GKImpotent DaysSpardha Times

‘ವಿಶ್ವ ಗ್ರಾಹಕರ ದಿನ’ ಆಚರಣೆ ಆರಂಭವಾಗಿದ್ದು ಹೇಗೆ..?

Share With Friends

ಪ್ರತಿ ವರ್ಷ ಗ್ರಾಹಕರ ಹಕ್ಕುಗಳ ಮಹತ್ವವನ್ನು ಸಾರುವ ನಿಟ್ಟಿನಲ್ಲಿ ಜಾಗತಿಕವಾಗಿ ವಿಶ್ವ ಗ್ರಾಹಕರ ದಿನವನ್ನು ಆಚರಿಸಲಾಗುತ್ತದೆ.ಈ ಹಿನ್ನಲೆಯಲ್ಲಿ ಪ್ರತಿ ವರ್ಷ ಮಾರ್ಚ್ 15 ರಂದು ವಿಶ್ವ ಗ್ರಾಹಕ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. ಗ್ರಾಹಕರು ಸಾಮಾಜಿಕ ಅನ್ಯಾಯಗಳ ವಿರುದ್ಧ ಹೋರಾಡಲು ಸಾಧ್ಯವಾಗುವಂತೆ ಗ್ರಾಹಕ ಹಕ್ಕುಗಳು ಮತ್ತು ಅಗತ್ಯಗಳ ಬಗ್ಗೆ ಜಾಗತಿಕ ಜಾಗೃತಿ ಮೂಡಿಸುವ ದಿನವಾಗಿ ಆಚರಿಸಲಾಗುತ್ತದೆ.

# ಇತಿಹಾಸ :
ಮಾರ್ಚ್ 15 ನ್ನು ಪ್ರತಿ ವರ್ಷವೂ ‘ವಿಶ್ವ ಗ್ರಾಹಕರ ದಿನ’ವನ್ನಾಗಿ ಆಚರಿಸಲಾಗುತ್ತದೆ. ಅಮೆರಿಕ ಕಾಂಗ್ರೆಸ್ ನಲ್ಲಿ 1962 ಮಾರ್ಚ್ 15 ರಂದು ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ಈ ದಿನವನ್ನು ಆಚರಿಸಲು ಆಗಿನ ಅಧ್ಯಕ್ಷ ಜಾನ್ ಎಫ್.ಕೆನಡಿ ಮುನ್ನುಡಿ ಬರೆದರು. ಆದರೆ ಅಧಿಕೃತವಾಗಿ ಗ್ರಾಹಕರ ದಿನ ಆಚರಣೆಯಾಗುವುದಕ್ಕೆ ಶುರುವಾಗಿದ್ದು 1983 ಮಾರ್ಚ್ 15 ರಿಂದ. ಪ್ರತಿ ವರ್ಷವೂ ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ವಿನೂತನ ಥೀಮ್ ಇಟ್ಟುಕೊಂಡು, ಈ ದಿನ ಆಚರಿಸಲಾಗುತ್ತದೆ. ಭಾರತದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನು ಪ್ರತಿವರ್ಷ ಡಿಸೆಂಬರ್ .24 ರಂದು ಆಚರಿಸಲಾಗುತ್ತದೆ.

