Job AlertSpardha Times

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2,691 ಖಾಲಿ ಹುದ್ದೆಗಳ ನೇಮಕಾತಿ

Share With Friends

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (UBI) ಭಾರತದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿದೆ. ಇದು ಮುಂಬೈನಲ್ಲಿ ಪ್ರಧಾನ ಕಛೇರಿಯನ್ನು ಹೊಂದಿದೆ. ದೇಶಾದ್ಯಂತ 8,500 ಶಾಖೆಗಳು ಕಾರ್ಯನಿರ್ವಹಿಸುತ್ತಿವೆ. ಸುಮಾರು 75,000 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. ಸದ್ಯ ಈ ಬ್ಯಾಂಕಿನಲ್ಲಿ ಖಾಲಿ ಇರುವ 2,691 ತರಬೇತಿ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. ಕರ್ನಾಟಕದಲ್ಲಿ ಒಟ್ಟು 305 ಹುದ್ದೆಗಳ ಭರ್ತಿಗೆ ಕರೆ ನೀಡಿದೆ.

ಒಟ್ಟು ಖಾಲಿ ಹುದ್ದೆಗಳು:
ದೇಶಾದ್ಯಂತ ಒಟ್ಟು 2,691 ತರಬೇತಿ ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಕರ್ನಾಟಕದಲ್ಲಿ ಮಾತ್ರ 305 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಶೈಕ್ಷಣಿಕ ಅರ್ಹತೆ:
ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.

ವಯೋಮಿತಿ:
ವಯೋಮಿತಿಗೆ ಸಂಬಂಧಿಸಿದಂತೆ, 20 ರಿಂದ 28 ವರ್ಷ ವಯಸ್ಸಿನವರು ಅರ್ಜಿ ಸಲ್ಲಿಸಬಹುದು. ಸರ್ಕಾರದ ನಿಯಮಗಳ ಪ್ರಕಾರ, ವಯಸ್ಸಿನ ಮಿತಿಯಲ್ಲಿ ಕೆಳಕಂಡ ವರ್ಗದವರಿಗೆ ಸಡಿಲಿಕೆ ಇದೆ. ಎಸ್ಸಿ ಮತ್ತು ಎಸ್ಟಿ ವರ್ಗದವರಿಗೆ 5 ವರ್ಷಗಳು ಮತ್ತು ಒಬಿಸಿ ವರ್ಗದವರಿಗೆ 3 ವರ್ಷಗಳ ಸಡಿಲಿಕೆ ಇದೆ. ಸಾಮಾನ್ಯ ವರ್ಗದ ಅಂಗವಿಕಲರಿಗೆ ವಯೋಮಿತಿಯಲ್ಲಿ 10 ವರ್ಷಗಳವರೆಗೆ ವಿನಾಯಿತಿ ನೀಡಲಾಗಿದೆ.

ವೇತನಶ್ರೇಣಿ :
ಈ ತರಬೇತಿ ಹುದ್ದೆಗಳನ್ನು ಒಂದು ವರ್ಷದ ಒಪ್ಪಂದದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ತಿಂಗಳಿಗೆ 15,000 ರೂ. ಸಂಬಳ ನೀಡಲಾಗುವುದು.

ಅರ್ಜಿ ಶುಲ್ಕ:
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವಾಗಿ 800 ರೂ. ಪಾವತಿಸಬೇಕು. ಎಸ್ಸಿ/ಎಸ್ಟಿ ಅಭ್ಯರ್ಥಿಗಳಾಗಿದ್ದರೆ 600 ರೂ. ಪಾವತಿಸಬೇಕು. ಅಂಗವಿಕಲರಿಗೆ 400 ರೂ. ಶುಲ್ಕ ಇರುತ್ತದೆ.

ಆಯ್ಕೆ ವಿಧಾನ:
ಆನ್‌ಲೈನ್ ಮೂಲಕ ಪರೀಕ್ಷೆ ನಡೆಯಲಿದೆ. ಸ್ಥಳೀಯ ಭಾಷೆ ತಿಳಿದಿರಬೇಕು. ಅಂದರೆ, ಯಾವ ರಾಜ್ಯದ ಹುದ್ದೆಗಳಿಗೆ ಅರ್ಜಿ ಸಲ್ಲಿಸುತ್ತೀರೋ ಆ ರಾಜ್ಯದ ಸ್ಥಳೀಯ ಭಾಷೆ ತಿಳಿದಿರಬೇಕು.

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ ಅಭ್ಯರ್ಥಿಗಳು ಭಾರತ ಸರ್ಕಾರದ ತರಬೇತಿ ತಾಣವಾದ https://nats.education.gov.in ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಕೃತ ಪರೀಕ್ಷಾ ಅಧಿಸೂಚನೆಯನ್ನು ಓದಿ ತಿಳಿದುಕೊಳ್ಳಲು ಸೂಚಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 5 ಅಧಿಕೃತ ವೆಬ್‌ ಸೈಟ್‌ https://www.unionbankonline.co.in/