ವಿಶ್ವದಾಖಲೆಯ ಶತಕ ಸಿಡಿಸಿ ವಿರಾಟ್ ಕೊಹ್ಲಿ (Virat Kohli) ಹೊಸ ದಾಖಾಲೆ
Virat Kohli breaks Sachin Tendulkar’s ODI century record
ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಕಿಂಗ್ ಕೊಹ್ಲಿ ಅಳಿಸಿ ಹಾಕಿದ್ದಾರೆ.
ರಾಂಚಿಯಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 120 ಎಸೆತಗಳಲ್ಲಿ 11 ಫೋರ್ ಹಾಗೂ 7 ಸಿಕ್ಸರ್ನೊಂದಿಗೆ ಬರೋಬ್ಬರಿ 135 ರನ್ ಚಚ್ಚಿದ್ದರು. ಈ ಭರ್ಜರಿ ಶತಕದೊಂದಿಗೆ ಒಂದೇ ಸ್ವರೂಪದಲ್ಲಿ ಅತ್ಯಧಿಕ ಸೆಂಚುರಿ ಸಿಡಿಸಿದ ವಿಶ್ವ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡರು.
ಅಂದರೆ ಏಕದಿನ, ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸ್ವರೂಪಗಳಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್ನಲ್ಲಿ ಬರೋಬ್ಬರಿ 51 ಶತಕ ಸಿಡಿಸಿ ಈ ದಾಖಲೆ ಬರೆದಿದ್ದರು. ಅಂದರೆ ಏಕದಿನ, ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸ್ವರೂಪಗಳಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್ನಲ್ಲಿ ಬರೋಬ್ಬರಿ 51 ಶತಕ ಸಿಡಿಸಿ ಈ ದಾಖಲೆ ಬರೆದಿದ್ದರು.
ವಿಶೇಷ ಎಂದರೆ ವಿರಾಟ್ ಕೊಹ್ಲಿ ಬಾರಿಸಿದ ಈ ಶತಕವು ಅಂತಾರಾಷ್ಟ್ರೀಯ ಕ್ರಿಕೆಟ್ನ 7000ನೇ ಸೆಂಚುರಿ. ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಈವರೆಗೆ ಒಟ್ಟು 7 ಸಾವಿರ ಶತಕಗಳು ಮೂಡಿಬಂದಿವೆ. ಇದರಲ್ಲಿ 7000ನೇ ಶತಕ ಬಾರಿಸಿದ್ದು ವಿರಾಟ್ ಕೊಹ್ಲಿ. ಹೀಗಾಗಿಯೇ ರಾಂಚಿಯಲ್ಲಿ ಕಿಂಗ್ ಕೊಹ್ಲಿ ಬಾರಿಸಿದ ಶತಕ ವಿಶೇಷ ದಾಖಲೆ ಪಟ್ಟಿಗೆ ಸೇರ್ಪಡೆಯಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್, ರೋಹಿತ್ ನಿರ್ಮಿಸಿದ 10 ದಾಖಲೆಗಳು
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಮೂಲಕ ಈ ಜೋಡಿ ಹಲವು ದಾಖಲೆಗಳನ್ನು ನಿರ್ಮಿಸಿತು. ಆಸ್ಟ್ರೇಲಿಯಾ ಪ್ರವಾಸದಲ್ಲಿ ನೀಡಿದ ಪ್ರದರ್ಶನವನ್ನೇ ಈ ಜೋಡಿ ಮುಂದುವರೆಸಿತು. ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿಯಲ್ಲಿ ರೊ-ಕೊ ಜೋಡಿ ನಿರ್ಮಿಸಿದ 10 ದಾಖಲೆಗಳ ಪಟ್ಟಿ ಇಲ್ಲಿದೆ.
1.ರೋಹಿತ್ ಶರ್ಮಾ ರಾಂಚಿಯಲ್ಲಿ ಮೂರು ಸಿಕ್ಸರ್ ಬಾರಿಸುವ ಮೂಲಕ ದೊಡ್ಡ ದಾಖಲೆಯನ್ನು ನಿರ್ಮಿಸದರು. ಏಕದಿನ ಕ್ರಿಕೆಟ್‌ನಲ್ಲಿ ರೋಹಿತ್ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆಯನ್ನು ನಿರ್ಮಿಸಿದರು. ಈ ಮೂಲಕ ಶಾಹಿದ್ ಅಫ್ರೀದಿ ಅವರ ದಾಖಲೆ ಅಳಿಸಿ ಹಾಕಿದರು. ಶಾಹಿದ್ ಅಫ್ರೀದಿ ಏಕದಿನ ಕ್ರಿಕೆಟ್‌ನಲ್ಲಿ 351 ಸಿಕ್ಸರ್ ಬಾರಿಸಿದರು.
2.ವಿರಾಟ್ ಕೊಹ್ಲಿ ಒಂದೇ ಮಾದರಿಯಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಬಾರಿಸುವ ಮೂಲಕ 52ನೇ ಶತಕ ಸಿಡಿಸಿದರು. ಇದು ಏಕದಿನ ಫಾರ್ಮೆಟ್‌ನಲ್ಲಿ ವಿಶ್ವದಾಖಲೆ ಆಗಿದೆ. ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 51 ಶತಕ ಬಾರಿಸಿದ್ದರು.
3.ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜೋಡಿ ಭಾರತದ ಪರ ಅತಿ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಇದಕ್ಕೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. ಇವರಿಬ್ಬರು ಭಾರತದ ಪರ 391 ಪಂದ್ಯಗಳನ್ನು ಒಟ್ಟಿಗೆ ಆಡಿದ್ದಾರೆ.
