಾನ ಮಂತ್ರಿ ಮೋದಿಗೆ ಈ ಗೌರವವನ್ನು ನೀಡಲಾಯಿತು.

ಪ್ರಶಸ್ತಿ ಬಗ್ಗೆ :
ಯೇಸುವಿನ ಮೊದಲ ಅಪೊಸ್ಟಲ್ ಮತ್ತು ರಷ್ಯಾದ ಪೋಷಕ ಸಂತ ಆಂಡ್ರ್ಯೂ ಅವರ ಗೌರವಾರ್ಥವಾಗಿ 1698 ರಲ್ಲಿ ಜಾರ್ ಪೀಟರ್ ದಿ ಗ್ರೇಟ್ ಈ ಪ್ರಶಸ್ತಿಯನ್ನು ಸ್ಥಾಪಿಸಿದರು. ಇದನ್ನು ರಷ್ಯಾದ ಅತ್ಯುನ್ನತ ನಾಗರಿಕ ಸೇವೆ ಅಥವಾ ಮಿಲಿಟರಿ ಸೇವೆಗೆ ಮಾತ್ರ ನೀಡಲಾಗುತ್ತದೆ. ಸಂತ ಆಂಡ್ರ್ಯೂ ಯೇಸುವಿನ ಮೊದಲ ಧರ್ಮ ಪ್ರಚಾರಕ ಮತ್ತು ರಷ್ಯಾದ ಸಂತ.

ಭಾರತೀಯರಿಗೆ ಅರ್ಪಣೆ :
ಬಳಿಕ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ತಮಗೆ ನೀಡಿದ್ದಕ್ಕಾಗಿ ವ್ಲಾಡಿಮಿರ್ ಪುಟಿನ್‌ರಿಗೆ ಧನ್ಯವಾದಗಳು. ಈ ಪ್ರಶಸ್ತಿಯನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸುವೆ ಹಾಗೂ ಭಾರತ- ರಷ್ಯಾದ ಶತಮಾನಗಳ ಸ್ನೇಹ ಹಾಗೂ ಪರಸ್ಪರ ನಂಬಿಕೆಗೆ ಈ ಗೌರವ ಪ್ರಾಪ್ತವಾಗಿದೆ. ನಿಮ್ಮ (ಪುಟಿನ್‌) ಎರಡುವರೆ ದಶಕದ ನಾಯಕತ್ವದಲ್ಲಿ ಭಾರತ -ರಷ್ಯಾ ಸಂಬಂಧ ಎಲ್ಲ ಕೋನಗಳಿಂದಲೂ ಗಟ್ಟಿಯಾಗಿದ್ದು, ಹೊಸ ಎತ್ತರಕ್ಕೆ ಏರಿದೆ ಎಂದು ಹೇಳಿದರು.

ಉಕ್ರೇನ್‌ನಲ್ಲಿ ಯುದ್ಧದ ನಂತರ ಮೊದಲ ಭೇಟಿ :
ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ಮಧ್ಯೆ ಪಾಶ್ಚಿಮಾತ್ಯ ದೇಶಗಳೊಂದಿಗೆ ದೀರ್ಘಾವಧಿಯ ಸಂಬಂಧವನ್ನು ಕಾಪಾಡಿಕೊಳ್ಳುವ ಸಲುವಾಗಿ ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಮಾಸ್ಕೋಗೆ ತೆರಳಿದ್ದಾರೆ. ಕಳೆದ ತಿಂಗಳು ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಿದ ನಂತರ ನರೇಂದ್ರ ಮೋದಿಯವರ ಮೊದಲ ಭೇಟಿ ಇದಾಗಿದೆ. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಇದು ರಷ್ಯಾಕ್ಕೆ ಅವರ ಮೊದಲನೆಯ ಭೇಟಿಯಾಗಿದೆ.

40 ವರ್ಷಗಳ ಬಳಿಕ ಆಸ್ಟ್ರಿಯಾ ಭೇಟಿ :
ಎರಡು ದಿನಗಳ ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಆಸ್ಟ್ರಿಯಾಕ್ಕೆ ತೆರಳಿದ್ದಾರೆ. ರಾಜಧಾನಿ ವಿಯೆನ್ನಾ ತಲುಪಿದ ನಂತರ ಅವರು ಆಸ್ಟ್ರಿಯಾದ ಚಾನ್ಸಲರ್ ಕಾರ್ಲ್ ನೆಹಮ್ಮರ್ ಅವರನ್ನ ಭೇಟಿ ಮಾಡಲಿದ್ದಾರೆ. ಕಳೆದ 40 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲಾಗಿದೆ.

Leave a Reply

Your email address will not be published. Required fields are marked *

error: Content Copyright protected !!