GKImpotent DaysSpardha Times

ಮಾರ್ಚ್ 15ನ್ನು ‘ವಿಶ್ವ ಗ್ರಾಹಕರ ದಿನ’ ಎಂದು ಆಚರಿಸಲು ಕಾರಣವೇನು ಗೊತ್ತೇ..?

Share With Friends

ಗ್ರಾಹಕನನ್ನು ಮಾರುಕಟ್ಟೆಯ ‘ರಾಜ’ನೆಂದು ಪರಿಗಣಿಸಿದ್ದರೂ ವ್ಯಾಪಾರಿ ಸಂಸ್ಥೆಗಳು ನಿರಂತರವಾಗಿ ಅನುಚಿತ ವ್ಯಾಪಾರಿ ಪದ್ಧತಿಗಳಿಂದ ಅವನನ್ನು ಶೋಷಿಸುತ್ತಿವೆ. ಗ್ರಾಹಕನಲ್ಲಿ ಜಾಗೃತಿಯನ್ನು ಮೂಡಿಸಲು ಪ್ರತಿ ವರ್ಷ ಮಾರ್ಚ್ 15 ರಂದು ಗ್ರಾಹಕನ ಹಕ್ಕುಗಳ ದಿನ ವೆಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ.  ಪ್ರತಿ ಅರ್ಥವ್ಯವಸ್ಥೆಯಲ್ಲೂ ಗ್ರಾಹಕ ಅತಂತ ಮಹತ್ವದ ಪಾತ್ರ ವಹಿಸುತ್ತಾನೆ.

ಮಾರ್ಚ್ 15 ನ್ನು ಪ್ರತಿ ವರ್ಷವೂ ‘ವಿಶ್ವ ಗ್ರಾಹಕರ ದಿನ’ವನ್ನಾಗಿ ಆಚರಿಸಲಾಗುತ್ತದೆ. ಅಮೆರಿಕ ಕಾಂಗ್ರೆಸ್ ನಲ್ಲಿ 1962 ಮಾರ್ಚ್ 15 ರಂದು ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ಈ ದಿನವನ್ನು ಆಚರಿಸಲು ಆಗಿನ ಅಧ್ಯಕ್ಷ ಜಾನ್ ಎಫ್.ಕೆನಡಿ ಮುನ್ನುಡಿ ಬರೆದರು. ಆದರೆ ಅಧಿಕೃತವಾಗಿ ಗ್ರಾಹಕರ ದಿನ ಆಚರಣೆಯಾಗುವುದಕ್ಕೆ ಶುರುವಾಗಿದ್ದು 1983 ಮಾರ್ಚ್ 15 ರಿಂದ. ಪ್ರತಿ ವರ್ಷವೂ ಗ್ರಾಹಕರ ಹಕ್ಕುಗಳ ರಕ್ಷಣೆಗಾಗಿ ವಿನೂತನ ಥೀಮ್ ಇಟ್ಟುಕೊಂಡು, ಈ ದಿನ ಆಚರಿಸಲಾಗುತ್ತದೆ. ಈ ವರ್ಷದ ಗ್ರಾಹಕ ದಿನದ ಥೀಮ್, ‘ಡಿಜಿಟಲ್ ಮಾರುಕಟ್ಟೆಯನ್ನು ಸುಂದರಗೊಳಿಸುವುದು'( ‘Making Digital Marketplaces Fairer’).

ಗ್ರಾಹಕರ ಹಿತರಕ್ಷಣಾ ಕಾಯ್ದೆ, 1986 (Consumer Protection Act, 1986)ಈ ಕಾಯ್ದೆಯನ್ನು ಗ್ರಾಹಕರ ಹಿತಾಸಕ್ತಿಯನ್ನು ಸಂರಕ್ಷಿಸುವ ಉದ್ದೇಶದಿಂದ 1986 ರಲ್ಲಿ ಜಾರಿಗೆ ತರಲಾಯಿತು. ಇದು ದೋಷಪೂರಿತ ವಸ್ತುಗಳು, ಅತೃಪ್ತಿದಾಯಕ ಸೇವೆಗಳು, ಅನುಚಿತ ವ್ಯಾಪಾರಿ ಪದ್ಧತಿಗಳು ಹಾಗೂ ಇತರೆ ಶೋಷಣೆಯ ವಿರುದ್ಧ ಪರಿಣಾಮಕಾರಿ ರಕ್ಷಣೆಯನ್ನು ಗ್ರಾಹಕರಿಗೆ ನೀಡುವ ಉದ್ದೇಶವನ್ನು ಹೊಂದಿದೆ.

ಭಾರತದ ಮೊದಲ AI ನಗರ ಎಲ್ಲಿ ನಿರ್ಮಾಣವಾಗಲಿದೆ..?

ಈ ಕಾಯ್ದೆ ಸರಕು ಮತ್ತು ಸೇವೆಗಳ ವಿರುದ್ಧ ದೂರುಗಳಿದ್ದಲ್ಲಿ ಇತ್ಯರ್ಥಪಡಿಸಲು ಕಾಲಮಿತಿಯ ಷರತ್ತನ್ನು ವಿಧಿಸಿದೆ. ಈ ಕಾನೂನು ಶೀಘ್ರ ಹಾಗೂ ಮಿತವ್ಯಯಕಾರಿಯಾಗಿ ದೂರುಗಳನ್ನು ಇತ್ಯರ್ಥಪಡಿಸುವ ಉದ್ದೇಶವನ್ನು ಹೊಂದಿದೆ. ಗ್ರಾಹಕರ ಶೋಷಣೆಯ ವಿರುದ್ಧ ಕೇವಲ ಬಿಳಿಹಾಳೆಯಲ್ಲಿ ದೂರನ್ನು ಸಲ್ಲಿಸಬಹುದಾಗಿದೆ.

ಈ ಕಾನೂನಿನನ್ವಯ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗ್ರಾಹಕರ ದೂರುಗಳ ಪರಿಹಾರ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ. ಹಾಗೂ ರಾಜ್ಯಮಟ್ಟದಲ್ಲಿ ಗ್ರಾಹಕ ಹಿತರಕ್ಷಣಾ ಮಂಡಳಿಗಳನ್ನು ಸ್ಥಾಪಿಸಲಾಗಿದೆ. ಈ ಮಂಡಳಿಗಳು ಗ್ರಾಹಕರಿಗೆ ಸೂಕ್ತ ಶಿಕ್ಷಣವನ್ನು ನೀಡುವುದರ ಮೂಲಕ ಅವರ ಹಿತರಕ್ಷಣೆಯನ್ನು ಕಾಪಾಡುತ್ತಿದೆ. ಗ್ರಾಹಕರ ಹಕ್ಕುಗಳು (Rights of Consumers): ಗ್ರಾಹಕರ ಹಿತರಕ್ಷಣಾ ಕಾಯ್ದೆಯ,1986 ಅನ್ವಯ ಕೆಳಕಂಡ ಹಕ್ಕುಗಳು ಗ್ರಾಹಕರಿಗೆ ದೊರೆಯುತ್ತಿವೆ.

 

Leave a Reply

Your email address will not be published. Required fields are marked *

error: Content Copyright protected !!