ಭಾರತದ ಸಂವಿಧಾನದಲ್ಲಿ ‘ವಿಪ್’ (WHIP) ಎಂದರೇನು..? ಎಷ್ಟು ವಿಧಗಳು..?
ವಿಪ್ ಎಂಬುದು ಪಕ್ಷಗಳು ತಮ್ಮ ಜನಪ್ರತಿನಿಧಿಗಳಿಗೆ ನೀಡುವ ಸೂಚನೆಯಾಗಿದೆ. ರಾಜ್ಯಸಭಾ ಚುನಾವಣೆ, ಪರಿಷತ್ ಚುನಾವಣೆ, ಅವಿಶ್ವಾಸ ನಿರ್ಣಯ ಮೊದಲಾದ ಸಂದರ್ಭಗಳಲ್ಲಿ ಮತದಾನ ಪ್ರಕ್ರಿಯೆಯನ್ನು ಪಾಲ್ಗೊಳ್ಳಲು ತಮ್ಮ ಜನಪ್ರತಿನಿಧಿಗಳಿಗೆ ಪಕ್ಷಗಳು ವಿಪ್ ಜಾರಿ ಮಾಡುತ್ತವೆ. ಯಾವುದೇ ಒಂದು ಪಕ್ಷ ತನ್ನ ಶಿಸ್ತನ್ನು ಕಾಪಾಡಿಕೊಳ್ಳಲು ವಿಪ್ ಅನ್ನು ಅಸ್ತ್ರದಂತೆ ಬಳಸುತ್ತದೆ. ಬಹುಮತ ಸಾಬೀತುಪಡಿಸುವ ಸಂದರ್ಭದಲ್ಲಿ ವಿಧಾನಸಭಾ ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗಲು, ಪಕ್ಷದ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಲು ವಿಪ್ ಮೂಲಕ ಪಕ್ಷದ ಶಾಸಕರಿಗೆ ಸೂಚಿಸಲಾಗುತ್ತದೆ.
ಪಕ್ಷದ ಮುಖ್ಯ ಸಚೇತಕರು ವಿಪ್ ಜಾರಿಗೊಳಿಸಿ ಆದೇಶ ಹೊರಡಿಸುತ್ತಾರೆ. ವಿಪ್ ಜಾರಿಯಾದ ನಂತರ ಅದನ್ನು ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಧಿಕಾರವನ್ನು ಪಕ್ಷ ಹೊಂದಿರುತ್ತದೆ. ಪಕ್ಷದ ‘ಬಿ’ ಫಾರಂ ಪಡೆದು ಪಕ್ಷದ ಚಿಹ್ನೆಯಡಿ ಶಾಸಕ ಅಥವಾ ಸಂಸದರಾಗಿ ಆಯ್ಕೆಯಾದವರು ಇದನ್ನು ಪಾಲಿಸಬೇಕು. ಇಲ್ಲದಿದ್ದರೆ ಪಕ್ಷಾಂತರ ನಿಷೇಧ ಕಾಯಿದೆಯಡಿ ಸದಸ್ಯತ್ವದಿಂದ ಅನರ್ಹಗೊಳ್ಳುತ್ತಾರೆ.
ಶಿಕ್ಷಣಕ್ಕೆ ಸಂಬಂಧಿಸಿದ ದೇಶದ ಪ್ರಮುಖ ಆಯೋಗ ಮತ್ತು ಸಮಿತಿಗಳು
✦ ವಿಪ್ನಲ್ಲಿ ಮೂರು ವಿಧಗಳು :
1.ಸಿಂಗಲ್ ಲೈನ್/ ಒನ್ಲೈನ್, ಡಬಲ್ ಲೈನ್ ಮತ್ತು ಥ್ರೀ ಲೈನ್ ವಿಪ್
2.ಒನ್ಲೈನ್ ವಿಪ್: ವಿಶ್ವಾಸ ಮತ ಸಂದರ್ಭದಲ್ಲಿ ಸರಕಾರದ ಪರ ಹಾಗೂ ಪಕ್ಷದ ಆದೇಶ ಪಾಲನೆಗೆ ನೀಡುವ ವಿಪ್ ಅನ್ನು ಒನ್ಲೈನ್ ವಿಪ್ ಎಂದು ಕರೆಯಲಾಗುತ್ತದೆ.
3.ಟೂ ಲೈನ್ ವಿಪ್: ಬಜೆಟ್ ಅಥವಾ ಪ್ರಮುಖ ವಿಧೇಯಕ ಮಂಡನೆ ಮತ್ತು ಅನುಮೋದನೆ ಸಮಯದಲ್ಲಿ ಜಾರಿ ಮಾಡಲಾಗುವ ವಿಪ್ ಅನ್ನು ಟೂ ಲೈನ್ ವಿಪ್ ಎಂದು ಕರೆಯಲಾಗುತ್ತದೆ.
