Job AlertSpardha Times

ಯಾದಗಿರಿ ಜಿಲ್ಲೆಯ ನ್ಯಾಯಾಲಯಗಳಲ್ಲಿ ಜವಾನ ಹುದ್ದೆಗಳ ನೇಮಕಾತಿ

Share With Friends

ಯಾದಗಿರಿ ಜಿಲ್ಲೆಯ, ವಿವಿಧ ನ್ಯಾಯಾಲಯಗಳಲ್ಲಿ ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ 21 ಜವಾನ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಯಾದಗಿರ ಜಿಲ್ಲಾ ವೆಬ್ಸೈಟ್ ನಲ್ಲಿ ಆನ್‌ಲೈನ್ ಮುಖಾಂತರ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಆನ್‌ಲೈನ್ ಹೊರತುಪಡಿಸಿ ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

✦ಅರ್ಜಿ ಸಲ್ಲಿಸಲು ಆರಂಭ ದಿನಾಂಕ : 16-01-2024
✦ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-02-2024
✦ಶುಲ್ಕ ಪಾವತಿಸಲು ಕಡೆಯ ದಿನಾಂಕ : 16-02-2024

ವೇತನಶ್ರೇಣಿ : 17000-400-18600-450-20400-500-22400-550-24600-600- 27000-650-28950 ಹಾಗು ವಿಶೇಷ ಭತ್ಯೆ
ವಿದ್ಯಾರ್ಹತೆ :
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪತ್ರ (driving license) ಐಚ್ಛಿಕವಾಗಿರುತ್ತದೆ. (Optional)

ಆಯ್ಕೆ ವಿಧಾನ:
ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10ರ ಅನುಪಾತದಲ್ಲಿ) ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.ಸಂದರ್ಶನವು 10 ಅಂಕಗಳನ್ನೊಳಗೊಂಡಿರುತ್ತದೆ.

ವಯೋಮಿತಿ:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ 35 ವರ್ಷ, 22ಎ , 2ಬಿ , 3ಎ , 3ಬಿ ಅಭ್ಯರ್ಥಿಗಳಿಗೆ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ

✦ಅರ್ಜಿಸಲ್ಲಿಸಲು ಮಾಹೆತ್ತು ಎಚ್ಚ್ಚಿನ ಮಾಹಿತಿಗಾಗಿ ವೆಬ್ಸೈಟ್ ; https://yadgir.dcourts.gov.in/
ಅಧಿಸೂಚನೆ Click Here:


ವಿಶ್ವಸಂಸ್ಥೆ ಕುರಿತ ಸಂಪೂರ್ಣ ಮಾಹಿತಿ : ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ

Leave a Reply

Your email address will not be published. Required fields are marked *

error: Content Copyright protected !!