Spardha TimesUPSC EXAMS

ಐಎಎಸ್-ಕೆಎಎಸ್ ಪರೀಕ್ಷೆ ತಯಾರಿಯಲ್ಲಿದ್ದಿರಾ..? ಇಲ್ಲಿದೆ ಉತ್ತಮ ಅವಕಾಶ

Share With Friends

ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಿದೆ. ಈ ಪರೀಕ್ಷೆಗಳನ್ನು ಬರೆಯಲು 60 ದಿನಗಳ ತರಬೇತಿಯನ್ನು ಆನ್‌ ಲೈನ್ ಮೂಲಕ ನೀಡಲಾಗುತ್ತದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಈ ತರಬೇತಿಯನ್ನು ನೀಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ತರಬೇತಿಗಾಗಿ ಹೆಸರುಗಳನ್ನು ನೋಂದಣಿ ಮಾಡಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ನವೆಂಬರ್ 13ರೊಳಗಾಗಿ ತಮ್ಮ ಹೆಸರುಗಳನ್ನು ನೋಂದಾವಣಿ ಮಾಡಬೇಕು.

ಅಭ್ಯರ್ಥಿಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 0821-2515944 ಸಂಖ್ಯೆಗೆ ಕರೆ ಮಾಡಿ.

ಆಸಕ್ತರು ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಹೆಸರು ನೋಂದಾಯಿಸಬೇಕು. ಸಮಯ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆ.

Leave a Reply

Your email address will not be published. Required fields are marked *

error: Content Copyright protected !!