Current AffairsLatest Updates

ಇಂದಿನ ಪ್ರಚಲಿತ ವಿದ್ಯಮಾನಗಳು / 15-07-2025 (Today’s Current Affairs)

Share With Friends

ಇಂದಿನ ಪ್ರಚಲಿತ ವಿದ್ಯಮಾನಗಳು / Today’s Current Affairs

65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾ ಹಿಂದಿಕ್ಕಿದ ಯುಪಿಐ
UPI surpasses Visa as world’s leading real-time payment system
ಸರಿ ಸುಮಾರು 65 ಕೋಟಿ ರೂ. ವಹಿವಾಟು ನಡೆಸುವ ಮೂಲಕ ವೀಸಾವನ್ನು ಹಿಂದಿಕ್ಕಿ ಭಾರತದ ಯುಪಿಐ ವಿಶ್ವದಲ್ಲೇ ಅತೀ ದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದೆ.ಭಾರತದಲ್ಲಿ ಮೊಬೈಲ್ ಮೂಲಕ ನಡೆಯುವ ವಹಿವಾಟಿನ ಮೂಲವಾದ ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಈಗ ವಿಶ್ವದ ಅತಿದೊಡ್ಡ ಡಿಜಿಟಲ್ ಪಾವತಿ ವ್ಯವಸ್ಥೆಯಾಗಿ ಹೊರಹೊಮ್ಮಿದ್ದು, ಈವರೆಗೆ ನಂ.1 ಡಿಜಿಟಲ್ ಪಾವತಿ ವ್ಯವಸ್ಥೆಯಾಗಿದ್ದ ವೀಸಾವನ್ನು ಹಿಂದಿಕ್ಕಿದೆ. 2025ರ ಮೇ-ಜೂನ್‌ನಲ್ಲಿ ಯುಪಿಐ ಪ್ರತಿದಿನ 65 ಕೋಟಿ ರೂ. ವಹಿವಾಟನ್ನು ನಡೆಸಿದ್ದು, ಇದೇ ಅವಧಿಯಲ್ಲಿ ವೀಸಾ 63.9 ಕೋಟಿ ರೂ ವಹಿವಾಟು ನಡೆಸಿದೆ.

ವೀಸಾ 200 ದೇಶಗಳಲ್ಲಿ ಜಾರಿಯಲ್ಲಿದ್ದು, ಯುಪಿಐ ಕೇವಲ 7 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೂ ಕೂಡ ವೀಸಾವನ್ನು ಹಿಂದಿಕ್ಕಿರುವುದು ವಿಶೇಷ, ಕಳೆದ ತಿಂಗಳೇ ಈ ಸಾಧನೆ ಮಾಡಿದೆ. ಭಾರತದಲ್ಲಿ ಯುಪಿಐ ಮೂಲಕ ಗೂಗಲ್ ಪೇ, ಫೋನ್ ಪೇ, ಭೀಮ್ ಯುಪಿಐ, ಅಮೇಜಾನ್ ಪೇ, ವಾಟ್ಸಾ ಪ್ ಪೇ ಸೇರಿದಂತೆ ಹಲವು ಡಿಜಿಟಲ್ ಪಾವತಿ ಕಂಪನಿಗಳು ಸೇವೆ ಒದಗಿಸುತ್ತವೆ. ಬ್ಯಾಂಕ್ ಖಾತೆಯನ್ನು ಜನರು ಈ ಆ್ಯಪ್‌ಗಳಲ್ಲಿ ಲಿಂಕ್ ಮಾಡಬೇಕು. ಕೆಲವೇ ಕ್ಷಣಗಳಲ್ಲಿ ಒಬ್ಬರಿಂದ ಇನ್ನೊಬ್ಬರಿಗೆ ಇದರಿಂದ ಹಣ ಪಾವತಿ ಮಾಡಬಹುದು. ಜಾರಿಯಾದ 9 ವರ್ಷಗಳಲ್ಲೇ ಈ ಸಾಧನೆ ಮಾಡಿರುವುದು ಹೊಸ ಮೈಲಿಗಲ್ಲನ್ನು ಸೃಷ್ಟಿಸಿದೆ.


ಮುಂಬೈನಲ್ಲಿ Tesla ಮೊದಲ ಶೋ ರೂಮ್ ಆರಂಭ : ಟೆಸ್ಲಾ ಕಾರಿನ ವಿಶೇಷತೆಗಳೇನು..? ಬೆಲೆ ಎಷ್ಟು..?

ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭೇಟಿಯಾದ ಎಸ್.ಜೈ ಶಂಕರ್
S Jaishankar Meets Xi Jinping In China, First Since 2020 Galwan Clash
ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಎಸ್‌ಸಿಒ ಸದಸ್ಯ ರಾಷ್ಟ್ರಗಳ ಅವರ ಸಹವರ್ತಿಗಳು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಶಾಂಫ್ಟ್ ಸಹಕಾರ ಸಂಸ್ಥೆಯ (SCO- Shanghai Cooperation Organisation) ಸಮಾವೇಶದಲ್ಲಿ ಭಾಗವಹಿಸಲು ವಿದೇಶಾಂಗ ಸಚಿವರು ಎರಡು ದಿನಗಳ ಭೇಟಿಗಾಗಿ ಚೀನಾಕ್ಕೆ ತೆರಳಿದ್ದರು. ಜೂನ್ 2020 ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಯ ನಂತರ ದ್ವಿಪಕ್ಷೀಯ ಸಂಬಂಧಗಳು ತೀವ್ರ ಕುಸಿತ ಕಂಡ ನಂತರ ಇದು ಅವರ ಮೊದಲ ಚೀನಾ ಭೇಟಿಯಾಗಿದೆ.


114 ವರ್ಷದ ವಿಶ್ವದ ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ನಿಧನ
114-year-old marathon runner Fauja Singh dies in Punjab
ಮನೆಯ ಬಳಿ ವಾಕಿಂಗ್‌ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌(114) ಮೃತಪತ್ತಿದ್ದಾರೆ. ಘಟನೆ ಸೋಮವಾರ ನಡೆದಿದೆ. ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.

2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು. ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು. 1911ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದ ಸಿಂಗ್‌ ಕಿರಿಯ ಸಹೋದರನಾಗಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳ ಗೆದ್ದ ಸಾಧನೆ ಸಿಂಗ್‌ ಅವರದ್ದು. ಸಿಂಗ್‌ ಅವರ ಓಟದ ವೈಖರಿ, ಸಹಿಷ್ಣುತೆಯಿಂದಾಗಿ ಅವರನ್ನು ‘ಟರ್ಬನ್ಡ್ ಟೊರ್ನಾಡೊ’ ಎಂದೇ ಕರೆಯಲಾಗುತ್ತಿತ್ತು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಸಿಂಗ್‌ ಜ್ಯೋತಿ ಹಿಡಿದಿದ್ದರು.


ಕನ್ನಡದಲ್ಲಿ ಪ್ರಚಲಿತ ವಿದ್ಯಮಾನಗಳು (Current Affairs in Kannada 2025)
Current Affairs Kannada Quiz Test / ಪ್ರಚಲಿತ ಘಟನೆಗಳ ಕ್ವಿಜ್ ಟೆಸ್ಟ್

error: Content Copyright protected !!