ತೆಲುಗು ಚಿತ್ರರಂಗದ ಹಾಸ್ಯ ನಟ ಫಿಶ್ ವೆಂಕಟ್ (Venkat Raj) ನಿಧನ
Veteran Telugu actor Venkat Raj passes away at 53
ಟಾಲಿವುಡ್ ಚಿತ್ರರಂಗ ಮತ್ತೋರ್ವ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡಿದೆ. ಹಿರಿಯ ನಟ ಕೋಟ ಶ್ರೀನಿವಾಸ ರಾವ್ ಅವರ ನಿಧನರಾಗಿ ವಾರ ಕಳೆಯುವ ಮುನ್ನವೇ ಮತ್ತೊಬ್ಬ ತೆಲುಗು ಚಿತ್ರರಂಗದ ಹಾಸ್ಯ ನಟ ಫಿಶ್ ವೆಂಕಟ್ (ವೆಂಕಟ್ ರಾಜ್/ Venkat Raj) ವಿಧಿವಶರಾದರು. ತೆಲುಗು ಸಿನಿಮಾಗಳಲ್ಲಿ ವಿಲನ್ ಪಾತ್ರ ಮಾಡಿ ಗಮನ ಸೆಳೆದಿದ್ದ ಫಿಶ್ ವೆಂಕಟ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಫಿಶ್ ವೆಂಕಟ್ ಅವರ ನಿಜವಾದ ಹೆಸರು ಮಂಗಳಂಪಲ್ಲಿ ವೆಂಕಟೇಶ್.
ಮುಶೀರಾಬಾದ್ ಮಾರುಕಟ್ಟೆಯಲ್ಲಿ ಮೀನು ವ್ಯಾಪಾರ ಮಾಡುವ ಮೂಲಕ ಅವರು ಫಿಶ್ ವೆಂಕಟ್ ಎಂದು ಗುರುತಿಸಿಕೊಂಡಿದ್ದರು. ಅವರು ಮುಶೀರಾಬಾದ್‌ನಲ್ಲಿ ವಾಸಿಸುತ್ತಿದ್ದರು. ನಟ ಶ್ರೀಹರಿ ಮೂಲಕ ಚಿತ್ರರಂಗಕ್ಕೆ ಪ್ರವೇಶಿಸಿದರು.
ನಿರ್ದೇಶಕ ವಿ.ವಿ. ವಿನಾಯಕ್ ಅವರನ್ನು ನಟನಾಗಿ ಪರಿಚಯಿಸಿದರು. ಫಿಶ್ ವೆಂಕಟ್ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಹಾಸ್ಯನಟ ಮತ್ತು ಪಾತ್ರ ಕಲಾವಿದನಾಗಿ ಚಲನಚಿತ್ರ ಪ್ರಿಯರನ್ನು ರಂಜಿಸಿದ್ದಾರೆ. ಅವರು ಆದಿ, ದಿಲ್, ಬನ್ನಿ, ಅತ್ತಾರಿಂಟಿಕಿ ದಾರೇದಿ, ಡಿಜೆ ಟಿಲ್ಲು ಮುಂತಾದ ಅನೇಕ ಹಿಟ್ ಚಿತ್ರಗಳಲ್ಲಿ ನಟಿಸಿ ಉತ್ತಮ ಮನ್ನಣೆ ಗಳಿಸಿದ್ದಾರೆ. ಅವರು ಎರಡು ತಮಿಳು ಸಿನಿಮಾ ಮಾಡಿದ್ದಾರೆ. ಕನ್ನಡದಲ್ಲಿ ಯಾವುದೇ ಸಿನಿಮಾ ಮಾಡಿಲ್ಲ.