4.ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ನಲ್ಲಿ 52ಕ್ಕೂ ಹೆಚ್ಚು ಬಾರಿ 50 ಕ್ಕೂ ಹೆಚ್ಚು ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಈ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ಸೌರವ್ ಗಂಗೂಲಿ ಇದ್ದು ಇವರಿಬ್ಬರು 83 ಐವತ್ತು ಪ್ಲಸ್ ಜೊತೆಯಾಟವಾಡಿದ್ದಾರೆ.
5.ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್ ಶತಕ ಬಾರಿಸುತ್ತಿದ್ದಂತೆ ಮತ್ತೊಂದು ದಾಖಲೆ ನಿರ್ಮಿಸಿದರು. ಈ ಶತಕ ವಿಶ್ವ ಕ್ರಿಕೆಟ್‌ನಲ್ಲಿ ನಿರ್ಮಾಣವಾದ 7 ಸಾವಿರನೇ ಶತಕವಾಗಿದೆ.
6.ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಪರ ಅತಿ ಹೆಚ್ಚು ಶತಕ ಬಾರಿಸಿದ ದಾಖಲೆಯನ್ನು ವಿರಾಟ್ ಕೊಹ್ಲಿ ನಿರ್ಮಿಸಿದರು. ಇದು ಹರಿಣಗಳ ವಿರುದ್ಧ ಕೊಹ್ಲಿ ಸಿಡಿಸಿದ 6ನೇ ಶತಕವಾಗಿದೆ. ಇದಕ್ಕೂ ಮೊದಲು ಈ ದಾಖಲೆ ಸಚಿನ್ ತೆಂಡೂಲ್ಕರ್ (5 ಶತಕ) ಹೆಸರಿನಲ್ಲಿತ್ತು.
7.ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಜೋಡಿ 20ನೇ ಬಾರಿಗೆ ಏಕದಿನ ಕ್ರಿಕೆಟ್‌ನಲ್ಲಿ ಶತಕದ ಜೊತೆಯಾಟವನ್ನು ಆಡಿ ದಾಖಲೆ ನಿರ್ಮಿಸಿದರು.
8.ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 2 ಸಾವಿರ ರನ್ ಪೂರ್ಣಗೊಳಿಸಿದರು. ಇವರು ಸದ್ಯ 2030 ರನ್ ಸಿಡಿಸಿದ್ದಾರೆ.
9.ರಾಂಚಿಯಲ್ಲಿ ಆಡಿದ 5 ಪಂದ್ಯಗಳಲ್ಲಿ 3 ಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ದೊಡ್ಡ ದಾಖಲೆಯನ್ನು ನಿರ್ಮಿಸಿದರು. ಒಂದೇ ಮೈದಾನದಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಈಗ ವಿರಾಟ್ ಅವರು ಸಚಿನ್ ಅವರೊಂದಿಗೆ ಜಂಟಿ ಅಗ್ರ ಸ್ಥಾನ ಪಡೆದಿದ್ದಾರೆ. ಸಚಿನ್ ವಡೋಧರಾದಲ್ಲಿ ಆಡಿದ 7 ಪಂದ್ಯಗಳಲ್ಲಿ 3 ಶತಕ ಸಿಡಿಸಿದ್ದರು.
10.ರಾಂಚಿಯಲ್ಲಿ ನಡೆದ ಪಂದ್ಯದಲ್ಲಿ ಭಾರತ ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗೆ 349 ರನ್ ಸಿಡಿಸುತ್ತಿದ್ದಂತೆ ಈ ಮೈದಾನದಲ್ಲಿ ಕಲೆ ಹಾಕಿದ ದೊಡ್ಡ ಮೊತ್ತ ಎಂಬ ದಾಖಲೆ ನಿರ್ಮಿಸಿತು. ಇದಕ್ಕೂ ಮೊದಲು 2019ರಲ್ಲಿ ದಕ್ಷಿಣ ಆಫ್ರಿಕಾ 5 ವಿಕೆಟ್‌ಗೆ 313 ರನ್ ಸಿಡಿಸಿತ್ತು.
- ಸಂವಿಧಾನ ಕುರಿತು ನೆನಪಿನಲ್ಲಿಟ್ಟುಕೊಳ್ಳಬೇಕಾದ ಸಾಮಾನ್ಯ ಅಂಶಗಳು (Constitution of India)
- ಭಾರತದ ಪ್ರಧಾನ ಮಂತ್ರಿ(Prime Minister of India)ಯನ್ನು ಯಾರು ನೇಮಿಸುತ್ತಾರೆ..? ಪ್ರಕ್ರಿಯೆ ಏನು..?
- ಭಾರತೀಯ ಕ್ರಿಕೆಟ್ ಇತಿಹಾಸದಲ್ಲೇ 2ನೇ ಅತಿ ವೇಗದ ಅರ್ಧಶತಕ ಸಿಡಿಸಿದ ಹಾರ್ದಿಕ್ ಪಾಂಡ್ಯ (Hardik Pandya)
- ಮಲಯಾಳಂ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ
- ಬಾಹ್ಯಾಕಾಶಕ್ಕೆ ತೆರಳಲಿರುವ ಮೊದಲ ವೀಲ್ಚೇರ್ ಗಗನಯಾತ್ರಿಯಾಗಿ ಮೈಕೆಲಾ ಬೆಂಥೌಸ್ (Michaela Benthaus)