4.ತ್ರೀ ಲೈನ್ ವಿಪ್: ಅಧಿವೇಶನದಲ್ಲಿ ಹಾಜರಾತಿ, ವಿತ್ತೀಯ ಕಾರ್ಯಕಲಾಪದಲ್ಲಿ ಪಾಲ್ಗೊಳ್ಳುವಿಕೆ, ಬಜೆಟ್, ಅನುಮೋದನೆ ಸಂದರ್ಭದಲ್ಲಿ ಸರಕಾರದ ಪರ ಮತ ಚಲಾಯಿಸುವಿಕೆಗೆ ನೀಡುವ ವಿಪ್.
✦ ವಿಪ್ ಕುರಿತು ಮಹತ್ವದ ವಿಷಯಗಳು:
ಸಿಂಗಲ್ ಲೈನ್ ವಿಪ್ನಲ್ಲಿ ಮತದಾನದ ದಿನಾಂಕ ಮೊದಲಾದ ವಿವರವನ್ನು ನೋಟೀಸ್ ಮೂಲಕ ನೀಡಲಾಗುತ್ತದೆ. ಇದರಲ್ಲಿ ಜನಪ್ರತಿನಿಧಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವುದು ಕಡ್ಡಾಯವೇನೂ ಇರುವುದಿಲ್ಲ.
ಡಬಲ್ ಲೈನ್ ವಿಪ್ನಲ್ಲಿ ಮತದಾನ ಮಾಡಲು ಪಕ್ಷವು ಸ್ವಲ್ಪಮಟ್ಟಿಗೆ ಕಡ್ಡಾಯ ಮಾಡಿರುತ್ತದೆ. ಸರಿಯಾದ ಕಾರಣ ಕೊಟ್ಟು ಮತದಾನದಿಂದ ದೂರು ಉಳಿಯುವ ಸ್ವಾತಂತ್ರ್ಯವನ್ನ ಕೊಟ್ಟಿರಲಾಗುತ್ತದೆ. ಇನ್ನು, ಮೂರನೇಯದಾದ ಥ್ರೀಲೈನ್ ವಿಪ್ನಲ್ಲಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟಿರಲಾಗುತ್ತದೆ.
ಥ್ರೀಲೈನ್ ವಿಪ್ ಪಡೆದವರು ಮತದಾನ ಮಾಡಲಿಲ್ಲವೆಂದರೆ ಪಕ್ಷದಿಂದಲೇ ಅಮಾನತಾಗುವ ಸಾಧ್ಯತೆ ಇರುತ್ತದೆ. ಪಕ್ಷಗಳು ಕೊಡುವ ವಿಪ್ ಸಾಮಾನ್ಯವಾಗಿ ಥ್ರೀ ಲೈನ್ ವಿಪ್ ಆಗಿರುತ್ತದೆ. ಕಾಯಿದೆ ಪ್ರಕಾರ ಯಾವುದೇ ಶಾಸಕ, ಸಂಸದ ತನ್ನ ಪಕ್ಷದ ವಿಪ್ ಉಲ್ಲಂಘಿಸಿ ಮತ ಚಲಾಯಿಸಿದ ಬಳಿಕವಷ್ಟೇ ಸ್ಪೀಕರ್ ಕ್ರಮ ಕೈಗೊಳ್ಳಬಹುದು.
✦ ವಿಪ್ ಯಾವಾಗ ಪ್ರಯೋಗಿಸಬಹುದು?
ಇದು ಯಾವ ಸದಸ್ಯರು, ಶಾಸಕರ ಮೇಲೆ ವಿಶ್ವಾಸ ಇರೋದಿಲ್ವೋ, ಪಕ್ಷದ ವಿರುದ್ಧವಾಗಿ ಕೆಲಸ ಮಾಡ್ತಿದ್ದಾರೆ ಅಂತಾ ಕಂಡುಬರುತ್ತೋ, ಅಂತಹ ಟೈಮ್ನಲ್ಲಿ ವಿಪ್ ಜಾರಿ ಮಾಡಲಾಗುತ್ತದೆ. ಪಕ್ಷಾಂತರ ಕಾಯಿದೆ ಅಡಿ ಅವರ ಸದಸ್ಯತ್ವ ರದ್ದಾದರೆ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲಲು ಬರುವುದಿಲ್ಲ.