# ವಿಶ್ವ ಗ್ರಾಹಕ ಹಕ್ಕುಗಳ ದಿನ 2021 ರ ಧ್ಯೇಯ
ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣದ ಹೋರಾಟದಲ್ಲಿ ಎಲ್ಲಾ ಗ್ರಾಹಕರನ್ನು ಒಟ್ಟುಗೂಡಿಸುವುದು ಈ ಬಾರಿಯ ವಿಶ್ವ ಗ್ರಾಹಕ ಹಕ್ಕುಗಳ ದಿನದ ವಿಷಯವಾಗಿದೆ. ಪ್ರಸ್ತುತ ಸಂದರ್ಭದಲ್ಲಿ ಪ್ಲಾಸ್ಟಿಕ್ ಮಾಲಿನ್ಯ ಬಿಕ್ಕಟ್ಟು ಒಂದು ಸಮಸ್ಯೆಯಾಗಿ ಕಾಡುತ್ತಿದೆ.ಪ್ಲಾಸ್ಟಿಕ್ ಅನೇಕ ವಿಧಗಳಲ್ಲಿ ಉಪಯುಕ್ತವಾಗಿದ್ದರೂ ಸಹ, ಅದರ ಬಳಕೆ ಮತ್ತು ಉತ್ಪಾದನೆಯು ಒಂದು ರೀತಿಯಲ್ಲಿ ಮಾರಕವಾಗಿ ಪರಿಣಮಿಸಿದೆ.ಆದ್ದರಿಂದ ಇದರ ನಿಯಂತ್ರಣಕ್ಕಾಗಿ ಈಗ ಎಲ್ಲ ಗ್ರಾಹಕರು ಮುಂದಾಗಬೇಕಾಗಿದೆ. ಈ ಹಿನ್ನಲೆಯಲ್ಲಿ ಪ್ರತಿಯೊಬ್ಬರೂ ಪ್ಲಾಸ್ಟಿಕ್ ಮಾಲಿನ್ಯವನ್ನು ನಿಭಾಯಿಸುವಲ್ಲಿ 7 ಸೂತ್ರಗಳನ್ನು ಪಾಲಿಸಬೇಕಾಗಿದೆ.ಅವುಗಳಲ್ಲಿ ಪ್ರಮುಖವಾಗಿ ಪುನರ್ವಿಮರ್ಶಿಸುವುದು, ನಿರಾಕರಿಸುವುದು, ಕಡಿಮೆ ಮಾಡುವುದು, ಮರುಬಳಕೆ ಮಾಡುವುದು, ಮರುಬಳಕೆ ಮಾಡುವುದು ಮತ್ತು ದುರಸ್ತಿ ಮಾಡುವುದು ಸೇರಿವೆ.

# ಗ್ರಾಹಕರ ಹಿತರಕ್ಷಣಾ ಕಾಯ್ದೆ, 1986 :
ಈ ಕಾಯ್ದೆಯನ್ನು ಗ್ರಾಹಕರ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 1986 ರಲ್ಲಿ ಜಾರಿಗೆ ತರಲಾಯಿತು. ಇದು ದೋಷಪೂರಿತ ವಸ್ತುಗಳು, ಅತೃಪ್ತಿದಾಯಕ ಸೇವೆಗಳು, ಅನುಚಿತ ವ್ಯಾಪಾರಿ ಪದ್ಧತಿಗಳು ಹಾಗೂ ಇತರೆ ಶೋಷಣೆಯ ವಿರುದ್ಧ ಪರಿಣಾಮಕಾರಿ ರಕ್ಷಣೆಯನ್ನು ಗ್ರಾಹಕರಿಗೆ ನೀಡುವ ಉದ್ದೇಶವನ್ನು ಹೊಂದಿದೆ.

ಈ ಕಾಯ್ದೆ ಸರಕು ಮತ್ತು ಸೇವೆಗಳ ವಿರುದ್ಧ ದೂರುಗಳಿದ್ದಲ್ಲಿ ಇತ್ಯರ್ಥಪಡಿಸಲು ಕಾಲಮಿತಿಯ ಷರತ್ತನ್ನು ವಿಧಿಸಿದೆ. ಈ ಕಾನೂನು ಶೀಘ್ರ ಹಾಗೂ ಮಿತವ್ಯಯಕಾರಿಯಾಗಿ ದೂರುಗಳನ್ನು ಇತ್ಯರ್ಥಪಡಿಸುವ ಉದ್ದೇಶವನ್ನು ಹೊಂದಿದೆ. ಗ್ರಾಹಕರ ಶೋಷಣೆಯ ವಿರುದ್ಧ ಕೇವಲ ಬಿಳಿಹಾಳೆಯಲ್ಲಿ ದೂರನ್ನು ಸಲ್ಲಿಸಬಹುದಾಗಿದೆ.

ಈ ಕಾನೂನಿನನ್ವಯ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗ್ರಾಹಕರ ದೂರುಗಳ ಪರಿಹಾರ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಹಾಗೂ ರಾಜ್ಯಮಟ್ಟದಲ್ಲಿ ಗ್ರಾಹಕ ಹಿತರಕ್ಷಣಾ ಮಂಡಳಿಗಳನ್ನು ಸ್ಥಾಪಿಸಲಾಗಿದೆ. ಈ ಮಂಡಳಿಗಳು ಗ್ರಾಹಕರಿಗೆ ಸೂಕ್ತ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಹಿತರಕ್ಷಣೆಯನ್ನು ಕಾಪಾಡುತ್ತಿದೆ.

error: Content Copyright protected !!