Current AffairsLatest Updates

ಸುದೀರ್ಘ ವಾಯುಮಾರ್ಗ ಕ್ರಮಿಸಿ ಇತಿಹಾಸ ಬರೆದ ಭಾರತೀಯ ಮಹಿಳಾ ಪೈಲಟ್‌ಗಳು

Share With Friends

ಸೇನೆಗಳಲ್ಲಿ ಮಹಿಳೆಯರು ಸಾರಥ್ಯ ವಹಿಸುತ್ತಾ ಹಲವಾರು ಸಾಧನೆಗಳನ್ನು ಮಾಡುತ್ತಿರುವುದು ಇತ್ತೀಚಿನ ಬೆಳವಣಿಗೆ. ಕೇವಲ ಪುರುಷರಿಗಷ್ಟೇ ಸಾಧ್ಯ ಎಂದುಕೊಂಡಿದ್ದ ಸೇನೆಯೆಂಬ ಕೋಟೆಯನ್ನು ಭೇದಿಸಿ ಅಲ್ಲಿ ಮಹಿಳೆಯರು ನುಗ್ಗಿ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ ತಾಜಾ ಸಾಕ್ಷಿ ಎಂಬಂತೆ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ನಾಲ್ವರು ಮಹಿಳಾ ಪೈಲಟ್‌ಳು, ಸ್ಯಾನ್‌ ಫ್ರಾನ್ಸಿಸ್ಕೊ- ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ನಿರ್ವಹಿದ್ದಾರೆ. ಆ ಮೂಲಕ ಸೋಮವಾರ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಪೈಲಟ್‌ಗಳಾಗಿರುವ ಕ್ಯಾಪ್ಟನ್ ಜೋಯಾ ಅಗರ್‌ವಾಲ್‌, ಕ್ಯಾಪ್ಟನ್ ಪಾಪಗರಿ ತನ್ಮೈ, ಕ್ಯಾಪ್ಟನ್ ಆಕಾಶಾ ಸೋನಾವೇರ್ ಮತ್ತು ಕ್ಯಾಪ್ಟನ್ ಶಿವಾನಿ ಮನ್ಹಾಸ್ ಅವರನ್ನೊಳಗೊಂಡ ತಂಡವು

ಸ್ಯಾನ್‌ ಫ್ರಾನ್ಸಿಸ್ಕೊ- ಬೆಂಗಳೂರು ನಡುವಣ ವಿಶ್ವದ ಅತೀ ದೀರ್ಘ ವಾಯು ಮಾರ್ಗದ ವಿಮಾನಯಾನವನ್ನು ಸಂಪೂರ್ಣವಾಗಿ ನಿರ್ವಹಿಸುವ ಮೂಲಕ ಹೊಸ ಇತಿಹಾಸ ದಾಖಲಿಸಿದ್ದಾರೆ. ಸ್ಯಾನ್‌ ಫ್ರಾನ್ಸಿಸ್ಕೊ – ಬೆಂಗಳೂರು ನಡುವಿನ ಮಾರ್ಗವು ವಿಶ್ವದ ಅತ್ಯಂತ ದೀರ್ಘ ವಾಯು ಮಾರ್ಗವಾಗಿದ್ದು, ಈ ಮಾರ್ಗದಲ್ಲಿ ಸಂಚರಿಸುವ ವಿಮಾನಗಳು ಭೂಮಿಯ ಮೇಲಿನ ದುರ್ಗಮ ಪ್ರದೇಶ ಎನ್ನುವ ಉತ್ತರ ಧ್ರುವವನ್ನು ದಾಟಿ ಬರುತ್ತವೆ.

ಮಹಿಳಾ ಪೈಲಟ್‌ಗಳ ನಿರ್ವಹಣೆಯ ವಿಮಾನವು ಉತ್ತರ ಧ್ರುವದ ಮೇಲೆ ಹಾರಿ, ಅಟ್ಲಾಂಟಿಕ್ ಮಾರ್ಗದ ಮೂಲಕ, 16,000 ಕಿ.ಮೀ ದೂರವನ್ನು ಕ್ರಮಿಸಿ ಬೆಂಗಳೂರಿಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ರಾತ್ರಿ 8.30ಕ್ಕೆ ಅಮೆರಿಕದ ಸ್ಯಾನ್‌ ಫ್ರಾನ್ಸಿಸ್ಕೊದಿಂದ ಹೊರಟ ಎಐ 176 ವಿಮಾನ, ,ಸೋಮವಾರ ಮುಂಜಾನೆ 4ಗಂಟೆ ಸುಮಾರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯಿತು.

author avatar
spardhatimes
error: Content Copyright protected !!